ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25 ಮತ್ತು 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17% ಮೀಸಲಾತಿಗೆ 6%, 6% ಹಾಗೂ 5% ಇದ್ದರೆ, ಈಗಿನ 15% ಮೀಸಲಾತಿಗೆ 5.3%, 5.3% ಹಾಗೂ 4.4% ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು…
Day: April 24, 2026
ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ
ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಮಾಡಿದ ಪ್ರಮುಖ ಭರವಸೆಯನ್ನು ಈಡೇರಿಸಿದಂತಾಗಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ…
ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು. 2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು. ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು…
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ
ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು. ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ…
