ಜ.24 ರಂದು ಮಂಗಳೂರಿನಲ್ಲಿ ವಕೀಲರ ಸಮಾವೇಶ; ದೆಹಲಿಯಲ್ಲಿ ಕಾರ್ಯತಂತ್ರ

ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್, ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಬಾಬು, ಮುನಿಯಪ್ಪ ಮೊದಲಾದ ಕಾನೂನು ತಜ್ಞರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿತ್ತು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಸಂಸದ ಅಭಿಷೇಕ್ ಮನು ಸಿಂಘ್ವಿ ಹಾಗೂ ಸಲ್ಮಾನ್ ಖುರ್ಷಿದ್ ಅವರು ಕರ್ನಾಟಕದ ಈ ನಾಯಕರ ಜೊತೆ…

ಪಂಚಾಯಿತಿ ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸೌಲಭ್ಯವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಸಂಖ್ಯೆ ಗ್ರಾಅಪ 30 ಗ್ರಾಪಂಸಿ 2008, ದಿನಾಂಕ 31-10-2008ರ ಪ್ರಕಾರ, ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು 01-11-2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಆದರೆ ಈ ಆದೇಶದ ಅನುಷ್ಠಾನವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾನವಾಗಿ ನಡೆದಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರ ಈ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗಿದ್ದು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನಗೊಂಡಿರುವುದು ಕಂಡುಬಂದಿದೆ. ಇನ್ನು ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಈ ಸೌಲಭ್ಯವನ್ನು ಇನ್ನೂ ಜಾರಿಗೊಳಿಸಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ…

CSI ಪ್ರಕರಣದಲ್ಲಿ KGF ಪೊಲೀಸರು ಎಡವಿದರೇ? ಮುಖ್ಯ ಕಾರ್ಯದರ್ಶಿಗೆ ದೂರು

ಬೆಂಗಳೂರು: ದಕ್ಷಿಣ ಭಾರತದ ಪ್ರಭಾವಿ ಕ್ರೈಸ್ತ ಸಮುದಾಯವಾಗಿರುವ CSI-KCD ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. CSI ಬಿಷಪ್ ವಿರುದ್ದದ KGF ಬಿಷಪ್ ಕಾಟನ್ ಸ್ಕೂಲ್ ಗೋಲ್ಮಾಲ್ ಪ್ರಕರಣ ಬಗ್ಗೆ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಸಮುದಾಯದ ಪ್ರಮುಖರು ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಗೆ ದೂರೊಂದು ಸಲ್ಲಿಕೆಯಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ಅನುಕೂಲವಾಗುತ್ತಿದೆ ಎಂದಿರುವ ಒಂದು ಗುಂಪು ಇದೀಗ ಸಿಐಡಿ ತನಿಖೆಗೆ ಒತ್ತಾಯಿಸಿದೆ. CSI ಸದಸ್ಯ ಜೋಸೆಫ್ ಶಾಂತರಾಜ್ ಎಂಬವರು ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆಗೆ ಬುಧವಾರ (07.01.2026) ದೂರು ಸಲ್ಲಿಸಿದ್ದು, ಒಟ್ಟಾರೆ ಬೆಳವಣಿಗೆಗಳಿಗೆ ರೋಚಕತೆ ಸಿಕ್ಕಿದೆ. KGFನಲ್ಲಿ ಬಿಷಪ್ ಕಾಟನ್ ಶಾಲೆ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಪ್ರಾಧಿಕಾರ (KUDA) ದಲ್ಲಿ ಕಾನೂನು ಬಾಹಿರವಾಗಿ ಖಾತಾ ಮತ್ತು ಇತರ ಅನುಮತಿ ಪಡೆಯಲು ಸರ್ಕಾರಿ ಕಂದಾಯ ಭೂಮಿ ನಕಲಿ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿ ಸಂತ…

ಸರ್ಕಾರಿ ಶಾಲೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ: ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ನೇರ ನೇಮಕಾತಿ ಮತ್ತು ಮುಂಬಡ್ತಿ ಸಂಬಂಧಿಸಿದ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ 1978ರಿಂದ 2003ರವರೆಗೆ ರಾಜ್ಯದ ನಾಲ್ಕು ವಿಭಾಗೀಯ ಕಚೇರಿಗಳ ಸಹ ನಿರ್ದೇಶಕರಿಗೆ ಹಾಗೂ 2003ರಿಂದ ಬಳಿಕ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ನೇರ ನೇಮಕಾತಿ ಹಾಗೂ ಮುಂಬಡ್ತಿ ವಿವರಗಳನ್ನು ಆಯೋಗಕ್ಕೆ ಸಲ್ಲಿಸುವಂತೆ ಸರ್ಕಾರ ಈ ಹಿಂದೆ ಸೂಚನೆ ನೀಡಿತ್ತು. ಆದರೆ ಶಿರಸಿ, ಉಡುಪಿ, ರಾಮನಗರ ಮತ್ತು ಬೀದರ್ ಶೈಕ್ಷಣಿಕ ಜಿಲ್ಲೆಗಳು ಮಾತ್ರ ಇದುವರೆಗೆ ಮಾಹಿತಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಉಳಿದ ಶೈಕ್ಷಣಿಕ ಜಿಲ್ಲೆಗಳು ಹಾಗೂ ನಾಲ್ಕು ವಿಭಾಗೀಯ ಕಚೇರಿಗಳಿಂದ ಇನ್ನೂ ಯಾವುದೇ ಮಾಹಿತಿ ಸಲ್ಲಿಕೆಯಾಗಿಲ್ಲ. ಈ ಕುರಿತಾಗಿ ಸುಮಾರು 10 ತಿಂಗಳು ಕಳೆದರೂ ಸ್ಪಂದನೆ…

ದೇವರಾಜ ಅರಸುಗಿಂತಲೂ ಹೆಚ್ಚಿನ ಅವಧಿಗೆ ಸಿಎಂ; ಅವಕಾಶ ನೀಡಿದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ

ಬೆಂಗಳೂರು: ಡಿ.ದೇವರಾಜ ಅರಸು ಅವರಿಗಿಂತಲೂ ಹೆಚ್ಚಿನ ಅವಧಿಗೆ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಜ್ಯದ ಜನತೆಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ‘ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ’ ಎಂದಿದ್ದಾರೆ. ‘ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ…

ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ಮೂಡಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ,…

ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ನಿಧನ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ಮಂಗಳವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 3.30ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೆಎಸ್‌ಆರ್‌ಟಿಸಿ ಪ್ರತಿಷ್ಠಿತ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ

ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಪ್ರತಿಷ್ಠಿತ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡಾ 5 ರಿಂದ 15ರವರೆಗೆ ರಿಯಾಯಿತಿ ಘೋಷಿಸಿದೆ. ಈ ರಿಯಾಯಿತಿ ಜನವರಿ 5, 2026ರಿಂದ ಜಾರಿಗೆ ಬರಲಿದೆ. ಬೆಂಗಳೂರು–ಮಂಗಳೂರು, ಬೆಂಗಳೂರು–ಕುಂದಾಪುರ, ಉಡುಪಿ, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಪುತ್ತೂರು, ಮಡಿಕೇರಿ/ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ/ಸಾಗರ ಸೇರಿದಂತೆ ಚೆನ್ನೈ, ಹೈದರಾಬಾದ್/ಸಿಕಂದರಾಬಾದ್, ತಿರುಪತಿ, ಮಂತ್ರಾಲಯ, ಪುಣೆ/ಮುಂಬೈ, ವಿಜಯವಾಡ, ಎರ್ನಾಕುಲಂ, ಮದುರೈ, ಕೋಯಿಮತ್ತೂರು, ತಿರುಶೂರು ಸೇರಿದಂತೆ ಆಯ್ದ ಮಾರ್ಗಗಳಲ್ಲಿ ಈ ರಿಯಾಯಿತಿ ಅನ್ವಯವಾಗಲಿದೆ. ರಾಜಹಂಸ, ನಾನ್‌ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್ ಹಾಗೂ ಮಲ್ಟಿ ಆಕ್ಸಲ್ ಎಸಿ ಸ್ಲೀಪರ್ ಬಸ್‌ಗಳ ಪ್ರಯಾಣದರಗಳಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದು ನಿಗಮ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ksrtc.in ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ನಿಗಮ ಮನವಿ ಮಾಡಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.

ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ನಡೆದ ಸುದ್ದಿ ಹರಿದಾಡಿ, ಜೆಜೆ ನಗರ ಉದ್ವಿಗ್ನಗೊಂಡಿದೆ. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್​ ಬಳಿ ಮಾಲಾಧಾರಿಗಳು ಕೈಂಕರ್ಯದಲ್ಲಿ ನಿರತರಾಗಿದ್ದಾಗ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಓಂ ಶಕ್ತಿ ಮಾಲಾಧಾರಿ ಯುವತಿಯರ ತಲೆಗೆ ಕಲ್ಲೇಟು ತಗುಲಿ ಗಾಯಗಳಾಗಿವೆ. ಕೂಡಲೇ ಅವರನ್ನು ದಾಖಲಿಸಲಾಗಿದೆ ಎನ್ನಲಾಗಿದೆ. ಕಲ್ಲು ತೂರಾಟದ ಘಟನೆಯಿಂದ ಕೆರಳಿದ ಮಾಲಾಧಾರಿಗಳು ಜೆಜೆ ನಗರ ಪೊಲೀಸ್ ಸ್ಟೇಷನ್ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹರಸಾಹಸಪಟ್ಟ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆ ಸಂಬಂಧ ದೂರು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಪದ್ಮರಾಜ್ ಪೂಜಾರಿ ದೂರು; FIR

ಮಂಗಳೂರು: ಬಂದರು ನಗರಿ ಮಂಗಳೂರಿನ ಪ್ರಸಿದ್ಧ ಗರೋಡಿ ಕ್ಷೇತ್ರದ ಜಾತ್ರೋತ್ಸವ ಸಂದರ್ಭದಲ್ಲಿ ‘ಕೋಳಿ ಅಂಕ’ ನಡೆಸುವ ವಿಚಾರವಾಗಿ ಪರ–ವಿರೋಧ ಚರ್ಚೆಗಳು ತೀವ್ರಗೊಂಡಿವೆ. ಕೆಲವರು ಇದನ್ನು ಉತ್ಸವದ ಸಂದರ್ಭದ ಮನರಂಜನಾ ಆಟವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದನ್ನು ಜಾತ್ರಾ ಸಂಪ್ರದಾಯದ ಭಾಗವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳು ಹರಿದಾಡುತ್ತಿವೆ ಎಂದು ಆರೋಪಿಸಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯೂ ಆಗಿರುವ ಬಿಲ್ಲವ ಸಮುದಾಯದ ಮುಖಂಡ ಪದ್ಮರಾಜ್ ಪೂಜಾರಿ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “Kalyug Kalki Post” ಎಂಬ ಶೀರ್ಷಿಕೆಯಡಿ ಹರಿದಾಡುತ್ತಿರುವ ಒಂದು ಪೋಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿದ್ದು, ಸಮಾಜದಲ್ಲಿ ಅಶಾಂತಿ, ವೈಮನಸ್ಸು ಹಾಗೂ ಶಾಂತಿ ಭಂಗಕ್ಕೆ ಕಾರಣವಾಗುವ…