ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ, ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಕೆಪಿಎಸ್ ಶಾಲೆಗಳನ್ನು ಸಂಪೂರ್ಣವಾಗಿ ಸಿದ್ಧಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಒಂದು ಕೆಪಿಎಸ್ ಶಾಲೆಯಲ್ಲಿ ಸುಮಾರು 1200 ಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಒಂದೇ ಆವರಣದಲ್ಲಿ ಶಿಕ್ಷಣ ದೊರೆಯಲಿದೆ. ಈ ವರ್ಷವೇ 800 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಟೆಂಡರ್ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಿಎಂ ಸೂಚಿಸಿದರು. ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ಸೌಲಭ್ಯ ಕಲ್ಪಿಸುವ ಸಾಧ್ಯತೆಗಳ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಶಿಕ್ಷಕರ ನೇಮಕಾತಿ ಕುರಿತ ಪ್ರಸ್ತಾವನೆಯನ್ನು…
Day: May 21, 2026
‘ಹೊಸ ಪೀಠ ಸ್ಥಾಪನೆ ಉದ್ದೇಶ ಇಲ್ಲ’; ಹರಿಹರ ಪೀಠ ವಿವಾದಕ್ಕೆ ಪರಿಹಾರ ದಿಕ್ಕಿನಲ್ಲಿ ಹೆಜ್ಜೆ: ಯತ್ನಾಳ್
ಹುಬ್ಬಳ್ಳಿ: ಯಾವುದೇ ಹೊಸ ಪೀಠ ಸ್ಥಾಪನೆ ಅಥವಾ ಮರುಸ್ಥಾಪನೆಯ ಉದ್ದೇಶ ಇಲ್ಲ. ಈಗಿರುವ ಮಠಗಳನ್ನು ಸುಧಾರಿಸುವುದೇ ನಮ್ಮ ಗುರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಹರಿಹರ ಪೀಠದ ವಿವಾದ ಬಗೆಹರಿಸಲು ಎರಡೂ ಕಡೆಯವರನ್ನು ಸೇರಿಸಿ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು. ಟ್ರಸ್ಟ್ ಲೆಕ್ಕಪತ್ರ ಸೇರಿದಂತೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದು, ಸಮಾಜಕ್ಕೆ ಧಕ್ಕೆ ಉಂಟುಮಾಡುವ ಘಟನೆಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ ಎರಡೂ ಪಾಳಯಗಳ ನಡುವೆ ಸಮನ್ವಯ ಸಾಧಿಸಿ ಸಮಸ್ಯೆ ನಿವಾರಣೆ ಮಾಡುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು. “ಶೇಕಡಾ 90ರಷ್ಟು ಸಮಸ್ಯೆ ಬಗೆಹರಿದಿದೆ. ಹರಿಹರ ಪೀಠದ ಜೊತೆಗೆ ಕೂಡಲಸಂಗಮ ಪೀಠದ ವಿವಾದವನ್ನೂ ಬಗೆಹರಿಸಲಾಗುವುದು” ಎಂದು ಯತ್ನಾಳ್ ಹೇಳಿದರು. ಸಭೆಯ ಬಳಿಕ ಮಾತನಾಡಿದ ಅವರು, ಎರಡೂ ಕಡೆಯವರ ಮನಸ್ತಾಪ ನಿವಾರಿಸಲು ಪ್ರಯತ್ನ ಮುಂದುವರಿದಿದೆ. ಸಮಾಜದಲ್ಲಿ ಉಂಟಾಗಿರುವ…
