ತುಮಕೂರು: ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ . ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳ ಮೂಲಕ ಕೋಟ್ಯಾಂತರ ಕುಟುಂಬಗಳ ಬದುಕಿಗೆ ಆಶಾಕಿರಣವಾಗಿದ್ದೇವೆ. ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದೆ ಎಂದು ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹೇಳಿದ್ದಾರೆ. ತುಮಕೂರಿನಲ್ಲಿ ಹಮ್ಮಿಕೊಂಡಿದ್ದ “3 ವರ್ಷಗಳ ಸಾಧನೆಯ ಸೇವೆಯ ಸಮರ್ಪಣೆ” ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು, “ಸರ್ವ ಜನಾಂಗದ ಅಭಿವೃದ್ಧಿಯ ಸರ್ಕಾರ ಕಾಂಗ್ರೆಸ್ ಸರ್ಕಾರ” ಎಂದು ಅವರು ಹೇಳಿದರು. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಹಾಗೂ ಉದ್ಯೋಗ ಸೃಷ್ಟಿ ಕ್ಷೇತ್ರಗಳಲ್ಲಿಯೂ ರಾಜ್ಯ…
Day: May 19, 2026
2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ
ತುಮಕೂರು: 2028ರ ವಿಧಾನಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಅಂಗವಾಗಿ ತುಮಕೂರಿನಲ್ಲಿ ಆಯೋಜಿಸಿದ್ದ “ಸಾರ್ಥಕ ಸೇವೆಯ ಸಮರ್ಪಣೆ” ಸಮಾವೇಶದಲ್ಲಿ ಮಾತನಾಡಿದ ಅವರು, 136 ಶಾಸಕರನ್ನು ಗೆಲ್ಲಿಸುವ ಮೂಲಕ ಜನರು ಕಾಂಗ್ರೆಸ್ ಮೇಲೆ ವಿಶ್ವಾಸ ತೋರಿದ್ದು, ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದರು. “2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು. ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳನ್ನು ಪ್ರಸ್ತಾಪಿಸಿದ ಶಿವಕುಮಾರ್, ಕಾಂಗ್ರೆಸ್ ಜಾರಿಗೆ ತಂದಿರುವ ಕಲ್ಯಾಣ ಮಾದರಿಯನ್ನು ಈಗ ಇತರೆ ರಾಜ್ಯಗಳಲ್ಲೂ ಅನುಸರಿಸಲಾಗುತ್ತಿದೆ ಎಂದು ಹೇಳಿದರು. “ಮೊದಲಿಗೆ ಖಾತರಿ ಯೋಜನೆಗಳನ್ನು ಟೀಕಿಸಿದವರು, ಇಂದು ಅದನ್ನೇ ನಕಲು ಮಾಡುತ್ತಿದ್ದಾರೆ. ನಮ್ಮ ಯೋಜನೆಗಳು ಇಡೀ ದೇಶಕ್ಕೆ…
ಮತ್ತೊಮ್ಮೆ ಇಂಧನ ದರ ಏರಿಕೆ: ಸಾರ್ವಜನಿಕರಿಗೆ ಬೆಲೆ ಬಿಸಿ
ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿದ್ದು, ಸಾರ್ವಜನಿಕರಿಗೆ ಬೆಲೆ ಬಿಸಿ ಮತ್ತಷ್ಟು ಹೆಚ್ಚಾಗಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ. ಕಳೆದ ಶುಕ್ರವಾರ ತೈಲ ಕಂಪನಿಗಳು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಿದ್ದವು. ಇದೀಗ ಮಂಗಳವಾರ ಬೆಳ್ಳಂಬೆಳಗ್ಗೆ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಸರಾಸರಿ 90 ಪೈಸೆ ಏರಿಕೆ ಮಾಡಲಾಗಿದೆ. ಇಂಧನ ದರ ಏರಿಕೆಯಿಂದ ವಾಹನ ಸವಾರರು, ಸಾರಿಗೆ ಕ್ಷೇತ್ರ ಹಾಗೂ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯದ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ದರ: ದೆಹಲಿ – ₹98.64 (+0.87) ಕೋಲ್ಕತಾ – ₹109.70 (+0.96) ಮುಂಬೈ – ₹107.59…
ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್‌ಕೆ ಬಹುತೇಕ ಔಟ್
ಚೆನ್ನೈ: ಐಪಿಎಲ್ ಟೂರ್ನಿಯ ಸೋಮವಾರ ನಡೆದ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್ ಹಂತಕ್ಕೇರಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಕನಸು ಬಹುತೇಕ ಭಗ್ನವಾಗಿದೆ. ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿತು. 181 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 19 ಓವರ್‌ಗಳಲ್ಲೇ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಇಶಾನ್ ಕಿಶನ್ ಅವರ ಸಮಯೋಚಿತ 70 ರನ್‌ಗಳ ಆಕರ್ಷಕ ಇನ್ನಿಂಗ್ಸ್ ಹೈದರಾಬಾದ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಚೆನ್ನೈ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿತ್ತು. ಆದರೆ ನಿರ್ಣಾಯಕ…
