ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ಕುರಿತಿದ್ದ ಕಗ್ಗಂಟಿಗೆ ಕಾಂಗ್ರೆಸ್ ಕೊನೆಗೂ ತೆರೆ ಎಳೆದಿದೆ. ಏಪ್ರಿಲ್ 9ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಅಭ್ಯರ್ಥಿ ಪಟ್ಟಿಯನ್ನು ಇಂದು ಭಾನುವಾರ ಬಿಡುಗಡೆ ಮಾಡಿದೆ. ದಾವಣಗೆರೆ ದಕ್ಷಿಣದಿಂದ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆಯಿಂದ ಉಮೇಶ್ ಮೇಟಿ ಇವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ದೃಡಪಡಿಸಿವೆ. ಉಪಚುನಾವಣೆಯ ಸನ್ನಾಹದಲ್ಲಿ ಕಾಂಗ್ರೆಸ್ ಈ ಬಾರಿ ಜಾಗರೂಕ ನಡೆ ತೆಗೆದುಕೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಗಟ್ಟಿಯಾದ ಸ್ಪರ್ಧೆಗೆ ತಯಾರಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Day: March 22, 2026
ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ
ವಾಷಿಂಗ್ಟನ್: ಪಶ್ಚಿಮ ಏಷ್ಯಾದ ಉದ್ವಿಗ್ನತೆ ತಾರಕ್ಕೇರುತ್ತಿರುವ ನಡುವೆಯೇ, ಅಮೆರಿಕ ಅಧ್ಯಕ್ಷ Donald Trump ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, ಹಾರ್ಮುಜ್ ಜಲಸಂಧಿಯನ್ನು 48 ಗಂಟೆಗಳೊಳಗೆ ತೆರೆಯದಿದ್ದರೆ ಭಾರೀ ಮಿಲಿಟರಿ ದಾಳಿ ನಡೆಸುವುದಾಗಿ ಘೋಷಿಸಿದ್ದಾರೆ. ಸರಣಿ ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ತೀವ್ರ ಎಚ್ಚರಿಕೆ ನೀಡಿದ ಟ್ರಂಪ್, “ಇರಾನ್ ಜಲಸಂಧಿಯನ್ನು ತೆರೆಯದಿದ್ದರೆ ಅದರ ಪ್ರಮುಖ ವಿದ್ಯುತ್ ಸ್ಥಾವರಗಳನ್ನು ಮೊದಲಿಗೆ ಗುರಿಯಾಗಿಸಿ ಹೊಡೆದುರುಳಿಸಲಾಗುವುದು” ಎಂದು ಹೇಳಿದ್ದಾರೆ. ಜಾಗತಿಕ ಇಂಧನ ಸಾಗಣೆಗೆ ಅತ್ಯಂತ ಪ್ರಮುಖ ಮಾರ್ಗವಾಗಿರುವ Hormuz Strait ಕುರಿತಾಗಿ ಈ ಬೆದರಿಕೆ ಹೊರಬಿದ್ದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಅಮೆರಿಕ ತನ್ನ ಮಿಲಿಟರಿ ಗುರಿಗಳನ್ನು ಸಾಧಿಸುವ ಹಂತದಲ್ಲಿದೆ ಎಂದು ಹೇಳಿದ ಟ್ರಂಪ್, ಇರಾನ್‌ನ ಕ್ಷಿಪಣಿ ವ್ಯವಸ್ಥೆ, ರಕ್ಷಣಾ ಮೂಲಸೌಕರ್ಯ ಹಾಗೂ ನೌಕಾಪಡೆ-ವಾಯುಪಡೆಯ ಸಾಮರ್ಥ್ಯವನ್ನು ಸಂಪೂರ್ಣವಾಗಿ ಕುಗ್ಗಿಸುವುದು ಮುಖ್ಯ ಉದ್ದೇಶ ಎಂದು ತಿಳಿಸಿದ್ದಾರೆ. ಇರಾನ್ ಪರಮಾಣು ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದನ್ನು ಯಾವುದೇ ಕಾರಣಕ್ಕೂ…
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೊನೆಗೂ FIR ದಾಖಲು
ಮಂಗಳೂರು: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಪರವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬ್ಯಾಟಿಂಗ್ ಮಾಡಿದರೂ ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕು ವೇಣೂರು ಪೊಲೀಸ್ ಠಾಣೆಯಲ್ಲಿ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂದೇಶ್ ಅವರು ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಸಂದೇಶ್ ವಿರುದ್ಧ ಕೆಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಆರೋಪ ಸುಳ್ಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದರು. ಮುನ್ನವೇ, ಸಂತ್ರಸ್ತರ ಹೇಳಿಕೆ ದಾಖಲಿಸುವ ಮುನ್ನವೇ, ಪೊಲೀಸ್ ಆಯುಕ್ತರು ಇನ್ಸ್ಪೆಕ್ಟರ್’ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಸಾರ್ವಜನಿಕವಲಯದಲ್ಲಿ ವ್ಯಾಪಕ ಆಕ್ರೋಶ…
ಪ್ರಿಯಾಂಕ್ ಖರ್ಗೆರೀತಿ ನಮ್ಮನ್ನೂ ಮಂತ್ರಿ ಮಾಡಿ ಎಂದ ಡಿಕೆಶಿ ಆಪ್ತ
ರಾಮನಗರ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕಾಂಗ್ರೆಸ್ ಒಳಗೆ ಸಚಿವ ಸ್ಥಾನಕ್ಕಾಗಿ ಒತ್ತಾಯಗಳು ಜೋರಾಗಿವೆ. “ಸಚಿವ ಸ್ಥಾನ ಪ್ರಿಯಾಂಕ್ ಖರ್ಗೆ ಅವರಿಗೆ ಮಾತ್ರ ಏಕೆ? ನಮಗೂ ಅವಕಾಶ ಬೇಕು” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸ್ಪಷ್ಟವಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದ ಶಾಸಕರಿಗೂ ಈ ಬಾರಿ ಮಂತ್ರಿಗಿರಿ ನೀಡಬೇಕು ಎಂದು ಒತ್ತಾಯಿಸಿದರು. “ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಶಾಸಕರಾಗಿದ್ದಾಗಲೇ ಸಚಿವರಾಗಿದ್ದರು. ಹಾಗಾಗಿ ಈಗಲೂ ಹೊಸದಾಗಿ ಆಯ್ಕೆಯಾದವರಿಗೂ ಅವಕಾಶ ಸಿಗಬೇಕು” ಎಂದು ಹೇಳಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಔತಣಕೂಟದಲ್ಲಿ ಸುಮಾರು 55 ಮಂದಿ ಶಾಸಕರು ಸೇರಿ ಈ ವಿಚಾರವನ್ನು ಚರ್ಚಿಸಿದ್ದೇವೆ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿ ಬಳಿ ಮಂಡಿಸಿದ್ದೇವೆ. ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಮೂರು-ನಾಲ್ಕು ಬಾರಿ…
