ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

ನವದೆಹಲಿ: ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳನ್ನು ತಿಳಿಸಿ, “ನಮ್ಮ ರಾಷ್ಟ್ರವನ್ನು ಮುನ್ನಡೆಸುವ ಸಂಶೋಧನೆ, ನಾವೀನ್ಯತೆ ಮತ್ತು ವೈಜ್ಞಾನಿಕ ಕುತೂಹಲದ ಮನೋಭಾವವನ್ನು ಇಂದು ನಾವು ಆಚರಿಸುತ್ತೇವೆ” ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ಹಂಚಿಕೊಂಡ ಅವರು, ಈ ದಿನವು ಸಿ.ವಿ. ರಾಮನ್ ಅವರ ‘ರಾಮನ್ ಪರಿಣಾಮ’ ಆವಿಷ್ಕಾರವನ್ನು ಸ್ಮರಿಸುವುದಾಗಿ ಹೇಳಿದರು. “ಈ ಪರಿವರ್ತನಾಶೀಲ ಆವಿಷ್ಕಾರ ಭಾರತೀಯ ಸಂಶೋಧನೆಯನ್ನು ಜಾಗತಿಕ ನಕ್ಷೆಯಲ್ಲಿ ದೃಢವಾಗಿ ಸ್ಥಾಪಿಸಿತು,” ಎಂದು ಉಲ್ಲೇಖಿಸಿದರು. ಯುವಕರನ್ನು ಸಬಲೀಕರಣಗೊಳಿಸುವುದು, ಸಂಶೋಧನಾ ಪರಿಸರ ವ್ಯವಸ್ಥೆಗಳನ್ನು ಬಲಪಡಿಸುವುದು ಹಾಗೂ ರಾಷ್ಟ್ರೀಯ ಅಭಿವೃದ್ಧಿ ಮತ್ತು ಜಾಗತಿಕ ಒಳಿತಿಗಾಗಿ ವಿಜ್ಞಾನ–ತಂತ್ರಜ್ಞಾನವನ್ನು ಬಳಸಿಕೊಳ್ಳುವ ಸಂಕಲ್ಪವನ್ನು ಪುನರುಚ್ಚರಿಸುತ್ತೇವೆ ಎಂದು ಪ್ರಧಾನಿ ತಿಳಿಸಿದ್ದಾರೆ. ಕೇಂದ್ರ ಸಚಿವರ ಶುಭಾಶಯ

ರಾಯಚೂರಲ್ಲಿ ಬೈಕ್-ಟ್ರಕ್ ಡಿಕ್ಕಿ: ಮೂವರು ಸಾವು

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬೈಕ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮೊಹಮ್ಮದ್ ಅಲಿ (24), ನೂರ್ ಮೊಹಮ್ಮದ್ (19) ಮತ್ತು ಫಯಾಜ್ (26) ಎಂದು ಗುರುತಿಸಲಾಗಿದೆ. ಇವರು ನಗರದ ಸುಖಾಣಿ ಕಾಲೋನಿಯ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ಸಾಗುತ್ತಿದ್ದ ಬೈಕ್‌ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ತೆರಳುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರೂ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಅದ್ಧೂರಿ ವಿವಾಹ

ಹೈದರಾಬಾದ್: ಸಾಂಪ್ರದಾಯಿಕ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ನಟಿ ರಶ್ಮಿಕಾ ಮಂದಣ್ಣ ತಮ್ಮ ‘ಈಗ ಪತಿ’ ಎಂದು ಹೇಳಿ ನಟ ವಿಜಯ್ ದೇವರಕೊಂಡ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮೊದಲ ಸೆಟ್ ಫೋಟೋಗಳನ್ನು ಹಂಚಿಕೊಂಡ ರಶ್ಮಿಕಾ, ವಿಜಯ್ ತಮ್ಮ ಜೀವನದಲ್ಲಿ ಎಷ್ಟು ಮಹತ್ವದ ಪಾತ್ರ ವಹಿಸಿದ್ದಾರೆ ಎಂಬುದನ್ನು ಮನಮುಟ್ಟುವ ರೀತಿ ವಿವರಿಸಿದ್ದಾರೆ. ನಿಜವಾದ ಪ್ರೀತಿ ಹೇಗಿರುತ್ತದೆ, ಶಾಂತಿಯಿಂದ ಬದುಕುವುದು ಹೇಗೆ ಎಂಬುದನ್ನು ತಮಗೆ ಕಲಿಸಿದ ವ್ಯಕ್ತಿ ವಿಜಯ್ ಎಂದು ಅವರು ಬರೆದಿದ್ದಾರೆ. “ನಮಸ್ಕಾರ ನನ್ನ ಪ್ರಿಯರೇ, ಈಗ ನಿಮಗೆ ‘ನನ್ನ ಗಂಡ’ ಎಂದು ಪರಿಚಯಿಸುತ್ತಿದ್ದೇನೆ! ಶ್ರೀ ವಿಜಯ್ ದೇವರಕೊಂಡ! ನಿಜವಾದ ಪ್ರೀತಿ ಮತ್ತು ಶಾಂತಿ ಎಂದರೇನು ಎಂಬುದನ್ನು ತೋರಿಸಿದವರು. ಪ್ರತಿದಿನ ದೊಡ್ಡ ಕನಸು ಕಾಣಲು ಪ್ರೇರೇಪಿಸಿದವರು. ನಾನು ಊಹಿಸಿದುದಕ್ಕಿಂತ ಹೆಚ್ಚಿನದನ್ನು ಸಾಧಿಸಲು ಸಮರ್ಥಳಾಗಿದ್ದೇನೆ ಎಂದು ಸದಾ ಹೇಳಿದವರು,” ಎಂದು…

ಭಾರತ–ಇಸ್ರೇಲ್ FTA ಮಾತುಕತೆ ಯಶಸ್ವಿ

ನವದೆಹಲಿ: ಫೆಬ್ರವರಿ 23ರಿಂದ 26ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ (FTA) ಕುರಿತ ಮೊದಲ ಸುತ್ತಿನ ಮಾತುಕತೆಗಳು ಗುರುವಾರ ಯಶಸ್ವಿಯಾಗಿ ಮುಕ್ತಾಯಗೊಂಡವು. ನಾಲ್ಕು ದಿನಗಳ ಚರ್ಚೆಗಳಲ್ಲಿ ಸರಕು ಮತ್ತು ಸೇವೆಗಳ ವ್ಯಾಪಾರ, ಮೂಲದ ನಿಯಮಗಳು, ನೈರ್ಮಲ್ಯ ಮತ್ತು ಫೈಟೊಸಾನಿಟರಿ ಕ್ರಮಗಳು, ವ್ಯಾಪಾರಕ್ಕೆ ತಾಂತ್ರಿಕ ಅಡೆತಡೆಗಳು, ಕಸ್ಟಮ್ಸ್ ಕಾರ್ಯವಿಧಾನಗಳು, ಬೌದ್ಧಿಕ ಆಸ್ತಿ ಹಕ್ಕುಗಳು, ಡಿಜಿಟಲ್ ವ್ಯಾಪಾರ ಸೇರಿದಂತೆ ಹಲವು ಪ್ರಮುಖ ಅಧ್ಯಾಯಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಚರ್ಚೆಗಳು ರಚನಾತ್ಮಕ ಹಾಗೂ ಭವಿಷ್ಯನಿಷ್ಠವಾಗಿದ್ದು, ಸಮಗ್ರ, ಸಮತೋಲಿತ ಮತ್ತು ಪರಸ್ಪರ ಪ್ರಯೋಜನಕಾರಿ ಒಪ್ಪಂದಕ್ಕೆ ಬದ್ಧರಾಗಿರುವುದಾಗಿ ಎರಡೂ ದೇಶಗಳು ಪುನರುಚ್ಚರಿಸಿದವು ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಎರಡೂ ಕಡೆಯವರು ವರ್ಚುವಲ್ ಮೂಲಕ ಅಂತರ-ಅಧಿಕೃತ ಸಂವಹನವನ್ನು ಮುಂದುವರಿಸಲು ಒಪ್ಪಿಕೊಂಡಿದ್ದು, ಮುಂದಿನ ಸುತ್ತಿನ ನೇರ ಮಾತುಕತೆಗಳು ಮೇ 2026ರಲ್ಲಿ ಇಸ್ರೇಲ್‌ನಲ್ಲಿ ನಡೆಯಲಿವೆ. FTAಗೆ ಸಂಬಂಧಿಸಿದ ಉಲ್ಲೇಖ ನಿಯಮಗಳು (ToR) ನವೆಂಬರ್ 2025ರಲ್ಲಿ…

ನ್ಯಾಯಾಂಗ ಅಧ್ಯಾಯದ ದೋಷ: NCERT ವಿಷಾದ ಪಠ್ಯಪುಸ್ತಕ ವಿತರಣೆಗೆ ತಡೆ

ನವದೆಹಲಿ: 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಕುರಿತು ಇರುವ ಅಧ್ಯಾಯದಲ್ಲಿ ಅನುಚಿತ ವಿಷಯ ಸೇರಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ‘Exploring Society: India and Beyond, Volume II’ ಎಂಬ ಶೀರ್ಷಿಕೆಯ ಪಠ್ಯಪುಸ್ತಕವನ್ನು ಫೆಬ್ರವರಿ 24, 2026ರಂದು ಬಿಡುಗಡೆ ಮಾಡಲಾಗಿತ್ತು. ಆದರೆ “ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ” (ಪುಟ 125–142) ಎಂಬ ಅಧ್ಯಾಯದಲ್ಲಿ ಸಂಪಾದಕೀಯ ಲೋಪದಿಂದ ಕೆಲವು ಅನುಚಿತ ಅಂಶಗಳು ಸೇರಿರುವುದು ಪತ್ತೆಯಾಗಿದೆ. ಈ ವಿಷಯವನ್ನು ಗಮನಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮುಂದಿನ ಪರಿಶೀಲನೆ ಮತ್ತು ತಿದ್ದುಪಡಿ ಕ್ರಮ ಪೂರ್ಣಗೊಳ್ಳುವವರೆಗೆ ಪಠ್ಯಪುಸ್ತಕ ವಿತರಣೆಯನ್ನು ನಿಲ್ಲಿಸಲು ಸೂಚಿಸಿದೆ. ಸಚಿವಾಲಯದ ನಿರ್ದೇಶನವನ್ನು ಪಾಲಿಸಿ ತಕ್ಷಣ ವಿತರಣೆಯನ್ನು ತಡೆಹಿಡಿದಿರುವುದಾಗಿ ಎನ್‌ಸಿಇಆರ್‌ಟಿ ಸ್ಪಷ್ಟಪಡಿಸಿದೆ. ಅಧಿಕೃತ ಪ್ರಕಟಣೆಯಲ್ಲಿ, ಈ ದೋಷ ಸಂಪೂರ್ಣವಾಗಿ ಆಕಸ್ಮಿಕವಾಗಿದ್ದು,…

ಮೋದಿಗೆ ‘ಸ್ಪೀಕರ್ ಆಫ್ ದಿ ನೆಸ್ಸೆಟ್’ ಪದಕ ಪ್ರದಾನ ಮಾಡಿದ ಇಸ್ರೇಲ್ ಸಂಸತ್

ಜೆರುಸಲೆಮ್: ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಗೆ ಭಾಜನರಾದ ಅಪರೂಪದ ವಿಶ್ವ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಒಬ್ಬರಾಗಿದ್ದಾರೆ. ಇದು ಪಶ್ಚಿಮ ಏಷ್ಯಾದಲ್ಲಿ ಭಾರತದ ಸಮತೋಲಿತ ಹಾಗೂ ತತ್ವಬದ್ಧ ರಾಜತಾಂತ್ರಿಕ ನಿಲುವನ್ನು ಪ್ರತಿಬಿಂಬಿಸುತ್ತದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಇಸ್ರೇಲ್ ಸಂಸತ್ತಾದ ನೆಸ್ಸೆಟ್ ಪ್ರಧಾನಿ ಮೋದಿಗೆ ‘ಸ್ಪೀಕರ್ ಆಫ್ ದಿ ನೆಸ್ಸೆಟ್’ ಪದಕ ಪ್ರದಾನ ಮಾಡಿದೆ. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ ಅವರು ಪದಕ ನೀಡಿದರು. ಈ ಗೌರವಕ್ಕೆ ಭಾಜನರಾದ ಮೊದಲ ವ್ಯಕ್ತಿ ಮೋದಿ ಎನ್ನಲಾಗಿದೆ. ಈ ಮನ್ನಣೆ ಭಾರತ–ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಿದ ಮೋದಿಯವರ ವೈಯಕ್ತಿಕ ನಾಯಕತ್ವವನ್ನು ಗುರುತಿಸುತ್ತದೆ. ರಕ್ಷಣಾ, ತಂತ್ರಜ್ಞಾನ, ಕೃಷಿ, ನವೀನತೆ ಹಾಗೂ ಆರ್ಥಿಕ ಸಹಕಾರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ಗಾಢವಾಗಿಸಲು ಅವರು ನೀಡಿದ ಕೊಡುಗೆ ಉಲ್ಲೇಖಿಸಲಾಗಿದೆ. 2018ರಲ್ಲಿ ಮೋದಿ ಅವರಿಗೆ ಪ್ಯಾಲೆಸ್ಟೈನ್ ನೀಡುವ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕಾಲರ್ ಆಫ್…

ಅಧಿಕಾರದ ಹೋರಾಟದಲ್ಲಿ ಸಿಎಂ-ಡಿಸಿಎಂ ತೊಡಗಿದ್ದಾರೆ; ಯುವಕರ ಸಮಸ್ಯೆ ನಿರ್ಲಕ್ಷ್ಯ: ವಿಜಯೇಂದ್ರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ಯುವಜನರ ಬದುಕಿನ ಪ್ರಶ್ನೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಬಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಉಲ್ಲೇಖಿಸಿದರು. ಕಳೆದ ಎರಡೂವರೆ ವರ್ಷಗಳಿಂದ ಯುವಕರು ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು. “ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರ ಅವರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಳಗಾವಿ ವಿಧಾನಸಭಾ ಅಧಿವೇಶನದ ವೇಳೆ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗೆ ಲಾಠಿ ಪ್ರಹಾರ ನಡೆಸಲಾಯಿತು. ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಸಲು ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು,” ಎಂದು ಹೇಳಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅಧಿಕಾರಕ್ಕಾಗಿ ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ವಿಜಯೇಂದ್ರ,…

‘ಇಂದಿನ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ’; ಧಾರವಾಡ ಪ್ರತಿಭಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿರುವ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ನಾಡಿಗಾಗಿ ಸೇವೆ ಸಲ್ಲಿಸುವ ಆಕಾಂಕ್ಷೆ ಇರುತ್ತದೆ. ಯುವಜನರ ಆತಂಕ – ಅಹವಾಲುಗಳು ನನ್ನನ್ನು ತಲುಪಿದೆ. ಅವರ ಭವಿಷ್ಯ ನಮಗೂ ಅತ್ಯಂತ ಮಹತ್ವದ್ದಾಗಿದೆ ಎಂದಿದ್ದಾರೆ. ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ…

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನ ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಈ ಸಂಬಂಧ ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆಯ ನಡುವೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸದಸ್ಯರೂ ಸೇರ್ಪಡೆಗೊಂಡು ಹೋರಾಟ ತೀವ್ರಗೊಳಿಸಿದರು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ ಪರಿಣಾಮ, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ–ನೂಕಾಟ ನಡೆಯಿತು. ರಾಜ್ಯ ಸರ್ಕಾರವು ಖಾಲಿ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಯುವಜನರ ಅಸಮಾಧಾನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು. Massive protest in dharwad by job aspirants against the govt. The protestors took to the streets demanding that the…

‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ. ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ನೀಡುವುದೂ ಹಾಗೂ ಲಂಚ ಸ್ವೀಕರಿಸಲು ಒತ್ತಾಯಿಸುವುದೂ ತಪ್ಪಾಗಿದೆ. ಆದ್ದರಿಂದ ಎಲ್ಲ ಆಯಾಮಗಳಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ನಾನಾ ವರ್ಗದ ಜನರು ಭೇಟಿ ನೀಡುತ್ತಾರೆ. ಹೀಗಾಗಿ ಈ ಪ್ರಕರಣದ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಒಬ್ಬ ಯುವ ವೈದ್ಯರು ಉತ್ತಮ ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ, ಇಂತಹ ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಬಾರದು. ಲಂಚ…