ನ್ಯೂಯಾರ್ಕ್: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮವನ್ನು 45 ದಿನಗಳವರೆಗೆ ವಿಸ್ತರಿಸಿರುವ ನಿರ್ಧಾರವನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ (Antonio Guterres) ಸ್ವಾಗತಿಸಿದ್ದಾರೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಗಳ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಯುದ್ಧ ಅಂತ್ಯಗೊಳಿಸಿ ಗಡಿಭಾಗದ ಜನರ ಸಂಕಷ್ಟ ನಿವಾರಣೆಗೆ ಕೈಗೊಳ್ಳುವ ಎಲ್ಲ ಪ್ರಯತ್ನಗಳಿಗೆ ಬೆಂಬಲ ನೀಡುವುದಾಗಿ ಗುಟೆರೆಸ್ ತಿಳಿಸಿದ್ದಾರೆ. ಜೊತೆಗೆ, ಎಲ್ಲಾ ಪಕ್ಷಗಳು ಕದನ ವಿರಾಮವನ್ನು ಸಂಪೂರ್ಣವಾಗಿ ಪಾಲಿಸಿ, ದಾಳಿಗಳನ್ನು ನಿಲ್ಲಿಸಿ ಹಾಗೂ ಅಂತರರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಗೌರವಿಸಬೇಕು ಎಂದು ಕರೆ ನೀಡಿದ್ದಾರೆ. ವಾಷಿಂಗ್ಟನ್‌ನಲ್ಲಿ ನಡೆದ ಮಾತುಕತೆಗಳ ಬಳಿಕ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಟಾಮಿ ಪಿಗೋಟ್ (Tommy Pigott) ಈ ಘೋಷಣೆ ಮಾಡಿದರು. ಇಸ್ರೇಲ್ ಮತ್ತು ಲೆಬನಾನ್ ನಡುವಿನ ಮಾತುಕತೆಗಳು ಫಲಪ್ರದವಾಗಿದ್ದು, ಏಪ್ರಿಲ್ 16ರವರೆಗೆ ಕದನ ವಿರಾಮ ಮುಂದುವರಿಯಲಿದೆ ಎಂದು ತಿಳಿಸಿದರು. ಇದರೊಂದಿಗೆ,…
Day: May 17, 2026
ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಈ ಹೊಸ ರೈಲು ಸೇವೆಯನ್ನು ಆರಂಭಿಸಲಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ (LTT) ನಡುವೆ ವಾರಕ್ಕೆ ಎರಡು ದಿನ ಈ ರೈಲು ಸಂಚರಿಸಲಿದೆ. ಶನಿವಾರ ಹಾಗೂ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ, ಭಾನುವಾರ ಮತ್ತು ಬುಧವಾರ ಮುಂಬೈನಿಂದ ಬೆಂಗಳೂರಿಗೆ ಓಡಾಟ ನಡೆಸಲಿದೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಪುಣೆ ಹಾಗೂ ಮುಂಬೈ ನಗರಗಳಿಗೆ ಈ ರೈಲು ಸಂಪರ್ಕ ಕಲ್ಪಿಸಲಿದೆ. ರೈಲಿನಲ್ಲಿ ಒಟ್ಟು 17 ಕೋಚ್‌ಗಳಿದ್ದು, ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಹಾಗೂ ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳಿವೆ.…
ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ
ಬೆಂಗಳೂರು, ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳಿದ್ದಾರೆ. ಇಲ್ಲ ಎಂದು ಯಾರಾದರೂ ಸವಾಲು ಹಾಕಿದರೆ ನಾನೇ ಅವರನ್ನು ಕರೆದುಕೊಂಡು ಹೋಗಿ ತೋರಿಸುತ್ತೇನೆ. ಇತ್ತೀಚೆಗೆ ಪೊಲೀಸ್ ಆಯುಕ್ತರು 65 ಲಕ್ಷ ರೂ. ಖರ್ಚು ಮಾಡಿ 250 ಬಾಂಗ್ಲಾ ದೇಶದವರನ್ನು ವಿಮಾನದಲ್ಲಿ ಕಳುಹಿಸಿ ಗಡಿವರೆಗೆ ಬಿಟ್ಟು ಬಂದಿದ್ದಾರೆ. ಮಹದೇವಪುರ, ಚಿಕ್ಕಮಗಳೂರು, ಕೊಡಗು ಕಾಫಿ ಎಸ್ಟೇಟ್‌ಗಳಲ್ಲಿ ಸಾವಿರಾರು ಬಾಂಗ್ಲಾ ದೇಶೀಯರಿದ್ದಾರೆ. ಇದಕ್ಕೆ ಎಸ್‌ಐಆರ್ ಅಂತ್ಯ ಹಾಡಲಿದೆ. ಗುರುತಿನ ಚೀಟಿ ಇರುವವರು ಭಯ ಪಡಬೇಕಿಲ್ಲ. ಪ್ರತಿ ಬೂತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಏಜೆಂಟ್ ಇರುವಾಗ ಅರ್ಹ, ನಿಜವಾದ ಮತದಾರರ ಹೆಸರು ರದ್ದಾಗಲು ಸಾಧ್ಯವೇ ಇಲ್ಲ ಎಂದು ಗಮನಸೆಳೆದರು. ಬಾಂಗ್ಲಾ ದೇಶದ ಮುಸ್ಲಿಮರ ಮತಗಳಿಂದ ಗೆಲ್ಲುತ್ತೇವೆಂದು…
ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?
ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, ಸಹಾಯಧನ ಪಡೆಯುವವರಿಗೆ ಆರ್ಥಿಕ ಸಹಾಯ ಸ್ಥಗಿತಗೊಂಡಿದ್ದು, ಕಳೆದ ಮೂರು ವರ್ಷದಿಂದ ಸರ್ಕಾರ ಇವರನ್ನು ಶೋಷಣೆ ಮಾಡುತ್ತಿದೆ. ಗೃಹಲಕ್ಷ್ಮಿಯ 5,000 ಕೋಟಿ ರೂ., ಅನ್ನಭಾಗ್ಯದ 700 ಕೋಟಿ ರೂ. ಇನ್ನೂ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನಾಥ ಮಕ್ಕಳ 73 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ 45,000 ಕೋಟಿ ರೂ. ಲೂಟಿಯಾಗಿದೆ. ಸಮೀಕ್ಷೆಯ ಹೆಸರಲ್ಲಿ ಇನ್ನೂ…
