ತಮಿಳುನಾಡಿನಲ್ಲಿ ಟಿವಿಕೆಗೆ 120 ಶಾಸಕರ ಬೆಂಬಲ; ಭಾನುವಾರ ವಿಜಯ್ ಪ್ರಮಾಣವಚನ ಸಾಧ್ಯತೆ

ಚೆನ್ನೈ: ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಇದೀಗ 120 ಶಾಸಕರ ಬೆಂಬಲ ದೊರೆತಿದ್ದು, ತಮಿಳುನಾಡಿನ ರಾಜಕೀಯ ಹೈಡ್ರಾಮಾಕ್ಕೆ ತೆರೆ ಬಿದ್ದಂತಾಗಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಭಾನುವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. BREAKING: TVK Chief Vijay calls on Tamil Nadu Governor Rajendra Vishwanath Arlekar at Lok Bhavan. With support from Congress, CPI, CPI(M), VCK, and IUML, TVK has secured the backing of 121 MLAs and is now set to form the government in Tamil Nadu. pic.twitter.com/EYIPu46pca — Actor Vijay Team (@ActorVijayTeam) May 9, 2026 ಬೆಂಬಲ ಹೆಚ್ಚಿಸಿದ ಮೈತ್ರಿ ಪಕ್ಷಗಳು ವಿಜಯ್ ನೇತೃತ್ವದ ಮೈತ್ರಿಗೆ ಈಗಾಗಲೇ 116 ಶಾಸಕರ…

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

ಧರ್ಮಶಾಲಾದಲ್ಲಿ ನಡೆದ IPL 2026 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈಗೆ ಪಂಜಾಬ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 200 ರನ್‌ಗಳ ಸವಾಲಿನ ಗುರಿ ನೀಡಿತು. ಗುರಿ ಬೆನ್ನಟ್ಟಿದ ಮುಂಬೈ ಆರಂಭದಲ್ಲೇ ವೇಗವಾಗಿ ರನ್ ಕಲೆಹಾಕಿತು. ರಯಾನ್ ರಿಕಲ್ಟನ್ 48 ರನ್ ಹಾಗೂ ರೋಹಿತ್ ಶರ್ಮಾ 25 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು. ಬಳಿಕ ತಿಲಕ್ ವರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 75 ರನ್ ಸಿಡಿಸಿ ತಂಡದ ಗೆಲುವಿನ ರೂವಾರಿಯಾದರು. ಮುಂಬೈ ಇಂಡಿಯನ್ಸ್ 19.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿ ಗೆಲುವಿನ ದಡ ಸೇರಿತು. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಸತತ ಐದನೇ ಸೋಲನ್ನು ಅನುಭವಿಸಿದೆ.

CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮಾತ್ರವಲ್ಲ, ಬೆಲೆ ಏರಿಕೆಯ ಬಿಸಿ CNG ಗ್ರಾಹಕರಿಗೂ ತಟ್ಟಿದೆ. ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ತಂದಿಟ್ಟ ಫಜೀತಿಯಿಂದಾಗಿ ಭಾರತದಲ್ಲೂ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿಡೇ. ಇದರಿಂದಾಗಿ ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಯಾಗಿದೆ. ಹಾರ್ಮುಜ್ ಜಲಸಂಧಿ ಬಿಕ್ಕಟ್ಟು, ಜಾಗತಿಕ ಇಂಧನ ಮಾರುಕಟ್ಟೆಯ ಅಸ್ಥಿರತೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದರ ಏರಿಕೆಗೆ ಕಾರಣವಾಗಿದೆ ಎಂದು ಕಂಪನಿಗಳು ತಿಳಿಸಿವೆ. ದೆಹಲಿಯಲ್ಲಿ ಸಿಎನ್‌ಜಿ ದರ ₹77.09ರಿಂದ ₹79.09ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ ₹84 ತಲುಪಿದೆ. ಈ ದರ ಏರಿಕೆಯ ಬಿಸಿ ಸಾರ್ವಜನಿಕ ಸಾರಿಗೆ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ ₹3 ಏರಿಕೆ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು ₹3ರಷ್ಟು ಹೆಚ್ಚಿಸಲಾಗಿದೆ. ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಪರಿಷ್ಕೃತ ದರ ಪ್ರಕಟಿಸಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ₹94.77ರಿಂದ ₹97.77ಕ್ಕೆ ಏರಿಕೆಯಾಗಿದ್ದು, ಡೀಸೆಲ್ ₹87.67ರಿಂದ ₹90.67ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ₹102.90ರಿಂದ ₹106.17ಕ್ಕೆ ಏರಿಕೆಯಾದರೆ, ಡೀಸೆಲ್ ₹90.98ರಿಂದ ₹94.10ಕ್ಕೆ ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ₹108.74 ಮತ್ತು ಡೀಸೆಲ್ ₹95.13ಕ್ಕೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ₹106.68 ಹಾಗೂ ಡೀಸೆಲ್ ₹93.14 ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ₹103.67 ಮತ್ತು ಡೀಸೆಲ್ ₹95.25ಕ್ಕೆ ಏರಿಕೆಯಾಗಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತ ಇದುವರೆಗೆ ಇಂಧನ ದರ ಏರಿಕೆಯನ್ನು ತಪ್ಪಿಸಿತ್ತು. ಆದರೆ ಇದೀಗ ತೈಲ ಕಂಪನಿಗಳು ಬೆಲೆ ಹೆಚ್ಚಳ ಘೋಷಿಸಿವೆ. ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ…

‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

ಚೆನ್ನೈ: ‘ವರವು’ಚಿತ್ರದ ಮೇಲಿನ ಕುತೂಹಲ ನಡುವೆಯೇ, ನಿರ್ಮಾಪಕರು ನಟಿ ಸುಕನ್ಯಾ ಅವರ ಪಾತ್ರದ ಹೆಸರನ್ನು ಬಹಿರಂಗಪಡಿಸಿದ್ದಾರೆ. ಚಿತ್ರದಲ್ಲಿ ಅವರು “ಸಿಸ್ಟರ್ ಡೈಸಿ” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಓಲ್ಗಾ ಪ್ರೊಡಕ್ಷನ್ಸ್ ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಸುಕನ್ಯಾ ಅವರ ಪೋಸ್ಟರ್ ಬಿಡುಗಡೆ ಮಾಡಿದ್ದು, ಚಿತ್ರದ ಟ್ರೇಲರ್ ಈಗಾಗಲೇ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ. ಜೋಜು ಜಾರ್ಜ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ಶಾಜಿ ಕೈಲಾಸ್ ನಿರ್ದೇಶಿಸಿದ್ದಾರೆ. ಟ್ರೇಲರ್‌ನಲ್ಲಿ ಪೆರೋಲ್ ಮೇಲೆ ಬಿಡುಗಡೆಯಾಗುವ ಕೊಲೆ ಅಪರಾಧಿ ಪಾಲ್ಸನ್‌ನ ಸೇಡು ಮತ್ತು ಹಿಂಸಾತ್ಮಕ ಹೋರಾಟವನ್ನು ತೀವ್ರವಾಗಿ ಚಿತ್ರಿಸಲಾಗಿದೆ. ಪಾಲ್ಸನ್ ಪಾತ್ರದಲ್ಲಿ ಜೋಜು ಜಾರ್ಜ್ ಕಾಣಿಸಿಕೊಂಡಿದ್ದು, ಅವನ ಮೇಲೆ ಪ್ರಭಾವ ಬೀರುವ ಏಕೈಕ ವ್ಯಕ್ತಿಯಾಗಿ ಸನ್ಯಾಸಿನಿ ಸಿಸ್ಟರ್ ಡೈಸಿ ಕಾಣಿಸಿಕೊಳ್ಳುತ್ತಾರೆ. “ದ್ವೇಷದಿಂದ ಯಾರನ್ನೂ ನೋಯಿಸಬೇಡ” ಎಂದು ಅವಳು ಮನವಿ ಮಾಡುವ ದೃಶ್ಯ ಟ್ರೇಲರ್‌ನ ಪ್ರಮುಖ ಆಕರ್ಷಣೆಯಾಗಿದೆ. ಮಲಬಾರ್ ಹಿನ್ನೆಲೆಯ ಈ ಆಕ್ಷನ್-ಸರ್ವೈವಲ್ ಥ್ರಿಲ್ಲರ್ ಚಿತ್ರದಲ್ಲಿ ಮುರಳಿ ಗೋಪಿ,…

ಹಿಜಾಬ್ ಅನುಮತಿ ಕುರಿತು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಶಾಲೆಗಳಲ್ಲಿ ವಸ್ತ್ರಸಂಹಿತೆ ಇರಬೇಕೇ ಬೇಡವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶಾಸಕ ಯಶ್‍ಪಾಲ್ ಸುವರ್ಣ ಮತ್ತು ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಸುದ್ದಿಗೋಷ್ಠಿ ನಡೆಸಿದ ಸಿ.ಟಿ.ರವಿ, ಹಿಜಾಬ್‍ಗೆ ಅನುಮತಿ ನೀಡಿ, ಜನಿವಾರ- ರುದ್ರಾಕ್ಷಿಯನ್ನೂ ಎಳೆದು ತಂದು, ಕೇಸರಿ ಶಾಲಿಗೆ ನಿಷೇಧ ಹೇರಿ ಒಂದು ಸುತ್ತೋಲೆಯನ್ನು ಸರಕಾರ ಹೊರಡಿಸಿದೆ ಎಂದರು. ಬಿಜೆಪಿ, ಹಿಜಾಬ್ ವಿರೋಧಿಯಲ್ಲ; ನಾವು ಹಿಜಾಬ್ ವಿರೋಧಿಸಿಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು. ಯಾವಾಗಿನಿಂದ ಯೂನಿಫಾರಂ (ವಸ್ತ್ರಸಂಹಿತೆ) ಆರಂಭವಾಗಿದೆ? ಯಾವ ಉದ್ದೇಶಕ್ಕೆ ಅದು ಪ್ರಾರಂಭವಾಗಿದೆ? ಎಂದು ಕೇಳಿದ ಅವರು, ಅಕ್ಷರ ಮತ್ತು ಜ್ಞಾನ ಹೆಚ್ಚಿಸಬೇಕಾದ ಶಿಕ್ಷಣ ಸಚಿವರಿಗೆ ಅದರ ಉದ್ದೇಶದ ಬಗ್ಗೆಯೂ ಸ್ಪಷ್ಟತೆ ಇಲ್ಲ. ಅದರ ಇತಿಹಾಸದ ಅರಿವೂ ಇಲ್ಲ. ಕೇವಲ ಮತೀಯ ಓಲೈಕೆಯ ರಾಜನೀತಿಯ ಭಾಗವಾಗಿ ಶಾಲೆಗಳಲ್ಲಿ ಮತೀಯ ಭಾವನೆಗಳಿಗೆ ಜಾತ್ಯತೀತತೆಯ ಹೆಸರಿನಲ್ಲಿ ಅನುಮತಿ ಕೊಟ್ಟಿದ್ದಾರೆ…

BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

ನಿರ್ದೇಶಕ ಸುಭಾಷ್ ಕೆ. ರಾಜ್ ಅವರ ಕೌಟುಂಬಿಕ ಮನರಂಜನಾ ಚಿತ್ರ Blast ಇದೇ ಮೇ 28 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. AGS Entertainment ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸಿದ್ದು, ಈಗಾಗಲೇ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಲಭಿಸಿದೆ. ಫೆಬ್ರವರಿಯಲ್ಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿತ್ತು. ‘ಲವ್ ಟುಡೇ’ ಮತ್ತು ‘ಡ್ರ್ಯಾಗನ್’ ಸಿನಿಮಾಗಳ ಯಶಸ್ಸಿನ ಬಳಿಕ ಎಜಿಎಸ್ ನಿರ್ಮಿಸುತ್ತಿರುವ ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಮೂಡಿದೆ. ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್ ಈ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿರುವುದು ವಿಶೇಷ. ಸುಭಾಷ್ ಕೆ. ರಾಜ್ ಈ ಹಿಂದೆ ನಿರ್ದೇಶಕ-ನಟ ಪ್ರದೀಪ್ ರಂಗನಾಥನ್ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅರ್ಚನಾ ಕಲ್ಪತಿ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ, ಐಶ್ವರ್ಯಾ ಕಲ್ಪತಿ ಅಸೋಸಿಯೇಟ್ ಕ್ರಿಯೇಟಿವ್ ಪ್ರೊಡ್ಯೂಸರ್…