ರಾಜ್ಯದ ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

ಬೆಂಗಳೂರು,: ರಾಜ್ಯದಲ್ಲಿ ಉಷ್ಣತೆಯ ತೀವ್ರತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಐದು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಗದಗ, ವಿಜಯಪುರ, ಬಾಗಲಕೋಟೆ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 40 ಡಿಗ್ರಿಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನ ಸಮಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ಜನರು ಮನೆಯಿಂದ ಹೊರಬರಲು ಸಹ ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ಬಿಕೋಬಿದ್ದಂತಾಗಿದ್ದು, ತುರ್ತು ಕೆಲಸವಿದ್ದವರೇ ಹೊರಗೆ ಕಾಣಿಸುತ್ತಿದ್ದಾರೆ. ವೈದ್ಯರು ಹಾಗೂ ಹವಾಮಾನ ಇಲಾಖೆ, ಅಗತ್ಯವಿಲ್ಲದೆ ಬಿಸಿಲಿನಲ್ಲಿ ಹೊರಗೆ ಹೋಗದಂತೆ, ಸಾಕಷ್ಟು ನೀರು ಸೇವಿಸುವಂತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

ಹುಬ್ಬಳ್ಳಿ, ಏ.12: ಹೈದರಾಬಾದ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ Fly91 Airlines ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ನಿಯಂತ್ರಣ ಸಮಸ್ಯೆ ಎದುರಿಸಿ, ಸುಮಾರು ಮೂರು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ಭಾನುವಾರ ನಡೆದಿದೆ. ಕೊನೆಗೆ ವಿಮಾನವನ್ನು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಮಧ್ಯಾಹ್ನ 3 ಗಂಟೆಗೆ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನ, ಸಂಜೆ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ, ಲ್ಯಾಂಡಿಂಗ್‌ಗೆ ಹಲವಾರು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗದೆ, ವಿಮಾನವು ಮುಂಡಗೋಡ, ದಾವಣಗೆರೆ, ಶಿವಮೊಗ್ಗ ಪ್ರದೇಶಗಳಲ್ಲಿ ಸುತ್ತಾಡಿತು. ಸ್ಥಿತಿ ಗಂಭೀರವಾಗುತ್ತಿದ್ದಂತೆ, ಸಂಜೆ 7.30ರ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷವೋ ಅಥವಾ ಹವಾಮಾನ ವೈಪರಿತ್ಯವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ, ವಿಮಾನ ದೀರ್ಘ…

‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

ಮುಂಬೈ: ಲಾರೆನ್ಸ್ ಆಫ್ ಪಂಜಾಬ್ ಎಂಬ ಮುಂಬರುವ ಸಾಕ್ಷ್ಯಚಿತ್ರ ಸರಣಿ, ಪಂಜಾಬ್‌ನ ಅಪರಾಧ ಜಗತ್ತಿನ ಒಳಹೊಟ್ಟೆಯನ್ನು ಅನಾವರಣಗೊಳಿಸುವ ಪ್ರಯತ್ನವಾಗಿ ಗಮನಸೆಳೆಯುತ್ತಿದೆ. ಈ ಸರಣಿ ಲಾರೆನ್ಸ್ ಬಿಷ್ಣೋಯ್ ಜೀವನ, ಅವನ ಉದಯ ಮತ್ತು ಅದರ ಹಿಂದೆ ಇರುವ ಸಾಮಾಜಿಕ-ಸಾಂಸ್ಕೃತಿಕ ಅಂಶಗಳನ್ನು ಆಳವಾಗಿ ಪರಿಶೀಲಿಸುತ್ತದೆ. ವಿದ್ಯಾರ್ಥಿ ರಾಜಕೀಯದಿಂದ ಸಂಗೀತ, ಸಿದ್ಧಾಂತ ಮತ್ತು ಮಾಧ್ಯಮ ಪ್ರಭಾವದವರೆಗೆ ಲಾರೆನ್ಸ್ ಬಿಷ್ಣೋಯ್ ಏರಿಕೆಯ ಹಾದಿಯನ್ನು ಈ ಸರಣಿ ಹತ್ತಿರದಿಂದ ಅನ್ವೇಷಿಸುತ್ತದೆ. ಆದರೆ, ನಿರೂಪಣೆ ವ್ಯಕ್ತಿಯ ಮಟ್ಟದಲ್ಲೇ ನಿಲ್ಲದೇ, ಅಪರಾಧವನ್ನು ರೂಪಿಸುವ ದೊಡ್ಡ ಸಾಮಾಜಿಕ ವ್ಯವಸ್ಥೆ ಮತ್ತು ಸಂಸ್ಕೃತಿಯ ಮೇಲೂ ಬೆಳಕು ಚೆಲ್ಲುತ್ತದೆ. ಸರಣಿಯ ನಿರ್ದೇಶಕ ರಾಘವ್ ಡಾರ್ ಹೇಳುವಂತೆ, “ಇದು ಕೇವಲ ಅಪರಾಧ ಕಥೆಯಲ್ಲ; ವ್ಯಕ್ತಿತ್ವವನ್ನು ರೂಪಿಸುವ ಪರಿಸರ, ಪ್ರಭಾವಗಳು ಮತ್ತು ವ್ಯವಸ್ಥೆಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನವಾಗಿದೆ. ಜೊತೆಗೆ, ಇಂತಹ ಪ್ರಯಾಣಗಳು ಸಮಾಜದ ಮೇಲೆ ಬೀರುವ ಪರಿಣಾಮಗಳನ್ನೂ ಗಮನದಲ್ಲಿಟ್ಟಿದ್ದೇವೆ” ಎಂದಿದ್ದಾರೆ. ನಿರ್ಮಾಪಕ ರಾಘವ್ ಖನ್ನಾ, ಪಂಜಾಬ್‌ನ…

‘ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನ್ಯಾಯ ಗೆದ್ದಿದೆ’; ಖರ್ಗೆ

ಹೋಸೂರು (ತಮಿಳುನಾಡು): ದೇಶದ ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯವನ್ನು ರಕ್ಷಿಸಲು ಜನರು ಜಾಗರೂಕರಾಗಿರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶದ ಜನರಿಗೆ ಕರೆ ನೀಡಿದ್ದಾರೆ. ತಮಿಳುನಾಡಿನ ಹೋಸೂರಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಸಿಎಂ ಎಂ.ಕೆ. ಸ್ಟಾಲಿನ್ ಉಪಸ್ಥಿತಿಯಲ್ಲಿ ಮಾತನಾಡಿದ ಖರ್ಗೆ, ತಮಿಳುನಾಡು ದೇಶಕ್ಕೆ ದಾರಿದೀಪವಾಗಿದ್ದು, ಪೆರಿಯಾರ್, ಅಣ್ಣಾ ಮತ್ತು ಕಲೈಗ್ನಾರ್ ಅವರ ಆದರ್ಶಗಳನ್ನು ಮುಂದುವರಿಸುತ್ತಿದೆ ಎಂದು ಹೇಳಿದರು. ಡಿಎಂಕೆ–ಕಾಂಗ್ರೆಸ್ ಮೈತ್ರಿಕೂಟವು ಆ ಮೌಲ್ಯಗಳನ್ನು ಕಾಪಾಡುತ್ತಿದೆ ಎಂದು ಅವರು ಶ್ಲಾಘಿಸಿದರು. ಸಂಸತ್ತಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ (ಸೀಮಾ ನಿರ್ಣಯ) ಪ್ರಯತ್ನವನ್ನು ತೀವ್ರವಾಗಿ ಟೀಕಿಸಿದ ಖರ್ಗೆ, “ಇದು ಪ್ರಜಾಪ್ರಭುತ್ವ ಸಮತೋಲನವನ್ನು ಬದಲಾಯಿಸುವ ದುರುದ್ದೇಶಪೂರಿತ ಯತ್ನವಾಗಿತ್ತು. ಕಾಂಗ್ರೆಸ್–ಡಿಎಂಕೆ ಮೈತ್ರಿ ಸೇರಿದಂತೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಿ ಅದನ್ನು ಸೋಲಿಸಿವೆ. ಇದು ನ್ಯಾಯದ ಗೆಲುವು” ಎಂದು ಹೇಳಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದಕ್ಷಿಣ ಭಾರತದ ಪ್ರಗತಿಪರ ರಾಜ್ಯಗಳ…

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ. ಡಾ. ಸಿ. ಬಸವರಾಜು

ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಕುಲಪತಿ ಪ್ರೊ. ಡಾ. ಸಿ. ಬಸವರಾಜು ಹೇಳಿದ್ದಾರೆ. ಜನರು ಕಾನೂನು ನೆರವನ್ನು ಪಡೆಯಲು ಸೂಕ್ತ ಕೇಂದ್ರಗಳಿಗೆ ಸಂಪರ್ಕಿಸುವ ಕೊಂಡಿಗಳಾಗಿ ಕೆಲಸ ಮಾಡಬೇಕೆಂದೂ ಅವರು ಸೂಚಿಸಿದ್ದಾರೆ. ಕಾನೂನು ವಿಶ್ವವಿದ್ಯಾಲಯದಲ್ಲಿ “ನವ ಯುಗದಲ್ಲಿ ಸ್ವಾತಂತ್ರ್ಯ” ವಿಷಯದಡಿ ನ್ಯಾಯಾಧೀಶ ಆರ್.ಜಿ. ದೇಸಾಯಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಸಿಗೆ ನೀರುಣಿಸುವುದು ಹಾಗೂ ದೇಸಾಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಲಪತಿ ಪ್ರೊ. ಡಾ. ಸಿ. ಬಸವರಾಜು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾತುಗಳನ್ನು ಉಲ್ಲೇಖಿಸಿ, ಸಮಾನತೆ ಇಲ್ಲದ ಸ್ವಾತಂತ್ರ್ಯಕ್ಕೆ ಮೌಲ್ಯವಿಲ್ಲ ಎಂದರು. ಸಂವಿಧಾನದ ಅನುಚ್ಛೇದ 21ರಡಿ ಎಲ್ಲರಿಗೂ ಹಕ್ಕುಗಳಿದ್ದರೂ, ಅನಕ್ಷರತೆ,…