ಮಧ್ಯಪ್ರಾಚ್ಯ ಸಂಘರ್ಷ: ಭಾರತೀಯರ ಸುರಕ್ಷತೆ, ಭದ್ರತೆಗೆ ಮೊದಲ ಆದ್ಯತೆ”: ಪ್ರಧಾನಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಭಾರತಕ್ಕೆ ಆರ್ಥಿಕ, ಭದ್ರತಾ ಹಾಗೂ ಮಾನವೀಯ ಸವಾಲುಗಳು ಎದುರಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಸಂಘರ್ಷದ ಕುರಿತು ಸದನದಲ್ಲಿ ಮಾತನಾಡಿದ ಅವರು, “ಪಶ್ಚಿಮ ಏಷ್ಯಾದ ಪರಿಸ್ಥಿತಿ ಕಳವಳಕಾರಿಯಾಗಿದೆ. ಈ ಬಿಕ್ಕಟ್ಟು ಈಗ ಮೂರು ವಾರಗಳನ್ನು ಮೀರಿ ತೀವ್ರಗೊಂಡಿದೆ. ಇದರ ಪರಿಣಾಮ ಜಾಗತಿಕ ಆರ್ಥಿಕತೆ ಮತ್ತು ಜನಜೀವನದ ಮೇಲೆ ಸ್ಪಷ್ಟವಾಗಿ ಕಾಣಿಸುತ್ತಿದೆ” ಎಂದು ಹೇಳಿದರು. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಈ ಕುರಿತು ಈಗಾಗಲೇ ಸದನಕ್ಕೆ ಮಾಹಿತಿ ನೀಡಿದ್ದಾರೆ ಎಂದು ಪ್ರಧಾನಿ ಉಲ್ಲೇಖಿಸಿದರು. ಭಾರತ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡಿದ ಮೋದಿ, “ಈ ಸಂಘರ್ಷವು ಭಾರತಕ್ಕೆ ಅನಿರೀಕ್ಷಿತ ಸವಾಲುಗಳನ್ನು ತಂದಿದೆ. ಅವು ಆರ್ಥಿಕ, ರಾಷ್ಟ್ರೀಯ ಭದ್ರತೆ ಹಾಗೂ ಮಾನವೀಯತೆಗೂ ಸಂಬಂಧಿಸಿದೆ. ಯುದ್ಧದಲ್ಲಿರುವ ಮತ್ತು ಪ್ರಭಾವಿತ ರಾಷ್ಟ್ರಗಳೊಂದಿಗೆ ನಮ್ಮ ವ್ಯಾಪಕ ವ್ಯಾಪಾರ…

ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ

ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. . ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು. ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ‌ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು…

ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ; ಸಿಎಂ–ಡಿಸಿಎಂ ಸಾಥ್

ದಾವಣಗೆರೆ: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು. ಇದೇ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಭಾಗವಹಿಸಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿದ್ದರೂ, ಅಂತಿಮವಾಗಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ. ನಾನೂ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೇನೆ. ಬ್ಲಾಕ್ ಸಮಿತಿ ಅಧ್ಯಕ್ಷ ಅಯುಬ್ ಸಹ ಉಪಸ್ಥಿತರಿದ್ದರು”…

ಇರಾನ್ ಯುದ್ಧದ ಹೊಡೆತ: ಭಾರತದ ಗಲ್ಫ್ ಆರ್ಥಿಕ ಜೀವನಾಡಿಗೆ ಭಾರಿ ಆಘಾತ

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧ ತೀವ್ರಗೊಳ್ಳುತ್ತಿದ್ದಂತೆ, ಭಾರತದ ಆರ್ಥಿಕತೆಯ ಮೇಲೆ ಹೊಸ ಒತ್ತಡ ಉಂಟಾಗಿದೆ. ವ್ಯಾಪಾರ, ಇಂಧನ ಪೂರೈಕೆ ಮತ್ತು ವಿದೇಶಿ ಹಣ ರವಾನೆಯ ಪ್ರಮುಖ ಕೇಂದ್ರವಾಗಿರುವ ಗಲ್ಫ್ ಪ್ರದೇಶದೊಂದಿಗೆ ಭಾರತದ ಆಳವಾದ ಸಂಪರ್ಕ ಇದೀಗ ದುರ್ಬಲತೆಯಾಗಿ ಪರಿಣಮಿಸುತ್ತಿದೆ ಎಂದು *ದಿ ನ್ಯೂಯಾರ್ಕ್ ಟೈಮ್ಸ್* ವರದಿ ತಿಳಿಸಿದೆ. ಕೆಲವೇ ವಾರಗಳ ಹಿಂದೆ ಬಲವಾದ ಬೆಳವಣಿಗೆ, ನಿಯಂತ್ರಿತ ಹಣದುಬ್ಬರ ಮತ್ತು ಸ್ಥಿರ ವಿದೇಶಿ ವಿನಿಮಯ ಮೀಸಲುಗಳೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ಭಾರತ ಮುಂಚೂಣಿಯಲ್ಲಿತ್ತು. ಆದರೆ ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ “ಪರಿಪೂರ್ಣ ಚಂಡಮಾರುತ” ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿ ವಿಶ್ಲೇಷಿಸಿದೆ. ಭಾರತದ ತೈಲ ಆಮದುಗಳಲ್ಲಿ ಸುಮಾರು 40% ಮತ್ತು ಅನಿಲ ಪೂರೈಕೆಯಲ್ಲಿ 80% ಗಲ್ಫ್ ಪ್ರದೇಶದ ಮೇಲೆ ಅವಲಂಬಿತವಾಗಿದ್ದು, ಇಂಧನ ಬೆಲೆಗಳ ಏರಿಕೆ ಈಗಾಗಲೇ ಆರ್ಥಿಕ ವ್ಯವಸ್ಥೆಯಲ್ಲಿ ಅಲೆಗಳನ್ನೆಬ್ಬಿಸಿದೆ. ಇದು ಬೆಳವಣಿಗೆ–ಹಣದುಬ್ಬರ ಸಮತೋಲನಕ್ಕೆ ದೊಡ್ಡ ಸವಾಲು ಎಸೆಯುತ್ತಿದೆ. ಗಲ್ಫ್…