RSS ಬಗ್ಗೆ ಗೇಲಿ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. 4 ದಶಕಗಳಿಂದ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ “ನಾಳೆ ಬಾ” ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಕಲ್ಯಾಣ ಕರ್ನಾಟಕದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರುವ ದೆವ್ವಗಳನ್ನ ಓಡಿಸುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಆರ್…

‘ಟೀಂ ಇಂಡಿಯಾ ರಾಷ್ಟ್ರದ ಹೆಮ್ಮೆ’: ಅಭಿನಂದನೆಗಳ ಮಹಾಪೂರ

ನವದೆಹಲಿ: ICC Men’s T20 World Cup ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 61 ರನ್‌ಗಳ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ವಿವಿಧ ನಾಯಕರು ತಂಡವನ್ನು ಅಭಿನಂದಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, “ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಗ್ರೂಪ್-ಎ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ತಂಡ ರಾಷ್ಟ್ರದ ಹೆಮ್ಮೆ” ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ. ಈ ಗೆಲುವಿನೊಂದಿಗೆ ಭಾರತ ಸೂಪರ್-8 ಹಂತಕ್ಕೆ ಪ್ರವೇಶಿಸಿದ ಮೊದಲ ತಂಡವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಮಹಾ ಶಿವರಾತ್ರಿ ದಿನದಂದು ದೊರೆತ ಈ ವಿಜಯ ದೇಶಕ್ಕೆ ಹೆಮ್ಮೆಯ ವಿಷಯ” ಎಂದು ಅಭಿನಂದನೆ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ತಂಡದ ಪ್ರದರ್ಶನವನ್ನು ಶ್ಲಾಘಿಸಿ, “ಸ್ವರೂಪಗಳು ಬದಲಾಗಬಹುದು, ಫಲಿತಾಂಶ ಸ್ಥಿರವಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಟಿ20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನ…