ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ’ಗೆ ಸಿಎಂ ಅಭಿನಂದನೆ

ಬೆಂಗಳೂರು : ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊನೆಯ ಓವರ್‌ನಲ್ಲಿ ರೋಚಕ ಜಯ ಸಾಧಿಸುವ ಮೂಲಕ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಮತ್ತೊಮ್ಮೆ ಡಬ್ಲ್ಯೂ.ಪಿ.ಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡ RCB ವನಿತೆಯರನ್ನು ಸಿಎಂ ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ. ಇಡೀ ಪಂದ್ಯಾಕೂಟದುದ್ದಕ್ಕೂ ಉತ್ಕೃಷ್ಟ ಪ್ರದರ್ಶನ ನೀಡುತ್ತಾ ಬಂದ ನಮ್ಮ RCB ತಂಡ, ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ನೋಡಿ ಖುಷಿಯಾಯಿತು ಎಂದು ಸಿಎಂ ಹೇಳಿದ್ದಾರೆ. ಸಂಘಟಿತ ಹೋರಾಟದ ಮೂಲಕ ಟ್ರೋಫಿ ಗೆದ್ದ ನಮ್ಮ ಆರ್.ಸಿ.ಬಿ ಯ ಹೆಣ್ಣುಮಕ್ಕಳಿಗೆ ಅಭಿನಂದನೆಗಳು. ಪಂದ್ಯದ ಕೊನೆಯವರೆಗೂ ಗೆಲುವಿಗಾಗಿ ಸಾಕಷ್ಟು ಸೆಣೆಸಿದ ಡೆಲ್ಲಿ ತಂಡದ ಆಟ ಕೂಡ ಶ್ಲಾಘನೀಯ ಎಂದವರು ಬಣ್ಣಿಸಿದ್ದಾರೆ.

ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

ಬೆಂಗಳೂರು: ರಾಜಧಾನಿ ಸಮೀಪದ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ಶುಕ್ರವಾರ ಬೆಳಗಿನ ಜಾವ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್‌ನಲ್ಲಿ ಇದ್ದ ಸುಮಾರು 40 ಪ್ರಯಾಣಿಕರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಸಂಭವಿಸಿದ ಈ ಘಟನೆಗೆ, ರಸ್ತೆ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ಚಾಲಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದು ಕಾರಣ ಎನ್ನಲಾಗಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ ಬಸ್ ಅಪಘಾತದ ಬಳಿಕ ಕ್ಷಣಾರ್ಧದಲ್ಲೇ ಬೆಂಕಿಗೆ ಆಹುತಿಯಾಯಿತು. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‌ನಿಂದ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಪರಿಣಾಮ ಲಗೇಜ್ ಬಾಕ್ಸ್‌ನಲ್ಲಿ ಇಟ್ಟಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡ ಪ್ರಯಾಣಿಕರು…

ಡಬ್ಲ್ಯುಪಿಎಲ್; ಬೆಂಗಳೂರು ಸಿಂಹಿಣಿಯರೇ ಚಾಂಪಿಯನ್

ವಡೋದರಾ: ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ 2026ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊನೆಯ ಓವರ್‌ನಲ್ಲಿ ರೋಚಕ ಜಯ ಸಾಧಿಸುವ ಮೂಲಕ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ನಾಲ್ಕನೇ ಬಾರಿ ಫೈನಲ್‌ನಲ್ಲಿ ಸೋಲು ಕಂಡು ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 203 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ಕೊನೆಯ ಓವರ್‌ನಲ್ಲಿ ಗೆಲುವು ಸಾಧಿಸಿ, ಡಬ್ಲ್ಯುಪಿಎಲ್ ಫೈನಲ್ ಇತಿಹಾಸದಲ್ಲೇ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿದ ತಂಡ ಎಂಬ ದಾಖಲೆ ಬರೆದಿತು. ಡೆಲ್ಲಿ ಪರ ಲಿಜಿಲ್ಲೆ ಲೀ ಮತ್ತು ಶೆಫಾಲಿ ವರ್ಮಾ ಮೊದಲ ವಿಕೆಟ್‌ಗೆ 49 ರನ್‌ಗಳ ಜೊತೆಯಾಟ ನೀಡಿದರು. ಶೆಫಾಲಿ ಔಟಾದ ಬಳಿಕ ನಾಯಕಿ…