ಮೇ 4 ಮತ ಎಣಿಕೆ ಹಿನ್ನೆಲೆ: ತಮಿಳುನಾಡು ಪೊಲೀಸರ ಎಲ್ಲಾ ರಜೆ ರದ್ದು

ಚೆನ್ನೈ: ಮೇ 4 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮೇ 2ರಿಂದ ಮುಂದಿನ ಆದೇಶದವರೆಗೆ ಎಲ್ಲಾ ಪೊಲೀಸ್ ಸಿಬ್ಬಂದಿಯ ರಜೆಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದಾರೆ. ಈ ನಿರ್ದೇಶನವು ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಹಿರಿಯ ಅಧಿಕಾರಿಗಳವರೆಗೆ ಎಲ್ಲಾ ಹುದ್ದೆಗಳಿಗೂ ಅನ್ವಯವಾಗಲಿದೆ. ಎಣಿಕೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಕಾಪಾಡಲು ಗರಿಷ್ಠ ಪೊಲೀಸ್ ಪಡೆ ನಿಯೋಜನೆ ಮಾಡುವುದೇ ಈ ಕ್ರಮದ ಉದ್ದೇಶವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುತ್ತಿದ್ದು, ರಾಜ್ಯದ ಸೂಕ್ಷ್ಮ ಹಾಗೂ ದುರ್ಬಲ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದೇಶದ ಪ್ರಕಾರ, ಈ ಅವಧಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ರಜೆ ಅನುಮತಿ ಇರುವುದಿಲ್ಲ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ, ಹೆರಿಗೆ ರಜೆ, ಮಕ್ಕಳ ಆರೈಕೆ ಅಥವಾ ಶೈಕ್ಷಣಿಕ ಬದ್ಧತೆಗಳಂತಹ ಅನಿವಾರ್ಯ ಕಾರಣಗಳಿಂದ…

ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ತಡೆ? ಎಂಎಲ್‌ಸಿ ರವಿ ಕುಮಾರ್ ಆರೋಪ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ST) ಪ್ರಮಾಣಪತ್ರ ನೀಡುವಲ್ಲಿ ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಅಡ್ಡಿಯುಂಟು ಮಾಡುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಎನ್. ರವಿ ಕುಮಾರ್ (N. Ravi Kumar) ಆರೋಪಿಸಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ತಳವಾರ ಸಮುದಾಯಕ್ಕೆ ಈಗಾಗಲೇ ಎಸ್‌ಟಿ ಮಾನ್ಯತೆ ದೊರೆತಿದ್ದರೂ, ಈ ಎರಡು ಜಿಲ್ಲೆಗಳ ಅರ್ಹ ಸದಸ್ಯರಿಗೆ ಇನ್ನೂ ಪ್ರಮಾಣಪತ್ರ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಸಚಿವರೊಬ್ಬರ ಹೆಸರು ಉಲ್ಲೇಖಿಸಿ, ಅವರು ಈ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. “ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ನೀಡಲೇಬೇಕು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಾತ್ರ ಇದು ನಡೆಯುತ್ತಿಲ್ಲ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಹೋರಾಟಕ್ಕೆ ಇಳಿಯುತ್ತೇವೆ” ಎಂದು ಎಚ್ಚರಿಸಿದರು. ಅಧಿಕಾರಿಗಳೊಂದಿಗೆ ನಡೆದ ಮಾತುಕತೆಯಲ್ಲಿ ಸುಮಾರು 28,000 ಎಸ್‌ಟಿ ಪ್ರಮಾಣಪತ್ರಗಳನ್ನು…

ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ನಿಷೇಧ: ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು:ಶಾಲೆ ಗಳು ಮತ್ತು ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು, ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (School Education and Literacy Department, Karnataka) ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ, “ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಜೊತೆಗೆ ಶಿಸ್ತಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಹಾಗೂ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ಉಂಟಾಗುತ್ತದೆ” ಎಂದು ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಇಂತಹ ಚಟುವಟಿಕೆಗಳನ್ನು ತಡೆಯಲು ಜಾಗೃತಿ ಮೂಡಿಸುವಂತೆ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಯಾವುದೇ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಲು ಪ್ರೇರೇಪಿಸಿದರೆ, ಆ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ…

ಎಸ್‌ಸಿ ಒಳ ಮೀಸಲಾತಿ ಜಾರಿ ಬೆನ್ನಲ್ಲೇ 56,432 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ, 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (DPAR) ಆದೇಶ ಹೊರಡಿಸಿದೆ. ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಎಸ್‌ಸಿ ಸಮುದಾಯಕ್ಕೆ ನಿಗದಿಪಡಿಸಿದ 15% ಮೀಸಲಾತಿಯನ್ನು ‘ಎ’, ‘ಬಿ’, ‘ಸಿ’ ವರ್ಗಗಳಾಗಿ ವಿಭಜಿಸಿ ಕ್ರಮವಾಗಿ 5.25%, 5.25% ಮತ್ತು 4.5% ಮೀಸಲಾತಿ ನೀಡಲಾಗಿದೆ. ಡಿಪಿಎಆರ್ ಅಧೀನ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ಕರ್ನಾಟಕ ಹೈಕೋರ್ಟ್ (Karnataka High Court) ಮಧ್ಯಂತರ ಆದೇಶದ ಅನುಸಾರವಾಗಿ ನೇಮಕಾತಿ ಮತ್ತು ಪ್ರವೇಶ ಪ್ರಕ್ರಿಯೆಗಳನ್ನು ಮುಂದುವರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ಅಂತಿಮ ತೀರ್ಪಿಗೆ ಒಳಪಟ್ಟಂತೆ ಈ ಕ್ರಮ ಜಾರಿಯಾಗಲಿದೆ. ವರ್ಗ ‘ಸಿ’ ಮೀಸಲಾತಿಯೊಳಗೆ, 20% ಹುದ್ದೆಗಳು ಎಸ್‌ಸಿ ಸಮುದಾಯದ…

Metodi di pagamento di Cricket Road: guida completa

Guida Completa al Gioco di Scommesse Cricket Road Cos’è il cricket road betting game? Il cricket road betting game è una variante di scommessa sportiva che combina elementi del cricket tradizionale con una pista digitale dove i giocatori piazzano puntate su diversi esiti di una partita. Ogni “corsa” sulla road rappresenta una possibile combinazione di risultati, e le quote variano in base alla probabilità stimata dal bookmaker. Cos’è il cricket road betting game? Come registrarsi e iniziare a giocare Bonus e promozioni disponibili su Cricket Road Metodi di pagamento e…

ಐಪಿಎಲ್ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಜಯಭೇರಿ

ಚಂಡೀಗಢ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮುಲ್ಲನ್‌ಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್‌ಗೆ ಇಳಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್ ಕಲೆಹಾಕಿ ಬೃಹತ್ ಮೊತ್ತ ದಾಖಲಿಸಿತು. ಪಂಜಾಬ್ ಪರ ಆರಂಭಿಕ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ 59 ರನ್‌ಗಳ ಉತ್ತಮ ಇನ್ನಿಂಗ್ಸ್ ಆಡಿದರೆ, ಪ್ರಿಯಾಂಶ್ ಆರ್ಯ 29 ರನ್ ಗಳಿಸಿದರು. ಬಳಿಕ ಶ್ರೇಯಸ್ ಅಯ್ಯರ್ ಹಾಗೂ ಕೂಪರ್ ಕನೋಲಿ ತಲಾ 30 ರನ್‌ಗಳ ಕೊಡುಗೆ ನೀಡಿದರು. ಅಂತಿಮವಾಗಿ ಮಾರ್ಕಸ್ ಸ್ಟೋಯ್ನಿಸ್ ಅಜೇಯ 62 ರನ್ ಸಿಡಿಸಿ ತಂಡದ ಮೊತ್ತವನ್ನು 220ರ ಗಡಿದಾಟಿಸಿದರು.…