ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ

ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಹಿಮಾಚಲ ಪ್ರದೇಶ ಸಿಎಂ ಸುಖವೇಂದರ್ ಸಿಂಗ್,  ತೆಲಂಗಾಣ ಸಿಎಂ ವೇಮಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಸಂಸತ್ ಸದಸ್ಯರಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಮೊದಲಾದ ನಾಯಕರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಜನತೆಗೆ ನಮಸ್ಕರಿಸಿ, ಅಜ್ಜಯ್ಯ ಫೋಟೋಗೆ ನಮಿಸಿ, ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡು ವೀರ ಅಜ್ಜಯರ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ ವೈಖರಿ ಗಮನಸೆಳೆಯಿತು. ಇದೇ ವೇಳೆ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದರು. ಸಚಿವರಾಗಿ ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ,…

ವಿಧಾನಸಭೆ ಸ್ಪೀಕರ್, ಮೇಲ್ಮನೆ ಸಭಾಪತಿ ಬದಲಾವಣೆಗೂ ಕಾಂಗ್ರೆಸ್ ತಯಾರಿ

ಬೆಂಗಳೂರು (ANU): ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಸ್ಥಾನಗಳಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರು ಸಂಪುಟಕ್ಕೆ ಸೇರುವ ಸಾಧ್ಯತೆ ಇದ್ದು, ಸಚಿವ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಅವರಿಗೆ ಮಂತ್ರಿ ಸ್ಥಾನ ನೀಡಲಾಗಬಹುದು ಎನ್ನಲಾಗಿದೆ. 2023ರಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಖಾದರ್ ಅವರನ್ನು ನಂತರ ವಿಧಾನ ಪರಿಷತ್ ಸಭಾಪತಿಯನ್ನಾಗಿ ಮಾಡಲಾಗಿತ್ತು. ಸಂಪುಟ ಪುನರ್‌ರಚನೆ ವೇಳೆ ಖಾದರ್ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿ ಅವರು ತೆರವುಗೊಳಿಸಬಹುದಾದ ಸ್ಥಾನಕ್ಕೆ ಹೊಸ ಸದಸ್ಯರನ್ನು ಸ್ಪೀಕರ್ ಆಗಿ ನೇಮಿಸುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ. ಇತ್ತ, ವಿಧಾನ ಪರಿಷತ್‌ನಲ್ಲಿಯೂ ಸಮೀಕರಣಗಳು ಕಾಂಗ್ರೆಸ್ ಪರವಾಗಿ ಅನುಕೂಲಕರವಾಗುವ ಸಾಧ್ಯತೆ ಇದೆ. ಜೂನ್…

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಅತ್ಯುನ್ನತ ನೀತಿ ನಿರ್ಧಾರ ಕೈಗೊಳ್ಳುವ ಘಟಕವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದು, ಪಕ್ಷದ ರಾಷ್ಟ್ರೀಯ ಮಟ್ಟದ ಪ್ರಮುಖ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ. ಈ ಹಿಂದೆ 2018ರಲ್ಲಿ ಆಗಿನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೈಗೊಂಡಿದ್ದ ಸಂಘಟನಾ ಪುನರ್ರಚನೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಸಿಡಬ್ಲ್ಯೂಸಿ ಸದಸ್ಯರಾಗಿ ನೇಮಕ ಮಾಡಲಾಗಿತ್ತು. ಬಳಿಕ 2019ರಲ್ಲಿ ಅವರು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯಿಂದ ಅವರನ್ನು ಕೈಬಿಡಲಾಗಿತ್ತು. ಈಗ ಮತ್ತೆ ಸಿದ್ದರಾಮಯ್ಯ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಪಕ್ಷದ ರಾಷ್ಟ್ರೀಯ ಮಟ್ಟದ ಚರ್ಚೆಗಳು, ನೀತಿ ನಿರ್ಧಾರಗಳು ಹಾಗೂ…

ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

ನವದೆಹಲಿ: ನೈಋತ್ಯ ಮುಂಗಾರು ಜೂನ್ 4ರಂದು ಕೇರಳ ಕರಾವಳಿಯನ್ನು ಅಧಿಕೃತವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕೆಲವೆಡೆ ಭಾರೀ ಮಳೆಯೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಇನ್ನೊಂದೆಡೆ, ಕೇರಳ ಪ್ರವೇಶದ ಕೆಲವೇ ದಿನಗಳಲ್ಲಿ ಮುಂಗಾರು ಕರ್ನಾಟಕದತ್ತ ಚಲಿಸುವ ಸಾಧ್ಯತೆ ಇದೆ. ಹವಾಮಾನ ತಜ್ಞರ ಪ್ರಕಾರ, ಜೂನ್ 7 ಅಥವಾ 8ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗುವ ಸಾಧ್ಯತೆ ಇದೆ. ಈ ಬಾರಿ ‘ಎಲ್ ನಿನೋ’ ಪರಿಣಾಮದ ಹಿನ್ನೆಲೆಯಲ್ಲಿ ದೇಶದ ಹಲವೆಡೆ ಮಳೆಯ ಪ್ರಮಾಣ ಸಾಮಾನ್ಯ ಮಟ್ಟಕ್ಕಿಂತ ಸ್ವಲ್ಪ…

ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

ನವದೆಹಲಿ: ಬಲಿಷ್ಠ, ಸಮೃದ್ಧ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯದ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಶಿಕ್ಷಣ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಪ್ರಮುಖ ವಿದ್ಯಾರ್ಥಿವೇತನ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಭಾರತ ಪ್ರತಿಭಾವಂತ ಯುವಜನರಿಂದ ಸಮೃದ್ಧವಾಗಿದ್ದು, ಸೂಕ್ತ ಅವಕಾಶ, ಮಾರ್ಗದರ್ಶನ ಹಾಗೂ ಬೆಂಬಲ ದೊರೆತರೆ ಹಳ್ಳಿಗಳು, ದೂರದ ಪ್ರದೇಶಗಳು ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳು ಕೂಡ ಗಮನಾರ್ಹ ಸಾಧನೆ ಮಾಡಬಹುದು ಎಂದು ಹೇಳಿದರು. ವಿದ್ಯಾರ್ಥಿವೇತನ ಯೋಜನೆಗಳು ಕೇವಲ ಆರ್ಥಿಕ ನೆರವಿಗೆ ಸೀಮಿತವಾಗಿಲ್ಲ. ಅವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪನ್ಮೂಲಗಳ ಕೊರತೆಯನ್ನು ಮೀರಿ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ನೆರವಾಗುವ ಮಹತ್ವದ ವೇದಿಕೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು. “ಶಿಕ್ಷಣವು ವ್ಯಕ್ತಿಯನ್ನು ಸ್ವಾವಲಂಬಿ, ಜಾಗೃತ ಹಾಗೂ ಸಮರ್ಥನನ್ನಾಗಿ ರೂಪಿಸುವ ಅತ್ಯಂತ ಪರಿಣಾಮಕಾರಿ…