ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ವಿವಾಹ ವಾರ್ಷಿಕೋತ್ಸವದ ದಿನವೇ ನಾಲ್ವರು ದುರ್ಮರಣ

ತುಮಕೂರು: ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಸ್ವರ್ಣಸಂದ್ರ ನಿವಾಸಿಗಳಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಮತ್ತೋರ್ವ ಪುರುಷ ಎಂದು ಗುರುತಿಸಲಾಗಿದೆ. ಕುಮಾರ ನರಸಿಂಹಸ್ವಾಮಿ ಅವರು ನಿನ್ನೆ ಕುಟುಂಬದವರೊಂದಿಗೆ ತುಮಕೂರಿಗೆ ಬಂದಿದ್ದರು. ಇಂದು ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ಊರಿಗೆ ಹಿಂದಿರುಗುವ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದ ಬಗ್ಗೆ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪಶ್ಚಿಮ ಬಂಗಾಳ ಕೇಸರಿಮಯ; ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆ, ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ

ಕೋಲ್ಕತ್ತಾ: ಸುವೇಂದು ಅಧಿಕಾರಿ ಶನಿವಾರ ಪಶ್ಚಿಮ ಬಂಗಾಳದ ಬಿಜೆಪಿ ನೇತೃತ್ವದ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ಸಚಿವ ಸಂಪುಟದ ಐವರು ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಿದರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ನಿಸಿತ್ ಪ್ರಾಮಾಣಿಕ್, ಅಶೋಕ್ ಕೀರ್ತಾನಿಯಾ ಹಾಗೂ ಖುದಿರಾಮ್ ತುಡು ಸೇರಿದ್ದಾರೆ. ಅಧಿಕಾರಿ ಬಳಿಕ ದಿಲೀಪ್ ಘೋಷ್ ಎರಡನೇಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತಾನಿಯಾ, ಖುದಿರಾಮ್ ತುಡು ಮತ್ತು ನಿಸಿತ್ ಪ್ರಾಮಾಣಿಕ್ ಪ್ರಮಾಣ ವಚನ ಬೋಧಿಸಿದರು. ವಿವಿಧ ಸಮುದಾಯಗಳಿಗೆ ಪ್ರತಿನಿಧಿತ್ವ ಅಶೋಕ್ ಕೀರ್ತಾನಿಯಾ ಮತುವಾ ಸಮುದಾಯವನ್ನು ಪ್ರತಿನಿಧಿಸುತ್ತಿದ್ದರೆ, ಖುದಿರಾಮ್ ತುಡು ಬುಡಕಟ್ಟು ಸಮುದಾಯದ ಪ್ರತಿನಿಧಿಯಾಗಿದ್ದಾರೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮತುವಾ ಮತ್ತು ಬುಡಕಟ್ಟು ಮತದಾರರು ಹೆಚ್ಚಿದ್ದ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ದಿಲೀಪ್ ಘೋಷ್ ಇತರ ಹಿಂದುಳಿದ ವರ್ಗ (OBC)…

ಭಾರತದ ನೂತನ ಸಿಡಿಎಸ್ ಆಗಿ ಎನ್.ಎಸ್. ರಾಜಾ ಸುಬ್ರಮಣಿ ನೇಮಕ; ನೌಕಾಪಡೆ ಮುಖ್ಯಸ್ಥರಾಗಿ ಕೃಷ್ಣ ಸ್ವಾಮಿನಾಥನ್

ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹುದ್ದೆಯಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜೊತೆಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಕೃಷ್ಣ ಸ್ವಾಮಿನಾಥನ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಸಿಡಿಎಸ್ ಆಗಿರುವ ಅನಿಲ್ ಚೌಹಾಣ್ ಅವರ ಅವಧಿ ಮೇ 30ರಂದು ಅಂತ್ಯಗೊಳ್ಳಲಿದ್ದು, ಬಳಿಕ ರಾಜಾ ಸುಬ್ರಮಣಿ ಅಧಿಕಾರ ಸ್ವೀಕರಿಸಲಿದ್ದಾರೆ. ಸಿಡಿಎಸ್ ಜವಾಬ್ದಾರಿಯ ಜೊತೆಗೆ ಅವರು ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಲಿದ್ದಾರೆ. ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ ರಾಜಾ ಸುಬ್ರಮಣಿ, ಸೇನೆಯಲ್ಲಿ ದೀರ್ಘ ಅನುಭವ ಹೊಂದಿದ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಭೂಸೇನೆಯ ಉಪಮುಖ್ಯಸ್ಥರಾಗಿ ಹಾಗೂ ಸೆಂಟ್ರಲ್ ಕಮಾಂಡ್‌ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.

ಜಿನೀವಾ ಕ್ರೂಸ್ ಹಡಗಿನಲ್ಲಿ ಹ್ಯಾಂಟವೈರಸ್ ಮರಣ ಮೃದಂಗ: ಮೂವರ ಸಾವು

ಜಿನೀವಾ: ವಿಶ್ವ ಆರೋಗ್ಯ ಸಂಸ್ಥೆ (WHO) ಅಟ್ಲಾಂಟಿಕ್ ಸಾಗರದಲ್ಲಿ ಸಂಚರಿಸುತ್ತಿದ್ದ ಕ್ರೂಸ್ ಹಡಗಿನಲ್ಲಿ ಸಂಭವಿಸಿದ ಹ್ಯಾಂಟವೈರಸ್ ಸೋಂಕು ಪ್ರಕರಣಗಳ ಬಗ್ಗೆ ಆತಂಕ ವ್ಯಕ್ತಪಡಿಸಿದೆ. ಈ ಸೋಂಕಿಗೆ ಸಂಬಂಧಿಸಿದಂತೆ ಇದುವರೆಗೆ ಮೂವರು ಸಾವನ್ನಪ್ಪಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸಂಸ್ಥೆ ತಿಳಿಸಿದೆ. MV ಹೊಂಡಿಯಸ್ ಹೆಸರಿನ ಕ್ರೂಸ್ ಹಡಗು ಅರ್ಜೆಂಟೀನಾದಿಂದ ಕೇಪ್ ವರ್ಡೆಗೆ ಪ್ರಯಾಣಿಸುತ್ತಿದ್ದ ವೇಳೆ ಒಂದು ಹ್ಯಾಂಟವೈರಸ್ ಪ್ರಕರಣ ಪ್ರಯೋಗಾಲಯದಲ್ಲಿ ದೃಢಪಟ್ಟಿದ್ದು, ಇನ್ನೂ ಐದು ಶಂಕಿತ ಪ್ರಕರಣಗಳು ಪತ್ತೆಯಾಗಿವೆ. WHO ಪ್ರಕಾರ, ಸೋಂಕಿತರಲ್ಲಿ ಮೂವರು ಮೃತಪಟ್ಟಿದ್ದು, 69 ವರ್ಷದ ಬ್ರಿಟಿಷ್ ಪ್ರಜೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನ ಮೂಲ, ಹರಡುವಿಕೆ ಹಾಗೂ ವೈರಸ್‌ನ ಸ್ವರೂಪ ತಿಳಿಯಲು ಪ್ರಯೋಗಾಲಯ ಪರೀಕ್ಷೆಗಳು ಮತ್ತು ಸಾಂಕ್ರಾಮಿಕ ರೋಗಶಾಸ್ತ್ರೀಯ ತನಿಖೆಗಳು ಮುಂದುವರಿದಿವೆ. ಹಡಗಿನಲ್ಲಿ ಇದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ ಎಂದು WHO…

ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

ಹೈದರಾಬಾದ್: ವೆಂಕಟೇಶ್ ಮಹಾ ನಿರ್ದೇಶನದ ಮನೋವೈಜ್ಞಾನಿಕ ನಾಟಕ ರಾವ್ ಬಹಾದುರ್ ಚಿತ್ರದ ಬಿಡುಗಡೆಯ ದಿನಾಂಕವನ್ನು ನಿರ್ಮಾಪಕರು ಘೋಷಿಸಿದ್ದಾರೆ. ನಟ ಸತ್ಯ ದೇವ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ಜುಲೈ 3, 2026ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ. ಮೂಲತಃ ಈ ಚಿತ್ರ ಜೂನ್ 5ರಂದು ಬಿಡುಗಡೆಯಾಗಬೇಕಾಗಿತ್ತು. ಇದೀಗ ಹೊಸ ದಿನಾಂಕ ಪ್ರಕಟಿಸಿರುವ ನಿರ್ಮಾಪಕರು, “ಹೊಸ ದಿನಾಂಕ, ಮರೆಯಲಾಗದ ಸಿನಿಮಾ ಅನುಭವ” ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಹಾಗೂ ನಮ್ರತಾ ಶಿರೋಡ್ಕರ್ ಅವರ GMB ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ಪ್ರಸ್ತುತಪಡಿಸಲಾಗುತ್ತಿದೆ. A+S ಮೂವೀಸ್ ಮತ್ತು ಶ್ರೀಚಕ್ರಸ್ ಎಂಟರ್‌ಟೈನ್‌ಮೆಂಟ್ ಸಂಸ್ಥೆಗಳು ಚಿತ್ರವನ್ನು ನಿರ್ಮಿಸಿವೆ. ಚಿತ್ರದ ಕಥೆ, ಬರವಣಿಗೆ ಮತ್ತು ಸಂಕಲನದ ಜವಾಬ್ದಾರಿಯನ್ನು ನಿರ್ದೇಶಕ ವೆಂಕಟೇಶ್ ಮಹಾ ವಹಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪೋಸ್ಟರ್‌ಗಳಲ್ಲಿ ಸತ್ಯ ದೇವ್ ರಾಜಮನೆತನದ ಉಡುಪಿನಲ್ಲಿ, ಗಂಭೀರ ಹಾಗೂ ವಯಸ್ಸಾದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.…

ಫಿನ್ ಅಲೆನ್ ಸಿಡಿಲಾಟ: ಡೆಲ್ಲಿ ಕ್ಯಾಪಿಟಲ್ಸ್‌ಗೆ ತವರಿನಲ್ಲಿ ಕೆಕೆಆರ್ ಭರ್ಜರಿ ಸೋಲು

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡ ತವರಿನಲ್ಲೇ ಹೀನಾಯ ಸೋಲು ಕಂಡಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 51ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. The word Acceleration was first used in the 1530s 💨 People before that:pic.twitter.com/1ZqCS0U9e8 — KolkataKnightRiders (@KKRiders) May 8, 2026 ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 142 ರನ್ ಗಳಿಸಲಷ್ಟೇ ಶಕ್ತವಾಯಿತು. 143 ರನ್‌ಗಳ ಗುರಿ ಬೆನ್ನಟ್ಟಿದ ಕೆಕೆಆರ್ ಆರಂಭದಲ್ಲೇ ನಾಯಕ ಅಜಿಂಕ್ಯ ರಹಾನೆ ವಿಕೆಟ್ ಕಳೆದುಕೊಂಡಿತು. ಅವರು 13 ರನ್ ಗಳಿಸಿ ಔಟಾದರು. ಆದರೆ ನಂತರ ಕ್ರೀಸ್‌ಗೆ ಬಂದ ಫಿನ್ ಅಲೆನ್ ಡೆಲ್ಲಿ ಬೌಲರ್‌ಗಳ ಮೇಲೆ ಆರ್ಭಟಿಸಿದರು. ಅಲ್ಲೆನ್…