ಬೆಂಗಳೂರು: ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ ನಾವು ದೇಶದಲ್ಲೇ ಅಗ್ರಗಣ್ಯ ರಾಜ್ಯ ಎಂದು ರಾಜ್ಯ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರಂಭವಾದ ಮೂರು ದಿನಗಳ ಅಂತಾರಾಷ್ಟ್ರೀಯ ಕೃಷಿ ಮೇಳ ಹಾಗು ರಾಜ್ಯ ಮಟ್ಟದ ಕೃಷಿ ಪಂಡಿತ ಹಾಗು ಇತರ ಪ್ರಶಸ್ತಿ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ಸಚಿವರು, ಕರ್ನಾಟಕದಲ್ಲಿ ರೈತರ ಸಬಲೀಕರಣ ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಉಪಕ್ರಮಗಳ ಮಾಹಿತಿ ನೀಡಿದರು. “ಈ ಮೇಳ ಸಾರ್ವಜನಿಕರಿಗೆ ಹೊಸ ಯೋಜನೆಗಳನ್ನು ಪರಿಚಯಿಸುವ ವೇದಿಕೆಯಾಗಲಿದೆ ಎಂದು ಅವರು ಬಣ್ಣಿಸಿದರು. “ರೈತರು ಸ್ಥಿರವಾದ ಕೃಷಿ, ಬ್ರ್ಯಾಂಡಿಂಗ್, ಮಾರುಕಟ್ಟೆ ಮತ್ತು ಸಾಲ ಸೌಲಭ್ಯಗಳನ್ನು ಪಡೆದರೆ ಕೃಷಿಯಲ್ಲಿ ಲಾಭದಾಯಕ ಆದಾಯವನ್ನು ಗಳಿಸಲು ಸಾಧ್ಯವಾಗುತ್ತದೆ,” ಎಂದು ಅವರು ಒತ್ತಿ ಹೇಳಿದರು. ರೈತರು…
Day: February 7, 2026
ಮೈಸೂರಿನ ‘ಪರಿದೃಶ್ಯ 2026’ರಲ್ಲಿ ಅನಾವರಣವಾಗಲಿವೆ ಜಾಗತಿಕ ಕಿರುಚಿತ್ರ, ಸಾಕ್ಷ್ಯಚಿತ್ರಗಳು
ಮೈಸೂರು: ಜಗತ್ತಿನ ವಿವಿಧ ದೇಶಗಳ ಕಿರುಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಪರಿದೃಶ್ಯ–2026’ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ದಸರಾ ನಗರಿ ಮೈಸೂರು ಸಜ್ಜಾಗುತ್ತಿದೆ. ಫೆಬ್ರವರಿ 20ರಿಂದ 22ರವರೆಗೆ ಐತಿಹಾಸಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಉತ್ಸವ ನಡೆಯಲಿದೆ. ಮೈಸೂರು ಸಿನಿಮಾ ಸೊಸೈಟಿ (ಎಂಸಿಎಸ್) ಆಯೋಜಿಸಿರುವ ಈ ನಾಲ್ಕನೇ ಆವೃತ್ತಿಯ ಉತ್ಸವದಲ್ಲಿ ಭಾರತ ಸೇರಿದಂತೆ 114 ದೇಶಗಳಿಂದ ಆಯ್ಕೆಯಾದ ಕಿರುಚಿತ್ರಗಳು ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ ನಡೆಯಲಿದೆ. ಪ್ರೇಕ್ಷಕರ ಹೆಚ್ಚಿನ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಬಾರಿ ವಿಶಾಲ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ‘ಪರಿದೃಶ್ಯ’ ಉತ್ಸವವು ವರ್ಷದಿಂದ ವರ್ಷಕ್ಕೆ ಯಶೋಗಾಥೆ ಬರೆಯುತ್ತಿದೆ. ಮೊದಲ ಆವೃತ್ತಿಯಲ್ಲಿ 10 ದೇಶಗಳಿಂದ 150 ಚಿತ್ರಗಳು ಪ್ರದರ್ಶನಗೊಂಡಿದ್ದರೆ, ಮೂರನೇ ಆವೃತ್ತಿಯಲ್ಲಿ 109 ದೇಶಗಳಿಂದ 3,100ಕ್ಕೂ ಹೆಚ್ಚು ಚಿತ್ರಗಳು ಭಾಗವಹಿಸಿದ್ದವು. 2026ರ ಆವೃತ್ತಿಗೆ 114 ದೇಶಗಳಿಂದ 3,000ಕ್ಕೂ ಅಧಿಕ ಚಿತ್ರಗಳ ಭಾಗವಹಿಸುವಿಕೆಗೆ ಪ್ರಸ್ತಾವನೆಗಳು…
ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ
ಬೆಂಗಳೂರು: ‘ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ ಮತ್ತು ಈ ಎಲ್ಲರ ದೈನಂದಿನ ಜೀವನಾಡಿಯ ಸಂಕೇತವಾಗಿದೆ. ಇತ್ತೀಚಿನ ಮೆಟ್ರೋ ದರ ಪರಿಷ್ಕರಣೆಯ ನಂತರ ಪ್ರಯಾಣಿಕರಿಂದ ವ್ಯಕ್ತವಾದ ಆತಂಕ ಮತ್ತು ಬೇಸರವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಜನರ ಅಹವಾಲಿಗೆ ಕಿವಿಯಾಗಬೇಕಿರುವುದು ಪ್ರತಿ ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ನಂಬಿರುವ ನಮಗೆ ನಿಮ್ಮ ಅಹವಾಲುಗಳೇ ಆದ್ಯತೆಯಾಗಿವೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಸಾಮಾಜಿಕ ಮಾಧ್ಯಮ X ನಲ್ಲಿ ಸಿಎಂ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಮೆಟ್ರೋ ರೈಲ್ವೇಸ್ (ಆಪರೇಷನ್ & ಮೇಂಟೆನೆನ್ಸ್) ಆಕ್ಟ್, 2002ರ ಅಡಿಯಲ್ಲಿ, ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ದರಗಳನ್ನು ಕೇಂದ್ರ ಸರ್ಕಾರದ ವಸತಿ…
ಕಾಂಗ್ರೆಸ್‌ನ ಭ್ರಷ್ಟಾಚಾರ ವಿರುದ್ಧ ಇನ್ನಷ್ಟು ಹೋರಾಟ; ಆರ್.ಅಶೋಕ ಘೋಷಣೆ
ಬೆಂಗಳೂರು: ಈ ಬಾರಿಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಇದರ ವಿರುದ್ಧ ಇನ್ನಷ್ಟು ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನಡೆದ 6,000 ಕೋಟಿ ರೂ. ಹಗರಣ ಸಂಬಂಧ ಐದು ದಾಖಲೆಗಳನ್ನು ಹಾಗೂ ಆಡಿಯೋ ದಾಖಲೆಗಳನ್ನು ನೀಡಿದ್ದೇನೆ. ಇಷ್ಟಾದರೂ ಸರ್ಕಾರ ಇನ್ನೂ ಸಾಕ್ಷಿ ಕೇಳುತ್ತಿದೆ. ಈ ಹಿಂದೆ 40 ಪರ್ಸೆಂಟ್ ಭ್ರಷ್ಟಾಚಾರವೆಂದು ಗುತ್ತಿಗೆದಾರರು ಹೇಳಿದ್ದಕ್ಕೆ ಕಾಂಗ್ರೆಸ್ ನಾಯಕರು ಅಂದಿನ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿತ್ತು. ಈಗ ಮದ್ಯ ಮಾರಾಟಗಾರರ ಸಂಘದವರು 80 ಪರ್ಸೆಂಟ್ ಭ್ರಷ್ಟಾಚಾರವೆಂದು ಹೇಳಿದ್ದು, ಆ ಬಗ್ಗೆ ರಾಹುಲ್ ಗಾಂಧಿಗೂ ದೂರು ನೀಡುವುದಾಗಿ ಹೇಳಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ರಾಜೀನಾಮೆ ಪಡೆಯದೆ ಜನರಿಗೆ ದ್ರೋಹ ಮಾಡಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ ಕೂಡ ಇದರಲ್ಲಿ ಭಾಗಿಯಾಗಿರುವುದರಿಂದ ಅವರು…
