ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್’ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಪ್ರತಿಧ್ವನಿಸಿದೆ. ಅಂತಹಾ ಪ್ರಕರಣಗಳನ್ನು ಪೊಲೀಸರು ಮುಚ್ಚಿಹಾಕುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಪೈಕಿ ಬೆಂಗಳೂರಿನ ಬಾಗಲೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿರುವ ಮನವಿಯೊಂದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಜೊತೆಗೆ, ಚರ್ಚುಗಳ ನಿರ್ವಹಣೆ ಸಂಬಂಧ ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ. ಬೆಂಗಳೂರಿನ ಚಿಕ್ಕಗುಬ್ಬಿಯ ಸಂತೋಷ್ ಕುಮಾರ್ ಎಂಬವರು ಹೆಣ್ಣೂರು ರಸ್ತೆ ಬಳಿಯ ಬೆಳ್ಳಹಳ್ಳಿಯಲ್ಲಿಯಲ್ಲಿರುವ ಕ್ರಿಶ್ಚಿಯನ್ ಫಲೋಶಿಪ್ ಚರ್ಚ್ (CFC) ನಲ್ಲಿನ ಕೃತ್ಯದ ತನಿಖೆಯಲ್ಲಾಗಿರುವ ಪೊಲೀಸರ ಲೋಪದ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಡಿಜಿಪಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ‘2002ರಿಂದ ಚರ್ಚಿನ ಸದಸ್ಯರಾಗಿರುವ ತಾನು ಚರ್ಚಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ…
Day: February 14, 2026
22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ
ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ತಾಂತ್ರಿಕ ಕಾರಣಗಳಿಂದ ರಾಜ್ಯದ ಸುಮಾರು 30,000ಕ್ಕೂ ಹೆಚ್ಚು ಅರ್ಹ ರೈತರು ಯೋಜನೆಯ ಲಾಭದಿಂದ ವಂಚಿತರಾಗುತ್ತಿರುವುದನ್ನು ಗಮನಕ್ಕೆ ತಂದಿದ್ದರು. ಕಳೆದ ವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಕೇಂದ್ರ ಸಚಿವರು ಆಗಮಿಸಿದ್ದ ಸಂದರ್ಭದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಿ, ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸರ್ಕಾರ ನೀಡಿರುವ ದೃಢೀಕರಣದ ಆಧಾರದ ಮೇಲೆ ಈಗಾಗಲೇ 22,000ಕ್ಕೂ ಹೆಚ್ಚು ಫಲಾನುಭವಿಗಳನ್ನು 22ನೇ ಕಂತಿನ ಪಾವತಿ ಪಟ್ಟಿಯಲ್ಲಿ…
ತಾರತಮ್ಯ ನಿವಾರಿಸಲು ಹೆಚ್ಚು ಅನುದಾನ ನೀಡಿದ ಎದೆಗಾರಿಕೆ ತೋರಿಸಿ; ಸಿಎಂಗೆ ಅಶೋಕ್ ಸವಾಲ್
ಬೆಂಗಳೂರು : ಈ ಬಾರಿಯ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚು ಅವಧಿ ಅಧಿಕಾರದಲ್ಲಿದಿದ್ದುಕಾಂಗ್ರೆಸ್ ಪಕ್ಷ. ಅತಿ ಹೆಚ್ಚು ಬಜೆಟ್ ಮಂಡಿಸಿರುವುದು ಸಿದ್ದರಾಮಯ್ಯ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು ಎಂದು ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಅನ್ಯ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕ್ರೊಢೀಕರಿಸಿ ಇಂತಿಷ್ಟು ಮೊತ್ತ ಹಣವನ್ನು ನೀಡಿರುವುದಾಗಿ ಹಾರಿಕೆ ಭರವಸೆ ನೀಡಬಾರದು. ಕೆಕೆಆರ್‌ಡಿಬಿ ಸಹಿತ ಇತರೆ ಅಭಿವೃದ್ಧಿ ಮಂಡಳಿ ಅಥವಾ ನಿಗಮಗಳಿಗೆ ನೀಡುವ ಅನುದಾನವನ್ನು ಈ ಲೆಕ್ಕಾಚಾರಕ್ಕೆ ಸೇರಿಸಬಾರದು.…
ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ
ಬೆಂಗಳೂರು: ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸಲಾಗಿದೆ.ಬಂಧನದ ಬಳಿಕ ಶಾಸಕರ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ತಿಳಿದುಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ತೊಂದರೆ ಇರುವುದಾಗಿ ಅವರು ತಿಳಿಸಿದ್ದರಿಂದ, ಸಮಗ್ರ ಪರೀಕ್ಷೆಗಾಗಿ ಅವರನ್ನು ಶ್ರೀ ಜಯದೇವ ಹೃದಯ ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ. ಅದಕ್ಕೂ ಮೊದಲು ಬಸವರಾಜ್ ಅವರನ್ನು ಬೌರಿಂಗ್ ಆಸ್ಪತ್ರೆ ಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಹೃದಯ ಸಂಬಂಧಿತ ಸಮಸ್ಯೆಗಳ ಸಾಧ್ಯತೆ ಇರುವುದಾಗಿ ಸೂಚಿಸಿ, ವಿಶೇಷ ಹೃದ್ರೋಗ ಆಸ್ಪತ್ರೆಗೆ ಹೆಚ್ಚಿನ ಪರೀಕ್ಷೆ ನಡೆಸಲು ಶಿಫಾರಸು ಮಾಡಿದ್ದರು. ಬೆಂಗಳೂರು ನ್ಯಾಯಾಲಯವು ಸಿಐಡಿ ಅಧಿಕಾರಿಗಳಿಗೆ, ಬಂಧಿತ ಶಾಸಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ನಿರ್ದೇಶಿಸಿದೆ. ಸಿಐಡಿ ವಶದಲ್ಲೇ ವೈದ್ಯಕೀಯ ಪರೀಕ್ಷೆಗಳು ಅಧಿಕೃತ ಮೇಲ್ವಿಚಾರಣೆಯಲ್ಲಿ ನಡೆಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯಕೀಯ ವರದಿ ಆಧರಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ…
ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ
ಹಂಪಿ: ಇನ್ನುಮುಂದೆ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಆಯೋಜಿಸಿದ್ದ ಐತಿಹಾಸಿಕ ಹಂಪಿ ಉತ್ಸವ – 2026 ಅನ್ನು ಉದ್ಘಾಟಿಸಿ, ಮಾತನಾಡಿದ ಅವರು, ರಾಜ್ಯ ಸರ್ಕಾರ ಹಂಪಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವರಾದ ದಿವಂಗತ ಎಂ ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ, ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಕಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನೆರವೇರಿಸಬೇಕೆಂದು ಆಶಿಸಿದ್ದರು. ಎಂ ಪಿ ಪ್ರಕಾಶ್ ಅವರು ಕನ್ನಡ ನಾಡು, ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ಧೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂ ಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದು ನೆನಪಿಸಿದರು. ಇತಿಹಾಸ ತಿಳಿಯದವರು…
