ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣದಲ್ಲಿ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿಯವರ ಗನ್‌ಮ್ಯಾನ್ ಹಾರಿಸಿದ ಗುಂಡು ತಗುಲಿಯೇ ಯುವಕ ರಾಜಶೇಖರ್ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ಬ್ರೂಸ್‌ಪೇಟೆ ಪೊಲೀಸರು ಐದು ಬಂದೂಕುಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಗುಂಡು ಹಾರಿಸಿದ ಮೂಲವನ್ನು ಪತ್ತೆಹಚ್ಚಲು ಫಾರೆನ್ಸಿಕ್ ಪರೀಕ್ಷೆಗೂ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಎರಡೂ ಗುಂಪುಗಳ ವಿರುದ್ಧ ಪೊಲೀಸರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಇದುವರೆಗೆ 50ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Month: January 2026
ವೈದ್ಯಕೀಯ ಶಿಕ್ಷಣ ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಸರ್ಕಾರದ ಕ್ರಮ
ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಮುಂದಾಗಿದ್ದಾರೆ. ತಮ್ಮ ಇಲಾಖೆ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿಮಾ ಭದ್ರತೆ ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬ ಸದಸ್ಯರು ವಿಮಾ ಹಣ ಪಡೆಯಲು ತಾಂತ್ರಿಕ ಸಮಸ್ಯೆಗಳು ಎದುರಾದ ಹಿನ್ನೆಲೆಯಲ್ಲಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲಾ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಟರ್ಮ್ ಇನ್ಶೂರೆನ್ಸ್ ಪಡೆಯಬೇಕೆಂದು…
ತ್ರಿಶೂರ್ ರೈಲು ನಿಲ್ದಾಣ ಬಳಿ ಭಾರೀ ಅಗ್ನಿ ಅವಘಡ: 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ
ತ್ರಿಶೂರ್: ತಮಿಳುನಾಡಿನ ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಿಲ್ದಾಣದ ಸಮೀಪದ ನಿಗದಿತ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಬಳಿಯಿರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಬೆಳಗ್ಗೆ ಸುಮಾರು 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಪ್ರತಿದಿನ ನೂರಾರು ಮೋಟಾರ್‌ಸೈಕಲ್‌ಗಳು ಮತ್ತು ಸ್ಕೂಟರ್‌ಗಳು ನಿಲ್ಲಿಸುವ ಈ ಪ್ರದೇಶದಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಿ ಭಾರೀ ಹಾನಿ ಉಂಟಾಗಿದೆ. ಪಾರ್ಕಿಂಗ್ ಪ್ರದೇಶದಲ್ಲಿದ್ದ ವಾಹನಗಳಲ್ಲಿ ಇಂಧನ ಇರುವುದರಿಂದ ಬೆಂಕಿ ತ್ವರಿತವಾಗಿ ಹರಡಿದ್ದು, ಕೆಲವೇ ನಿಮಿಷಗಳಲ್ಲಿ ದೊಡ್ಡ ಪ್ರಮಾಣದ ವಾಹನಗಳು ಹೊತ್ತಿ ಉರಿದಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಹಲವಾರು ದಳಗಳನ್ನು ನಿಯೋಜಿಸಿ ಸುಮಾರು ಅರ್ಧ ಗಂಟೆಗಳ ಶ್ರಮದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. #Kerala: A…
ಒಡಿಶಾ ಕಲ್ಲು ಗಣಿಯಲ್ಲಿ ಭೂ ಕುಸಿತ: ಹಲವು ಕಾರ್ಮಿಕರ ಸಾವಿನ ಶಂಕೆ
ಭುವನೇಶ್ವರ: ಒಡಿಶಾದ ಧೆಂಕಾನಾಲ್ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ವೇಳೆ ಭಾರಿ ಭೂ ಕುಸಿತ ಸಂಭವಿಸಿ ಹಲವು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಶನಿವಾರ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ, ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ. ಘಟನೆ ಸಮಯದಲ್ಲಿ ಗಣಿಯಲ್ಲಿ ಹಲವರು ಕಾರ್ಯನಿರತರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭೂ ಕುಸಿತದ ಮಾಹಿತಿ ದೊರಕಿದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯ ಮುಂದುವರಿದಿದೆ. ಘಟನೆಯ ಸಂಪೂರ್ಣ ವಿವರಗಳು ಮತ್ತು ಸಾವಿನ ನಿಖರ ಸಂಖ್ಯೆಯನ್ನು ಅಧಿಕಾರಿಗಳು ಇನ್ನಷ್ಟೇ ದೃಢಪಡಿಸಬೇಕಿದೆ.
2026ರ ಸಿಇಟಿ: ಜ.17ರಿಂದ ಅರ್ಜಿ ಸಲ್ಲಿಕೆ ಅವಕಾಶ
ಬೆಂಗಳೂರು: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಜನವರಿ 17ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ. ಈ ಬಾರಿಯ ಪ್ರಮುಖ ವಿಶೇಷತೆಯಾಗಿ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಹೆಸರು, ಜನ್ಮ ದಿನಾಂಕ, ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ಆಧಾರ್ ಅಥವಾ ಡಿಜಿಲಾಕರ್ ಮೂಲಕ ಪ್ರಾಮಾಣೀಕರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರಿಂದ ಅರ್ಜಿ ಸಲ್ಲಿಕೆಯ ವೇಳೆ ಹೆಸರು ಹಾಗೂ ಇತರೆ ಮಾಹಿತಿಗಳಲ್ಲಾಗುತ್ತಿದ್ದ ತಪ್ಪುಗಳನ್ನು ತಪ್ಪಿಸಬಹುದಾಗಿದೆ ಎಂದು KEA ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ವೃತ್ತಿಪರ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಕಳೆದ ಮೂರು ದಶಕಗಳಿಂದ ಸಿಇಟಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಹೆಗ್ಗಳಿಕೆ KEAಗೆ ಇದೆ ಎಂದು ಹೇಳಿದರು.…
ಕನಿಷ್ಠ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರಿಂದ ಶನಿವಾರ ಪ್ರತಿಭಟನೆ
ಬೆಂಗಳೂರು: ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬಾಕಿ ವೇತನ ಬಿಡುಗಡೆ ಮಾಡಬೇಕು ಹಾಗೂ ರೂ.10,000 ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಈ ಹೋರಾಟ ನಡೆಯಲಿದೆ ಎಂದು ಆಶಾ ಸಂಘಟನೆ ನಾಯಕಿ ಟಿ.ಸಿ.ರಮಾ ತಿಳಿಸಿದ್ದಾರೆ. ಆಶಾ, ಕಾರ್ಯಕರ್ತೆಯರಿಗೆ ನಾಲ್ಕೈದು ತಿಂಗಳಿಂದ ಬಾಕಿ ಇರುವ ವೇತನ ಮತ್ತು ಮಾನ್ಯ ಮುಖ್ಯಮಂತ್ರಿಗಳು 2025 ಜನವರಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕನಿಷ್ಠ ರೂ.10,000 ಏಪ್ರಿಲ್ 2025 ರಿಂದ ಅನ್ವಯವಾಗುತ್ತದೆ ಎಂದು ಭರವಸೆ ನೀಡಿದ್ದರು. ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈಎರಡು ಪ್ರಮುಖ ಬೇಡಿಕೆಯೊಂದಿಗೆ ಬೆಂಗಳೂರು ಜಿಲ್ಲಾಮಟ್ಟದ ಪ್ರತಿಭಟನೆ ನಡೆಯಲಿದೆ ಎಂದು ಟಿ.ಸಿ.ರಮಾ ತಿಳಿಸಿದ್ದಾರೆ.
ಬಳ್ಳಾರಿ ಘಟನೆ: ಗುಂಪುಘರ್ಷಣೆ ತನಿಖೆಗೆ ಸೂಚನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಹಾಗೂ ಗೋಲಿಬಾರ್ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬ ಯುವಕ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು, ಹೇಗೆ ಬಳಸಲಾಗಿದೆ ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಯತ್ನಿಸಿದ ವೇಳೆ ಅದು ತಪ್ಪಾಗಿ ರಾಜಶೇಖರ್‌ಗೆ ತಗುಲಿರುವ ಸಾಧ್ಯತೆಯೂ ಇದೆ. ಈ ಎಲ್ಲ ಅಂಶಗಳನ್ನು ತನಿಖೆಯ ಮೂಲಕ ಸ್ಪಷ್ಟಪಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ…
ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ: ಶಾಸಕ ಎಸ್. ಸುರೇಶ್ ಕುಮಾರ್ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ
ಬೆಂಗಳೂರು: ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ ಕೈಗೊಂಡಿರುವ ಶಾಸಕ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಹಾಗೂ ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಆರೋಗ್ಯ ಸಂಬಂಧಿತ ಹಿನ್ನಡೆಗಳನ್ನು ಮೀರಿಸಿ ಸುರೇಶ್ ಕುಮಾರ್ ಅವರು ಈ ಸಾಧನೆಯನ್ನು ಸಾಧಿಸಿರುವುದು ಅವರ ದೃಢ ಸಂಕಲ್ಪ ಮತ್ತು ಅಚಲ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಈ ಪ್ರಯತ್ನವು ಫಿಟ್ನೆಸ್ ಮತ್ತು ಆರೋಗ್ಯದ ಮಹತ್ವದ ಕುರಿತು ಮಹತ್ವದ ಸಂದೇಶವನ್ನು ನೀಡುತ್ತದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಮಂತ್ರಿ ಅವರು ದೂರವಾಣಿ ಮೂಲಕ ಶಾಸಕರೊಂದಿಗೆ ಮಾತನಾಡಿ, ಈ ವಿಶಿಷ್ಟ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಮುಂದಿನ ವರ್ಷ ಆಗಸ್ಟ್ 15ಕ್ಕೆ ದೇಶಕ್ಕೆ ಆಗಮಿಸಲಿದೆ ಮೊದಲ ಬುಲೆಟ್ ರೈಲು: ಅಶ್ವಿನಿ ವೈಷ್ಣವ್
ನವದೆಹಲಿ: 2027ರ ಆಗಸ್ಟ್ 15ರಂದು ಭಾರತಕ್ಕೆ ಮೊದಲ ಬುಲೆಟ್ ರೈಲು ಲಭ್ಯವಾಗುವ ಸಾಧ್ಯತೆ ಇದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ಮಾತನಾಡಿದ ಅವರು, “ಮುಂದಿನ ವರ್ಷ ಬುಲೆಟ್ ರೈಲು ಹಳಿಗಳ ಮೇಲೆ ಓಡಲು ಆರಂಭವಾಗಲಿದೆ. 2027ರ ಸ್ವಾತಂತ್ರ್ಯ ದಿನದಂದು ದೇಶದ ಮೊದಲ ಬುಲೆಟ್ ರೈಲಿನಲ್ಲಿ ಪ್ರಯಾಣಿಸುವ ಅವಕಾಶ ನಾಗರಿಕರಿಗೆ ದೊರೆಯಲಿದೆ” ಎಂದು ಹೇಳಿದರು. ವಂದೇ ಭಾರತ್ ಎಕ್ಸ್‌ಪ್ರೆಸ್ ಚೇರ್ ಕಾರ್ ರೈಲುಗಳು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಜನರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿವೆ ಎಂದು ವೈಷ್ಣವ್ ಹೇಳಿದರು. “ವಂದೇ ಭಾರತ್ ರೈಲುಗಳನ್ನು ಓಡಿಸಲು ಈಗ ದೇಶದಾದ್ಯಂತ ಬೇಡಿಕೆ ಬರುತ್ತಿದೆ. ಬಹುತೇಕ ಎಲ್ಲಾ ಸಂಸದರೂ ತಮ್ಮ ಕ್ಷೇತ್ರಕ್ಕೆ ವಂದೇ ಭಾರತ್ ರೈಲು ಬಯಸುತ್ತಿದ್ದಾರೆ. ಇದೇ ಮಾನದಂಡ, ಸೌಕರ್ಯ ಮತ್ತು ಸುರಕ್ಷತೆಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲುಗಳ ಮೂಲಕ ರಾತ್ರಿ ಪ್ರಯಾಣಕ್ಕೂ ಶೀಘ್ರದಲ್ಲೇ ಚಾಲನೆ…
ಕಲಬುರಗಿ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಆರೋಪ; ಶೀಘ್ರವೇ ಅಲೋಕ್ ಸ್ಥಳ ಪರಿಶೀಲನೆ
ಬೆಂಗಳೂರು: ಕಲಬುರಗಿ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ದೊರಕುತ್ತಿರುವ ಆರೋಪಗಳ ಕುರಿತು ಹಿನ್ನೆಲೆಯಲ್ಲಿ ಮಹಾನಿರ್ದೇಶಕ ಅಲೋಕ್ ಕುಮಾರ್ ಶೀಘ್ರವೇ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಗೃಹ ಸಚಿವ ಪರಮೇಶ್ವರ್, ಹೊಸ ಜೈಲು ಮಹಾನಿರ್ದೇಶಕ ಅಲೋಕ್ ಕುಮಾರ್ ಅವರಿಗೆ ಜೈಲುಗಳಿಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು. “ಅವರು ಶುಕ್ರವಾರ ಕಲಬುರಗಿ ಜೈಲಿಗೆ ಭೇಟಿ ನೀಡಲಿದ್ದು, ಬೆಳಗಾವಿ ಹಾಗೂ ಕಲಬುರಗಿಯ ಜೈಲುಗಳನ್ನು ವೈಯಕ್ತಿಕವಾಗಿ ಪರಿಶೀಲಿಸಲಿದ್ದಾರೆ,” ಎಂದರು. ರಾಜ್ಯದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಪರಮೇಶ್ವರ, “ಕೆಲವು ಸಂಘಟಿತ ತಂಡಗಳು ರಾಜ್ಯದ ಹೊರಗಿನಿಂದ ಬಂದಿರಬಹುದೆಂಬ ಅನುಮಾನವಿದೆ. ನಾವು ನಿಗಾ ಇಟ್ಟಿದ್ದು, ಪತ್ತೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿದರು.
