ಹೈದರಾಬಾದ್: ಬಹು ನಿರೀಕ್ಷಿತ ‘ಜನ ನಾಯಗನ್’ ಚಿತ್ರದ ದೃಶ್ಯಾವಳಿ ಇಂಟರ್ನೆಟ್‌ನಲ್ಲಿ ಸೋರಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ನಟ ವಿಜಯ್ ದೇವರಕೊಂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, “#ಜನನಾಯಗನ್ ಸೋರಿಕೆ ನನಗೆ ಕೋಪ ತರಿಸುತ್ತದೆ. ವೃತ್ತಿಜೀವನದ ಆರಂಭದಲ್ಲಿ ಇಂತಹ ಘಟನೆ ಎದುರಿಸಿದ ಅನುಭವವಿದೆ. ಇದು ಕೇವಲ ನನ್ನ ವಿಷಯವಲ್ಲ; ಸಹ-ನಟರು, ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಅನೇಕ ಜನರ ಕನಸುಗಳಿಗೆ ಹೊಡೆತ ನೀಡುತ್ತದೆ” ಎಂದು ಹೇಳಿದ್ದಾರೆ. ಈ ಸಮಸ್ಯೆಯನ್ನು ತಕ್ಷಣ ಬಗೆಹರಿಸಿ, ಅದರ ಹಿಂದಿರುವವರನ್ನು ಪತ್ತೆಹಚ್ಚಬೇಕು. ಇಲ್ಲವಾದರೆ ಇದು ವ್ಯವಸ್ಥೆಯ ವೈಫಲ್ಯವೆನ್ನಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ, ಚಿತ್ರದ ಸಂಪೂರ್ಣ ತಂಡಕ್ಕೆ ತಮ್ಮ ಬೇಷರತ್ತಾದ ಬೆಂಬಲವನ್ನೂ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮುನ್ನ ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ಕೂಡ ಸೋರಿಕೆಯನ್ನು ಖಂಡಿಸಿ, “ಚಿತ್ರ ಸೋರಿಕೆ ಎಂದರೆ ಕೇವಲ ಸಿನಿಮಾ ಅಲ್ಲ; ಅದು ಹಲವರ ಕನಸು,…
Day: April 11, 2026
ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ
ಧಾರವಾಡ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಮುಗಿದಿದ್ದು,ರಾಜಕೀಯ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಇದ್ದಾರೆ. ರಾಜ್ಯದ ಜನರು ಕೂಡಾ ಕುತೂಹಲದಿಂದ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ. ಆದರೆ, ಅಷ್ಟರಲ್ಲೇ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯ ಸುದ್ದಿ ರಾಜ್ಯದ ಜನರನ್ನು ಬೆಚ್ಚಿ ಬೆಳಿಸಿದೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಶುಕ್ರವಾರ ರಾತ್ರಿ ನಗರದ ಹಾಶ್ಮಿ ನಗರದಲ್ಲಿರುವ ಮನೆಗೆ ನುಗ್ಗಿದ ಆರು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಸಂಚು ರೂಪಿಸಿದ್ದ ಆರೋಪದಲ್ಲಿ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು…
