ಮಂಗಳೂರು: ‘ಮಧ್ಯಪ್ರಾಚ್ಯ ಸಂಘರ್ಷ’ ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಆಗ್ರಹಿಸಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನೇದಿನೇ ಉಲ್ಬಣಿಸುತ್ತಿರುವ ಯುದ್ಧದ ಪರಿಸ್ಥಿತಿಯು ಅಲ್ಲಿ ನೆಲೆಸಿರುವ ಲಕ್ಷಾಂತರ ತುಳುನಾಡಿನವರು ಸೇರಿದಂತೆ ಭಾರತೀಯರ ನೆಮ್ಮದಿಯನ್ನು ಕಸಿದುಕೊಂಡಿದೆ. ಇಸ್ರೇಲ್, ಇರಾನ್, ದುಬೈ, ಕತಾರ್, ಬಹರೇನ್ ಸೇರಿದಂತೆ ಯುದ್ಧ ಪೀಡಿತ ಪ್ರದೇಶಗಳಲ್ಲಿನ ಅನಿಶ್ಚಿತತೆ ಅತ್ಯಂತ ಕಳವಳಕಾರಿಯಾಗಿದ್ದು, ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪದ್ಮರಾಜ್ ಪೂಜಾರಿ ಪ್ರತಿಪಾದಿಸಿದ್ದಾರೆ. ಪ್ರತಿದಿನದ ಸ್ಫೋಟದ ಸದ್ದುಗಳು ಮತ್ತು ಅಸುರಕ್ಷಿತ ಭಾವನೆ ಅಲ್ಲಿನ ಕುಟುಂಬಗಳು, ವಿಶೇಷವಾಗಿ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ತೀವ್ರವಾದ ಕೆಟ್ಟ ಪರಿಣಾಮ ಬೀರುತ್ತಿದೆ. ಯುದ್ಧದ ಸನ್ನಿವೇಶ ಮಕ್ಕಳ ಸಹಜ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತಿದ್ದು, ಅಲ್ಲಿನ ಭಾರತೀಯರು ಪ್ರತಿಕ್ಷಣವನ್ನೂ ಆತಂಕದಲ್ಲೇ ಕಳೆಯುವಂತಾಗಿದೆ ಎಂದವರು ಗಮನಸೆಳೆದಿದ್ದಾರೆ. ವಿಮಾನ ಸಂಚಾರಗಳು ಸ್ಥಗಿತಗೊಂಡಿರುವುದು…
Day: March 6, 2026
ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್’; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾ ಬಂದಿರುವುದನ್ನೇ ಉಲ್ಲೇಖಿಸಿ, ಈ ಬಾರಿ ಮಂಡಿಸಲಾದ ಬಜೆಟ್ ಅನ್ನು ‘ಬ್ರದರ್ಸ್ ಬಜೆಟ್’ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಅನೇಕ ಯೋಜನೆಗಳನ್ನು ಘೋಷಿಸಿರುವುದನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ಮಾಡಿ, ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಶಾಲೆಗಳನ್ನು ಕೆಪಿಎಸ್ (KPS) ಮಾದರಿಯಲ್ಲಿ ಉನ್ನತೀಕರಣಗೊಳಿಸಲು ₹1000 ಕೋಟಿ ಮೀಸಲು, ಅಲ್ಪಸಂಖ್ಯಾತ ವಸತಿ ಶಾಲೆಗಳ ಆರಂಭ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಅಲ್ಪಸಂಖ್ಯಾತ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಮೀಸಲು, ನಿರ್ಗತಿಕರಿಗೆ ಎರಡು ವೃದ್ಧಾಶ್ರಮಗಳ ಆರಂಭ, ನಿರುದ್ಯೋಗಿಗಳಿಗೆ…
‘ರಾಜ್ಯದ ಯುವ ಸಮೂಹಕ್ಕೆ ಕೌಶಲ್ಯತೆ, ಉದ್ಯೋಗ ಅವಕಾಶ ಹೆಚ್ಚಿಸಲು ಸರ್ಕಾರ ಬದ್ಧ’: ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿದ ನಂತರ ಪ್ರತಿಕ್ರಿಯೆ ನೀಡಿರುವ ಡಾ. ಪಾಟೀಲ್, ಯುವ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ. ಇದು ಸ್ವಾಗತಾರ್ಹ ಕ್ರಮ ಎಂದರು. ಎಡಿಬಿ ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ವೆಚ್ಚದಲ್ಲಿ ಐದು ವರ್ಷಗಳ ಅವಧಿಯ “K-QUEST” (KARNATAKA – Quality Upgradation for Employment and Skills Transformation) ಯೋಜನೆಯನ್ನು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರಿಂದ ಗುಣಮಟ್ಟದ ಹಾಗೂ ಕೌಶಲ್ಯಭರಿತ ತರಬೇತಿ, ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. ನಮ್ಮ ನಾಡಿನ…
ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಬಸವರಾಜ್ ಬೊಮ್ಮಾಯಿ ಟೀಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಕಳಪೆ ಬಜೆಟ್. ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾಗಿರುವುದರ ಜೊತೆಗೆ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಸುಮಾರು ₹1.32 ಲಕ್ಷ ಕೋಟಿ ಸಾಲ ಮಾಡಿ, ಮತ್ತೊಂದೆಡೆ ಸುಮಾರು ₹25 ಸಾವಿರ ಕೋಟಿ ಹೊಸ ತೆರಿಗೆ ವಿಧಿಸಿ, ₹32 ಸಾವಿರ ಕೋಟಿ ಕೊರತೆಯ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು-ದೆಸೆ ಇಲ್ಲದ ಈ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೆ ತೆಗೆದುಕೊಂಡು ಹೋಗುವಂತಾಗಿದೆ. ಇದರ ಪರಿಣಾಮ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇದು ರಾಜ್ಯವನ್ನು ಕನಿಷ್ಠ 10 ರಿಂದ 15 ವರ್ಷ ಹಿಂದೆ ತಳ್ಳುವಂತಾಗಬಹುದು. 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಂದ ಇಂತಹ ಬಜೆಟ್ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ, ಆದ್ದರಿಂದ ನಿರಾಸೆಯಾಗಿದೆ ಎಂದವರು ಹೇಳಿದ್ದಾರೆ. ನೀರಾವರಿಗೆ ಕೇವಲ ₹22 ಸಾವಿರ ಕೋಟಿ…
ಹಲವು ರಾಜ್ಯಗಳ ರಾಜ್ಯಪಾಲರ ಬದಲಾವಣೆ: ಹೊಸ ಪಟ್ಟಿ ಹೀಗಿದೆ
ನವದೆಹಲಿ: ರಾಷ್ಟ್ರಪತಿ ಭವನವು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಮಹತ್ವದ ರಾಜ್ಯಪಾಲರು (Governors) ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ (Lieutenant Governors) ಪುನರ್‌ವ್ಯವಸ್ಥೆಯನ್ನು ಶುಕ್ರವಾರ ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಸಂಬಂಧಿತ ಅಧಿಕಾರಿಗಳು ತಮ್ಮ ಹುದ್ದೆಗಳನ್ನು ಸ್ವೀಕರಿಸುವ ದಿನಾಂಕದಿಂದ ಈ ನೇಮಕಾತಿಗಳು ಜಾರಿಗೆ ಬರಲಿವೆ ಎಂದು ತಿಳಿಸಲಾಗಿದೆ. ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳ ನೇಮಕಾತಿ/ವರ್ಗಾವಣೆಗಳ ಪಟ್ಟಿ: ವಿನಯ್ ಕುಮಾರ್ ಸಕ್ಸೇನಾ (Vinai Kumar Saxena) – ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ (ಪ್ರಸ್ತುತ ದೆಹಲಿ ಎಲ್‌ಜಿ)…
