ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

ಇತ್ತೀಚಿನ ದಿನಗಳಲ್ಲಿ ಪ್ರಿಡಿಯಾಬಿಟಿಸ್ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಪದ್ಧತಿಯತ್ತ ಜನರು ಹೆಚ್ಚು ಗಮನ ಹರಿಸುತ್ತಿದ್ದಾರೆ. ವಿಶೇಷವಾಗಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬ ಪ್ರಶ್ನೆ ಸಾಮಾನ್ಯವಾಗಿದೆ. ತಜ್ಞರ ಪ್ರಕಾರ, ಮಧುಮೇಹ ಇರುವವರು ಎಲ್ಲಾ ಸಿಹಿ ಪದಾರ್ಥಗಳನ್ನು ಸಂಪೂರ್ಣವಾಗಿ ತ್ಯಜಿಸುವ ಅಗತ್ಯವಿಲ್ಲ. ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ಹಣ್ಣುಗಳನ್ನು ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಪೈಕಿ ಸೇಬು ಉತ್ತಮ ಆಯ್ಕೆಯಾಗಿದೆ ಎಂದು ವೈದ್ಯರು ಹೇಳುತ್ತಾರೆ. ಸೇಬಿನಲ್ಲಿ ಕರಗುವ ಫೈಬರ್, ವಿಟಮಿನ್ ಸಿ ಹಾಗೂ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಜೊತೆಗೆ ಇದು ಕಡಿಮೆ ಅಥವಾ ಮಧ್ಯಮ ಗ್ಲೈಸೆಮಿಕ್ ಇಂಡೆಕ್ಸ್‌ (GI) ಹೊಂದಿರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ತಕ್ಷಣ ಏರಿಕೆಯಾಗುವುದನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಸೇಬಿನಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸಿ ಸಕ್ಕರೆ ಶೋಷಣೆಯನ್ನು ಸಮತೋಲನದಲ್ಲಿಡಲು ನೆರವಾಗುತ್ತದೆ. ಇದರಿಂದ ಹೊಟ್ಟೆ ತುಂಬಿದ ಅನುಭವವೂ…

ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಮರಳಿದ ಬಳಿಕ, ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಕುರಿತು ಕಾರ್ಯದರ್ಶಿ ಅಲ್ಲಮ ಪ್ರಭು ಪ್ರಕಟಣೆ ಹೊರಡಿಸಿದ್ದು, ದೆಹಲಿಯಲ್ಲಿ ಇರುವ ಎಲ್ಲಾ ಶಾಸಕರಿಗೂ ತಕ್ಷಣ ಬೆಂಗಳೂರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಸಭೆಗೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆಪಿಸಿಸಿ ಕಚೇರಿಯಿಂದ ಎಲ್ಲಾ ಶಾಸಕರಿಗೂ ಬೆಂಗಳೂರಿನಲ್ಲೇ ಇರುವಂತೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ. ಸಿಎಲ್‌ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಹೈಕಮಾಂಡ್‌ನ ಅಂತಿಮ ತೀರ್ಮಾನವೇ ಸಭೆಯಲ್ಲಿ ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿಂದೆ ನಡೆದಂತೆ ಚುನಾವಣೆಯ ಬದಲು ನೇರ ಘೋಷಣೆಯೇ ನಡೆಯಬಹುದು ಎನ್ನಲಾಗುತ್ತಿದೆ. ಸಭೆಯಲ್ಲಿ ರಣದೀಪ್…

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ಸಿಎಂ ಆಯ್ಕೆ ಸಂಬಂಧ ದೆಹಲಿ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಚರ್ಚೆಗಳು ನಡೆಯುತ್ತಿವೆ. ನಿರೀಕ್ಷೆಯಂತೆಯೇ ಡಿ.ಕೆ. ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರ ಬೆಂಬಲಿಗರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ ವರಿಷ್ಠರು, ಮುಂದಿನ ಸಿಎಂ ಯಾರು ಎಂಬುದರ ಬಗ್ಗೆ ಮೌನ ವಹಿಸಿದ್ದಾರೆ. ಹಾಗಾಗಿ, ಕಾಂಗ್ರೆಸ್ ಹೈಕಮಾಂಡ್ ನ ಅಧಿಕೃತ ಘೋಷಣೆ ಬಗ್ಗೆಯೇ ಕುತೂಹಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಸಿಎಂ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ. ಇನ್ನೊಂದೆಡೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅದೇ ದಿನ…

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಬೆಂಗಳೂರು: ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ತಿಮರೋಡಿ, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ರಜಾಕಾಲದ ಏಕಸದಸ್ಯ ಪೀಠ, ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಆದೇಶ ಪ್ರಕಟಿಸಿದೆ

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

ಮುಂಬೈ: ನಟಿ ಕಂಗನಾ ರನೌತ್ ಅಭಿನಯದ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಮೋಷನ್ ಪೋಸ್ಟರ್ ಗುರುವಾರ ಬಿಡುಗಡೆಗೊಂಡಿದೆ. “ದಿ ಅನ್‌ಸೀನ್ ಹೀರೋಸ್” ಎಂಬ ಶೀರ್ಷಿಕೆಯ ಪೋಸ್ಟರ್ 2008ರ ಮುಂಬೈ ಭಯೋತ್ಪಾದಕ ದಾಳಿಯ ವೇಳೆ ಧೈರ್ಯ ಪ್ರದರ್ಶಿಸಿದ ದಾದಿಯರು, ವಾರ್ಡ್ ಬಾಯ್‌ಗಳು, ಭದ್ರತಾ ಸಿಬ್ಬಂದಿ, ಕ್ಲೀನರ್‌ಗಳು ಹಾಗೂ ಸಾಮಾನ್ಯ ನಾಗರಿಕರಿಗೆ ಗೌರವ ಸಲ್ಲಿಸುತ್ತದೆ. ಚಿತ್ರದ ಕುರಿತು ಮಾತನಾಡಿದ ಕಂಗನಾ, “ಈ ಸಿನಿಮಾ ಬಿಕ್ಕಟ್ಟಿನ ಸಮಯದಲ್ಲಿ ಮಾನವೀಯತೆಯ ಗುರಾಣಿಯಾಗಿ ನಿಂತ ಹಾಡದ ವೀರರಿಗೆ ಸಮರ್ಪಣೆ. ನಿಜವಾದ ಧೈರ್ಯಕ್ಕೆ ಪದಕ ಅಥವಾ ಅಧಿಕಾರದ ಅಗತ್ಯವಿಲ್ಲ” ಎಂದರು. ಮೋಷನ್ ಪೋಸ್ಟರ್‌ನ ಪ್ರತಿಯೊಂದು ದೃಶ್ಯವೂ ತಮ್ಮ ಜೀವ ಪಣಕ್ಕಿಟ್ಟು ಇತರರನ್ನು ರಕ್ಷಿಸಿದ ಸಾಮಾನ್ಯ ಜನರ ಕಥೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು. ಚಿತ್ರದ ಬರಹಗಾರ ಮತ್ತು ನಿರ್ದೇಶಕ ಮನೋಜ್ ತಪಾಡಿಯಾ, “ಗುಂಡಿನ ದಾಳಿ ಮತ್ತು ಭೀತಿಗಿಂತಲೂ ಮೌನದಲ್ಲಿರುವ ಧೈರ್ಯವನ್ನು ಹಿಡಿಯಲು ನಾವು ಪ್ರಯತ್ನಿಸಿದ್ದೇವೆ”…

‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ತಮಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು. “ರಾಜ್ಯಸಭೆಗೆ ಹೋಗುವಂತೆ ಹೈಕಮಾಂಡ್ ಕೇಳಿತ್ತು. ಆದರೆ ನಾನು ಅದನ್ನು ವಿನಮ್ರವಾಗಿ ನಿರಾಕರಿಸಿದ್ದೇನೆ. ಕರ್ನಾಟಕ ರಾಜಕೀಯದಲ್ಲೇ ಮುಂದುವರಿಯಲು ಬಯಸುತ್ತೇನೆ” ಎಂದು ಹೇಳಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮತ್ತು ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು. “ನನ್ನ ರಾಜೀನಾಮೆ ಸ್ವಯಂಪ್ರೇರಿತ. ಹೈಕಮಾಂಡ್ ಒತ್ತಾಯದಿಂದ ಅಲ್ಲ. ನಾನು ಸಕ್ರಿಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ತಮ್ಮ ರಾಜಕೀಯ ಪಯಣವನ್ನು ನೆನಪಿಸಿಕೊಂಡ ಅವರು, “ಗ್ರಾಮೀಣ ಹಿನ್ನೆಲೆಯಿಂದ ಬಂದ ನಾನು ಶಾಸಕ, ಸಚಿವ ಅಥವಾ ಮುಖ್ಯಮಂತ್ರಿ ಆಗುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ” ಎಂದರು. ಬುದ್ಧ, ಬಸವಣ್ಣ, ಡಾ.…

ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

ಗಾಂಧಿನಗರ: ದೇಶದಲ್ಲಿರುವ ಪ್ರತಿಯೊಬ್ಬ ಅಕ್ರಮ ನುಸುಳುಕೋರರನ್ನು ಗುರುತಿಸಿ ಹೊರಹಾಕುವುದು ಕೇಂದ್ರ ಸರ್ಕಾರದ ಸಂಕಲ್ಪ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಸೋನಿಪುರ ಗ್ರಾಮದಲ್ಲಿ 340 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶ ಗಡಿಯ ಮೂಲಕ ನಡೆಯುತ್ತಿದ್ದ ಅಕ್ರಮ ನುಸುಳುವಿಕೆ ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಕಡಿಮೆಯಾಗತೊಡಗಿದೆ ಎಂದು ಹೇಳಿದರು. “ಮಮತಾ ಬ್ಯಾನರ್ಜಿ ಆಡಳಿತದ ಅವಧಿಯಲ್ಲಿ ಪ್ರತಿದಿನ ಒಳನುಸುಳುವಿಕೆ ನಡೆಯುತ್ತಿತ್ತು. ಆದರೆ ಈಗ ನುಸುಳುಕೋರರೇ ಸ್ವಯಂಪ್ರೇರಣೆಯಿಂದ ಹಿಂದಿರುಗಲು ಆರಂಭಿಸಿದ್ದಾರೆ” ಎಂದು ಶಾ ಆರೋಪಿಸಿದರು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಬಂಧನ ಕೇಂದ್ರಗಳನ್ನು ಸ್ಥಾಪಿಸಿದ್ದು, ಗಡಿ ಭದ್ರತೆ ಹಾಗೂ ಬೇಲಿ ನಿರ್ಮಾಣಕ್ಕೆ ಕ್ರಮ ಕೈಗೊಂಡಿದೆ ಎಂದರು. “ಅಕ್ರಮವಾಗಿ ದೇಶ ಪ್ರವೇಶಿಸಿದವರು ಸ್ವಯಂಪ್ರೇರಣೆಯಿಂದ ಹಿಂದಿರುಗಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದಿಲ್ಲ” ಎಂದು ಹೇಳಿದರು. ಗುರುತಿನ ಅಭಿಯಾನ ಆರಂಭಕ್ಕೂ ಮುನ್ನ…

ಸಿದ್ದರಾಮಯ್ಯ ಬಳಿಕ ಯಾರು ಸಿಎಂ?; ಕಾಂಗ್ರೆಸ್ ಒಳಜಗಳ ಬಗ್ಗೆ ವಿಜಯೇಂದ್ರ ಟೀಕೆ

ವಿಜಯನಗರ: ಕರ್ನಾಟಕದಲ್ಲಿ ಸಿದ್ದರಾಮಯ್ಯ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬುದೇ ಈಗ “ಮಿಲಿಯನ್ ಡಾಲರ್ ಪ್ರಶ್ನೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಆಡಳಿತದಲ್ಲಿ ರಾಜ್ಯ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು. “ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಮಾತ್ರ ಗಮನಹರಿಸಿದೆ. ರೈತರು, ಬಡವರು ಮತ್ತು ಯುವಕರ ಸಮಸ್ಯೆಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ,” ಎಂದು ವಿಜಯೇಂದ್ರ ಟೀಕಿಸಿದರು. ಸಿದ್ದರಾಮಯ್ಯ ರಾಜೀನಾಮೆ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಕಾಂಗ್ರೆಸ್ ಒಳಗೆ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ ಎಂದು ಅವರು ಹೇಳಿದರು. ಜಿ. ಪರಮೇಶ್ವರ, ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಯಾರೇ ಮುಖ್ಯಮಂತ್ರಿಯಾದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ. ಕರ್ನಾಟಕದ ಆರ್ಥಿಕ ಸ್ಥಿತಿ ತುಂಬಾ ಹದಗೆಟ್ಟಿದೆ ಎಂದು ವಿಜಯೇಂದ್ರ ಹೇಳಿದರು.

ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಡಿ.ಕೆ. ಶಿವಕುಮಾರ್? ಡಿಕೆಶಿ ಪಾಳಯದಲ್ಲಿ ಸಡಗರ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಗುರುವಾರ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನೊಳಗಿನ ನಾಯಕತ್ವ ಬದಲಾವಣೆಯ ಚರ್ಚೆಗೆ ಹೊಸ ತಿರುವು ಸಿಕ್ಕಿದೆ. ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಉಪಾಹಾರ ಸಭೆ ನಡೆಸಿದರು. ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳ ನಡುವೆಯೇ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಸಭೆಯ ಬಳಿಕ, ತಮ್ಮ ನಂತರ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವುದಾಗಿ ಸಿದ್ದರಾಮಯ್ಯ ಸೂಚನೆ ನೀಡಿದರೆಂದು ತಿಳಿದುಬಂದಿದೆ. ಇದರೊಂದಿಗೆ ಹಲವು ತಿಂಗಳುಗಳಿಂದ ಚರ್ಚೆಯಾಗುತ್ತಿದ್ದ ಅಧಿಕಾರ ಹಂಚಿಕೆ ಒಪ್ಪಂದದ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಕಂಡುಬಂದಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು, “ಸಿದ್ದರಾಮಯ್ಯ ಪಕ್ಷದ ಹಿರಿಯ ಹಾಗೂ ಗೌರವಾನ್ವಿತ ನಾಯಕರು. ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಅವರಿಗೆ…

ಮಹಿಳೆಯ ಹಣೆಯ ಮೇಲಿನ ಸಿಂಧೂರ ಒರೆಸಿ ಅಮಾನುಷ ವರ್ತನೆ, ಪೊಲೀಸ್ ಅಧಿಕಾರಿ ಅಮಾನತು

ಭುವನೇಶ್ವರ: ಒಡಿಶಾದ ಕೇಂದ್ರಪಾರ ಜಿಲ್ಲೆಯ ತಲ್ಚುವಾ ಮೆರೈನ್ ಪೊಲೀಸ್ ಠಾಣೆಯಲ್ಲಿ ವಿವಾಹಿತ ಮಹಿಳೆ ಮತ್ತು ಆಕೆಯ ಮಗನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಐಐಸಿ ಸಂಧ್ಯಾರಾಣಿ ಜೇನಾ ಅವರನ್ನು ಅಮಾನತುಗೊಳಿಸಲಾಗಿದೆ. ಗಿರಿಯಪಹಿ ಗ್ರಾಮದ ಅನ್ನಪೂರ್ಣ ಮಂಡಲ್ ಅವರು ಕುಟುಂಬ ಕಲಹದ ದೂರು ದಾಖಲಿಸಲು ಠಾಣೆಗೆ ತೆರಳಿದ್ದ ವೇಳೆ, ಐಐಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಹಿಳೆಯ ಕೂದಲನ್ನು ಹಿಡಿದು ಹೊಡೆದು, ಸಿಂಧೂರ ಒರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆಯ ಮಗನ ಮೇಲೂ ಠಾಣೆಯೊಳಗೆ ಹಲ್ಲೆ ನಡೆಸಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಬಳಿಕ ಸಂತ್ರಸ್ತೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಎಸ್‌ಡಿಪಿಒ ಸುಕಾಂತ ಪಾತ್ರ ಅವರಿಗೆ ದೂರು ಸಲ್ಲಿಸಿದರು. ಪ್ರಕರಣದ ಹಿನ್ನೆಲೆ ಕೇಂದ್ರಪಾರ ಎಸ್‌ಪಿ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಒಡಿಶಾ ಡಿಜಿಪಿ ವೈ.ಬಿ. ಖುರಾನಿಯಾ ಅವರು ಗಂಭೀರ ದುರ್ನಡತೆ ಮತ್ತು ಕರ್ತವ್ಯ ಲೋಪ…