ಟ್ರಂಪ್ ನೀತಿಗಳ ವಿರುದ್ಧ ಅಮೆರಿಕದಲ್ಲಿ ‘ಸರಣಿ ಪ್ರತಿಭಟನೆಗಳು

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ಹಾಗೂ ವಿದೇಶಾಂಗ ನೀತಿಗಳ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, “ರಾಜರಿಲ್ಲ” ಎಂಬ ಘೋಷಣೆಯಡಿ ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ದೇಶದ ವಿವಿಧ ನಗರಗಳಲ್ಲಿ 3,000 ಕ್ಕೂ ಹೆಚ್ಚು ಪ್ರತಿಭಟನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದು ಸಂಘಟಿತ ರಾಷ್ಟ್ರೀಯ ಚಳುವಳಿಯ ರೂಪ ಪಡೆದಿದೆ ಎಂದು ಆಯೋಜಕರು ತಿಳಿಸಿದ್ದಾರೆ. Minnesota State Capitol ನಲ್ಲಿ ನಡೆದ ಪ್ರಮುಖ ರ್ಯಾಲಿಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ಇದು ದಿನದ ಅತಿದೊಡ್ಡ ಸಮಾವೇಶಗಳಲ್ಲಿ ಒಂದಾಗಿದೆ. ಪ್ರತಿಭಟನಾಕಾರರು ಮೆರವಣಿಗೆ ನಡೆಸಿ, ಘೋಷಣೆಗಳನ್ನು ಕೂಗಿ, ಟ್ರಂಪ್ ಆಡಳಿತದ ವಿರುದ್ಧ ಫಲಕಗಳನ್ನು ಪ್ರದರ್ಶಿಸಿದರು. ವಿಶೇಷವಾಗಿ ವಲಸೆ ಜಾರಿ ಕ್ರಮಗಳು ಹಾಗೂ ಇರಾನ್ ಸಂಘರ್ಷದಲ್ಲಿ ಅಮೆರಿಕದ ಪಾತ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು. ಮಿನ್ನೇಸೋಟದ ಸೇಂಟ್ ಪಾಲ್‌ನಲ್ಲಿ ನಡೆದ ಕೇಂದ್ರ ರ್ಯಾಲಿಯಲ್ಲಿ ಗವರ್ನರ್ ಟಿಮ್…

ಇರಾನ್ ಉದ್ವಿಗ್ನತೆ ನಡುವೆ ಅಮೆರಿಕದ ಬೃಹತ್ ಸೇನಾ ನಿಯೋಜನೆ

ನ್ಯೂಯಾರ್ಕ್: ಇರಾನ್ ವಿರುದ್ಧದ ಯುದ್ಧದ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆರಿಕ ಮಧ್ಯಪ್ರಾಚ್ಯದಲ್ಲಿ ಸೇನಾ ಹಾಜರಾತಿಯನ್ನು ಮತ್ತಷ್ಟು ಬಲಪಡಿಸಿದೆ. ಸುಮಾರು 3,500 ನೌಕಾ ಪಡೆಗಳು ಮತ್ತು ನಾವಿಕರನ್ನು ಈ ಪ್ರದೇಶಕ್ಕೆ ನಿಯೋಜಿಸಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. USS ಟ್ರಿಪೋಲಿ (LHA-7) ಯುದ್ಧನೌಕೆಯಲ್ಲಿ ಸವಾರರಾಗಿರುವ ಈ ಪಡೆಗಳು ಮಾರ್ಚ್ 27ರಂದು ಮಧ್ಯಪ್ರಾಚ್ಯಕ್ಕೆ ಆಗಮಿಸಿವೆ. ಈ ಹಡಗು ಅಮೆರಿಕಾ ವರ್ಗದ ಉಭಯಚರ ದಾಳಿ ಹಡಗುಗಳಲ್ಲೊಂದು ಆಗಿದ್ದು, ಟ್ರಿಪೋಲಿ ಆಂಫಿಬಿಯಸ್ ರೆಡಿ ಗ್ರೂಪ್‌ನ ಫ್ಲ್ಯಾಗ್‌ಶಿಪ್ ಆಗಿ ಕಾರ್ಯನಿರ್ವಹಿಸುತ್ತದೆ. ಈ ಪಡೆಗಳಲ್ಲಿ ನೌಕಾಪಡೆಯ ಜೊತೆಗೆ ಯುದ್ಧ ವಿಮಾನಗಳು, ಸಾಗಣೆ ವಿಮಾನಗಳು ಹಾಗೂ ಉಭಯಚರ ದಾಳಿ ಕಾರ್ಯಾಚರಣೆಗಳಿಗೆ ಅಗತ್ಯವಾದ ತಂತ್ರಜ್ಞಾನ ಮತ್ತು ಸಾಧನಗಳು ಸೇರಿವೆ. ಸಮುದ್ರ ಮತ್ತು ಭೂ ಆಧಾರಿತ ದಾಳಿಗಳನ್ನು ನಡೆಸುವ ಸಾಮರ್ಥ್ಯವುಳ್ಳ ಈ ಪಡೆಗಳನ್ನು ತುರ್ತು ಕಾರ್ಯಾಚರಣೆಗಳಿಗೆ ಬಳಸಲಾಗುತ್ತದೆ. ವರದಿಗಳ ಪ್ರಕಾರ, ಈ ನಿಯೋಜನೆ ಇರಾನ್‌ನೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಗೆ ಸಂಬಂಧಿಸಿದ…

ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಯುವಕನೊಬ್ಬ ತೀವ್ರ ಕ್ರಮಕ್ಕೆ ಮುಂದಾಗಿ, ಒಂದೇ ಕುಟುಂಬದ ಇಬ್ಬರು ಸಾವಿಗೀಡಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ದಾಖಲಿಸಿದ್ದಾನೆ. ಈ ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆಗೆ ಧಾವಿಸಿದಾಗ ಹೃದಯವಿದ್ರಾವಕ ದೃಶ್ಯ ಎದುರಾಗಿದೆ. ಮೋಹನ್ ತನ್ನ ತಾಯಿ ಹಾಗೂ ಅಕ್ಕನ ಮೇಲೆ ದಾಳಿ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೋಹನ್ ಗೌಡ (27) ಮತ್ತು ಅಕ್ಕನ ಮಗ ಮಯಾಂಕ್ (11) ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

ಚೆನ್ನೈ: ನಿರ್ದೇಶಕ ವಿಘ್ನೇಶ್ ಶಿವನ್ ಅವರ ಬಹುನಿರೀಕ್ಷಿತ ಪ್ರಣಯ ಚಿತ್ರ ಲವ್ ಇನ್ಶುರೆನ್ಸ್ ಕೊಂಪನಿ (LIK) ಬಿಡುಗಡೆಯನ್ನು ಮತ್ತೊಮ್ಮೆ ಮುಂದೂಡಲಾಗಿದ್ದು, ಇದೀಗ ಏಪ್ರಿಲ್ 10ರಂದು ತೆರೆಗೆ ಬರಲಿದೆ. ಈ ಹಿಂದೆ ಏಪ್ರಿಲ್ 3ರಂದು ಬಿಡುಗಡೆ ಮಾಡಲು ಯೋಜಿಸಿದ್ದ ಚಿತ್ರವನ್ನು ವಾರದ ಅಂತರದಲ್ಲಿ ಮುಂದೂಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಈ ಚಿತ್ರದ ಬಿಡುಗಡೆ ದಿನಾಂಕ ಪದೇಪದೇ ಬದಲಾಗುತ್ತಿರುವುದು ಗಮನಾರ್ಹ. ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ ವಿಘ್ನೇಶ್ ಶಿವನ್, “#LIK from April 10… ಟ್ರಸ್ಟ್ ಮಿ ಬ್ರೋ” ಎಂದು ಹೇಳಿ ಹೊಸ ದಿನಾಂಕವನ್ನು ದೃಢಪಡಿಸಿದರು. ಇದೇ ವೇಳೆ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್, ನಟ ಪ್ರದೀಪ್ ರಂಗನಾಥನ್ ಹಾಗೂ ತಾವು ಸೇರಿರುವ ತಮಾಷೆಯ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಚಿತ್ರದ ಬಿಡುಗಡೆಯು ಹಲವು ಹಂತಗಳಲ್ಲಿ ಮುಂದೂಡಿಕೆಯನ್ನು ಕಂಡಿದೆ. ಮೊದಲಿಗೆ ಕಳೆದ ವರ್ಷದ ಸೆಪ್ಟೆಂಬರ್ 18ಕ್ಕೆ ನಿಗದಿಯಾಗಿದ್ದ ಬಿಡುಗಡೆ, ನಂತರ ದೀಪಾವಳಿ ಪ್ರಯುಕ್ತ…

ಎಲ್ಲಾ ಜಿಲ್ಲೆಗಳಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; : ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ನೂತನ ಆಸ್ಪತ್ರೆ ಲೋಕಾರ್ಪಣೆ ಮಾಡಿದ ನಂತರ ಭಾಷಣ ಮಾಡಿದ ಸಚಿವ ಡಾ. ಪಾಟೀಲ್‌, ಮಕ್ಕಳಿಗೆ ಉತ್ತರ ಆರೈಕೆ, ಚಿಕಿತ್ಸೆ ಒದಗಿಸಲು ಈ ಆಸ್ಪತ್ರೆ ನಿರ್ಮಿಸಲಾಗಿದೆ. ಸರ್ಕಾರದಿಂದಲೇ ಇಷ್ಟೊಂದು ಬೃಹತ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಇಷ್ಟು ದೊಟ್ಟಮಟ್ಟದ ಕಾರ್ಯ ನಿರ್ವಹಿಸುತ್ತಿರುವುದು ದೇಶದಲ್ಲಿ ಮೊದಲ ಎಂದರು. ಬೇರೇ ಬೇರೆ ರಾಜ್ಯಗಳಿಂದ ಬರುವ ರೋಗಿಗಳಿಗೂ ಇಲ್ಲಿ ಒಂದೇ ತರನಾದ ಚಿಕಿತ್ಸೆ ಒದಗಿಸಲಾಗುತ್ತದೆ. ಶೇ. 100ರಷ್ಟು ಗುಣಮಟ್ಟದ ಆರೋಗ್ಯ ಚಿಕಿತ್ಸೆ ಕೊಡುವುದು ನಮ್ಮ…