ಬಾಗಲಕೋಟೆ: ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಆಯೋಜಿಸಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಆರಿಸಿ ಕಳುಹಿಸಬೇಕು ಎಂದು ಮನವಿ ಮಾಡಿದರು. ‘ನಮ್ಮ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ.…
