ವಿಕಲಚೇತನರಿಗೆ ಸಮಗ್ರ ಉದ್ಯೋಗ, ಕೌಶಲ್ಯ ವೇದಿಕೆ ಕಲ್ಪಿಸುವ “ಆದಿದ್ವಾರ” ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು: ವಿಕಲಚೇತನರಿಗೆ ಉದ್ಯೋಗ ಅವಕಾಶ ಮತ್ತು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲು ಅವಕಾಶ ಒದಗಿಸುವ “ಆದಿದ್ವಾರ” ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಅಪ್ಲಿಕೇಷನ್‌ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಚಿವರು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂಗವಿಕಲರಿಗೆ (ಪಿಡಬ್ಲ್ಯೂಡಿಗಳು) ವಿಶೇಷ ಉದ್ಯೋಗ ಮೇಳವನ್ನು ಆಗಸ್ಟ್ 2026 ರಲ್ಲಿ ನಡೆಸಲಾಗುವುದು ಎಂದು ಘೋಷಿಸಿದರು. “ವಿಕಲಚೇತನರು ಯಾರಿಗೂ ಕಡಿಮೆ ಇಲ್ಲ. ಅವರಿಗೆ ವಿಶೇಷ ಪ್ರತಿಭೆ ಇರುತ್ತದೆ. ಕಾರ್ಪೊರೇಟ್‌ ಸಂಸ್ಥೆಗಳು ನೇಮಕಾತಿಯ ಸಮಯದಲ್ಲಿ ಅವರಿಗೆ ಸಮಾನ ಅವಕಾಶ ಮತ್ತು ಚಿಕಿತ್ಸೆಯನ್ನು ನೀಡಬೇಕು” ಎಂದು ಡಾ. ಪಾಟೀಲ್ ಹೇಳಿದರು. ಆದಿದ್ವಾರ ವೇದಿಕೆಯು ಉದ್ಯೋಗಾವಕಾಶಗಳು, ಇಂಟರ್ನ್‌ಶಿಪ್‌ಗಳು, ಕೌಶಲ್ಯ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುತ್ತದೆ. ಉದ್ಯೋಗದಾತರು ಸಮಗ್ರ…

ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಶಿವಕುಮಾರ್, ಟಿವಿಕೆ ಪಕ್ಷಕ್ಕೆ ತಮಿಳುನಾಡು ರಾಜ್ಯಪಾಲರು ಬಹುಮತ ಸಾಬೀತಿಗೆ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು.‌ ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಈ ರೀತಿ ಮಾಡಿದ್ದರು. ವಾಜಪೇಯಿ ಅವರಿಗೂ ಸಹ ಇದೇ ರೀತಿ ಸರ್ಕಾರ ರಚಿಸಲು ಅನುಮತಿ ನೀಡಿ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಟಿವಿಕೆಗೆ ಅವಕಾಶ ನೀಡದಿರುವುದು ತಪ್ಪು” ಎಂದರು. “ಮೊದಲು ಬಹುಮತ ಸಾಬೀತಿಗೆ…

ಮತ್ತೆ ಶಾಸಕರಾಗಿ ಡಿ.ಎನ್. ಜೀವರಾಜ್ ಪಯಣ ಶುರು

ಬೆಂಗಳೂರು: ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ (D. N. Jeevaraj) ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಮಧ್ಯಾಹ್ನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಅವರು ಪ್ರಮಾಣ ವಚನ ಬೋಧಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R. Ashoka) ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಉಪಸ್ಥಿತರಿದ್ದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಪ್ರತಿಧ್ವನಿ; ಕಾಂಗ್ರೆಸ್’ನಿಂದ ಕಾನೂನು ಸಮರ ಘೋಷಣೆ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಪಿತೂರಿಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಜೇಗೌಡ ಅವರ ಪರವಾಗಿ ಬಿದ್ದಿದ್ದ 255 ಸಿಂಧು ಮತಗಳನ್ನು ಅಮಾನ್ಯಗೊಳಿಸಲಾಗಿದೆ. ಮತ ಎಣಿಕೆಯ ಸಮಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಬಿಜೆಪಿ ಸದಸ್ಯರು ತಮ್ಮ ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿರುಚಿರುವುದು ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ಆದ್ದರಿಂದ ಶೃಂಗೇರಿ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ರೈಲ್ವೆ ಇಲಾಖೆಯ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು. ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಬದಿಗಿಡಲಾಗುತ್ತಿದ್ದು, ಇದು ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ತೋರಿಸುತ್ತದೆ ಎಂದು…