ನವದೆಹಲಿ: ಕೃತಕ ಬುದ್ಧಿಮತ್ತೆ (AI) ಮತ್ತು ಆಳವಾದ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಜವಾಬ್ದಾರಿಯುತ AI ಬಳಕೆಯಲ್ಲಿ ಮಾದರಿ ರಾಜ್ಯವಾಗುವ ಗುರಿ ಹೊಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಮಾತನಾಡಿದ ಐಟಿ–ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಾಗತಿಕ ತಾಂತ್ರಿಕ ಅಡಚಣೆಗಳನ್ನು ಅವಕಾಶವನ್ನಾಗಿ ಬಳಸಿಕೊಳ್ಳಲು ಭಾರತಕ್ಕೆ, ವಿಶೇಷವಾಗಿ ಕರ್ನಾಟಕಕ್ಕೆ ಅಪಾರ ಸಾಮರ್ಥ್ಯವಿದೆ ಎಂದು ಹೇಳಿದರು. “ರಾಜ್ಯದಲ್ಲಿ ಕೌಶಲ್ಯ ಇನ್ಕ್ಯುಬೇಷನ್ ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಜಾಗತಿಕ ನಾಯಕರೊಂದಿಗೆ ಚರ್ಚೆ ನಡೆಯುತ್ತಿದೆ. ಇ-ಆಡಳಿತ ಕ್ಷೇತ್ರದಲ್ಲಿ ಜವಾಬ್ದಾರಿಯುತ AI ಬಳಕೆಯಲ್ಲಿ ಮುಂಚೂಣಿಯಲ್ಲಿರಲು ಸರ್ಕಾರ ಬದ್ಧವಾಗಿದೆ,” ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ದೇಶದ ಅತಿದೊಡ್ಡ AI ಪ್ರತಿಭಾ ಸಂಪನ್ಮೂಲಗಳಲ್ಲೊಂದು ಲಭ್ಯವಿದೆ ಎಂದು ಅವರು ಗಮನಿಸಿದರು. ನಾವೀನ್ಯತೆಯಲ್ಲಿ ನೈತಿಕತೆ ಅವಶ್ಯಕವೆಂದು ಒತ್ತಿಹೇಳಿದ ಖರ್ಗೆ, “ಆವಿಷ್ಕಾರ ಅಥವಾ ಬೌದ್ಧಿಕ ಸ್ವತ್ತಿನ…
Day: February 19, 2026
ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ ನಿರ್ಧಾರಕ್ಕೆ ಕುರುಬೂರು ಶಾಂತಕುಮಾರ್ ಖಂಡನೆ
ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭಿಸಲು ಸರ್ಕಾರ ನೀಡಿರುವ ಅನುಮತಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಂಡವಾಳಶಾಹಿ ರೆಸಾರ್ಟ್ ಮಾಲೀಕರ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘಟನೆ ಆರೋಪಿಸಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಪ್ರಕಟಣೆಯಲ್ಲಿ, “ಅರಣ್ಯದ ಅಂಚಿನಲ್ಲಿ ವಾಸಿಸುವ ಗ್ರಾಮಗಳ ರೈತರ ಕಷ್ಟ ಅರಿಯದೆ, ಕಾಡು ಪ್ರಾಣಿಗಳ ದಾಳಿಯಿಂದಾಗುತ್ತಿರುವ ಪ್ರಾಣಹಾನಿ ಹಾಗೂ ಬೆಳೆ ನಷ್ಟವನ್ನು ಲೆಕ್ಕಿಸದೆ ಸರ್ಕಾರ ಸಫಾರಿಗೆ ಅನುಮತಿ ನೀಡಿದೆ. ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ರೈತ ಸಂಘಟನೆಗಳು ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ. ಸಫಾರಿ ಕಾರ್ಯಾಚರಣೆಗಳಿಂದ ಕಾಡು ಪ್ರಾಣಿಗಳು ಭಯಭೀತಗೊಂಡು ಕಾಡಿನ ಹೊರಗೆ ಬರುತ್ತಿವೆ. ಇದರಿಂದ ಮನುಷ್ಯರ ಮೇಲೆ ದಾಳಿ ಹಾಗೂ ಬೆಳೆ ಹಾನಿ ಪ್ರಕರಣಗಳು ಹೆಚ್ಚುತ್ತಿವೆ ಎಂಬುದು ಸರ್ಕಾರಕ್ಕೂ ತಿಳಿದಿದೆ. ಆದರೂ ಆದಾಯದ ಲೆಕ್ಕಾಚಾರಕ್ಕೆ…
KSRTC ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ವೇತನ ಪರಿಷ್ಕರಣೆಗೂ ಒಪ್ಪಿಗೆ
ಬೆಂಗಳೂರು: ಮುಷ್ಕರದ ಎಚ್ಚರಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಾರಿಗೆ ನೌಕರರ ಪ್ರಮುಖ ಬೇಡಿಕೆಯಾಗಿದ್ದ ವೇತನ ಬಾಕಿ ಪಾವತಿಗೆ ಕ್ರಮ ಕೈಗೊಂಡಿದೆ. ಸಾರಿಗೆ ನೌಕರರಿಗೆ ಒಟ್ಟು 38 ತಿಂಗಳ ವೇತನ ಹಿಂಬಾಕಿ ಪಾವತಿಸ ಬೇಕಿರುವುದರಿಂದ, ಪ್ರಥಮ ಹಂತದಲ್ಲಿ 26 ತಿಂಗಳ ಅರಿಯರ್ಸ್ ಪಾವತಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1-1-2021ರಿಂದ 28-03-2023ರವರೆಗೆ ಬಾಕಿ ಇರುವ 26 ತಿಂಗಳ ಮೊತ್ತವನ್ನು ನೌಕರರಿಗೆ ನೀಡಲಾಗುತ್ತದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ನೌಕರರು ವೇತನ ಬಾಕಿ ಪಾವತಿಗೆ ಒತ್ತಾಯಿಸುತ್ತಿದ್ದರು. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ. ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ, ಹಂತ ಹಂತವಾಗಿ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದೇ…
