ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಶುಕ್ರವಾರದ ಮಹತ್ವದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ 255 ರನ್ ಕಲೆಹಾಕಿತು. ಬೃಹತ್ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಪರಿಣಾಮ, ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ದಾಖಲಿಸಿತು. ಈ ಪಂದ್ಯದಲ್ಲಿ 255 ರನ್ ಸಿಡಿಸಿದ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ಧ ಎರಡು ಬಾರಿ 250ಕ್ಕೂ ಅಧಿಕ ಮೊತ್ತ ಪೇರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದೆ. ಇನ್ನೊಂದೆಡೆ, ಈ ಸೋಲಿನೊಂದಿಗೆ ಆರ್‌ಸಿಬಿ ತಂಡ ಹೀನಾಯ ದಾಖಲೆಯೊಂದನ್ನು ತನ್ನ ಹೆಸರಿಗೆ ಸೇರಿಸಿಕೊಂಡಿದೆ. ಆದರೂ ಅಂಕಪಟ್ಟಿಯಲ್ಲಿ…
Day: May 23, 2026
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸ ಮುಗಿಸಿಕೊಂಡು ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿಯೊಂದು ಕ್ರೂಸರ್ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಐವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಒಂದೇ ಕುಟುಂಬದ ಐವರು ಒಂದೇ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಇಂಗಳಗಿ ಗ್ರಾಮದಲ್ಲಿ ಶೋಕ ಮಡುಗಟ್ಟುವಂತೆ…
ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ
ಹೈದರಾಬಾದ್: ನಿರ್ದೇಶಕ ಅಜಯ್ ನಾಗ್ ವಿ ಅವರ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ‘ಸಮವರ್ತಿ’ ಎಂದು ಶೀರ್ಷಿಕೆ ಇಡಲಾಗಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ನಟ ಸತ್ಯದೇವ್ ಕಾಂಚರಣ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಸಿನಿಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದ್ದಾರೆ. ಪೋಸ್ಟರ್ ಹಂಚಿಕೊಂಡಿರುವ ಸತ್ಯದೇವ್, “ಈ ಬಾರಿ ಭರವಸೆಯನ್ನು ತಲುಪಿಸಲಾಗುವುದು. ಅಜಯ್ ನಾಗ್ ವಿ ಅವರೊಂದಿಗೆ ಕೆಲಸ ಮಾಡುವುದು ವಿಶೇಷ ಅನುಭವ” ಎಂದು ಬರೆದುಕೊಂಡಿದ್ದಾರೆ. This time the promise will be DELIVERED !!#Samavarthi @AjayNagV Love you for everything. Watching him direct is poetry in motion. A tiger hug to my beloved producers @JakkidiShivaIYC @Shashidhar1909@Rudra_Pictures @PanchabhutaOffl pic.twitter.com/LsUCZc9ZIQ — Satya Dev (@ActorSatyaDev) May 22, 2026 ‘ಸಮವರ್ತಿ’…
ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವಿಕಾಸ ವರ್ಗ ಸಮಾರೋಪ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ 21 ದಿನಗಳ ‘ಕಾರ್ಯಕರ್ತ ವಿಕಾಸ ವರ್ಗ ಪ್ರಥಮ (ಸಾಮಾನ್ಯ)’ ಶಿಬಿರದ ಸಮಾರೋಪ ಸಮಾರಂಭವು ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿ ಬಿ.ಎಸ್. ರಾಜು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಎಂ. ಜಯಪ್ರಕಾಶ್ ಸಮಾರೋಪ ಭಾಷಣ ಮಾಡಿದರು. ಶಿಬಿರದ ವರ್ಗಾಧಿಕಾರಿ ಗಿರೀಶ್ ಹೆಬ್ಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ‘ಕಾರ್ಯಕರ್ತ ವಿಕಾಸ ವರ್ಗ ಪ್ರಥಮ’ವು ಸಂಘದ ಕಾರ್ಯಕರ್ತರಿಗೆ ನೀಡಲಾಗುವ ಮೂಲಭೂತ ಹಾಗೂ ಪ್ರಮುಖ ತರಬೇತಿ ಶಿಬಿರವಾಗಿದೆ. ಸ್ವಯಂಸೇವಕರಲ್ಲಿ ಶಿಸ್ತು, ದೈಹಿಕ ಸಾಮರ್ಥ್ಯ, ಬೌದ್ಧಿಕ ಜಾಗೃತಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಈ ತರಬೇತಿ ನಡೆಸಲಾಗುತ್ತದೆ. ಸಾಮಾನ್ಯವಾಗಿ 21 ದಿನಗಳ ಕಾಲ ನಡೆಯುವ ಈ ವಸತಿ ಶಿಬಿರದಲ್ಲಿ ದೈಹಿಕ ವ್ಯಾಯಾಮ, ಯೋಗ, ದಂಡ ತರಬೇತಿ,…
