ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಕಚೇರಿಯ ಪ್ರಮುಖ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್)ಯಾಗಿ ನೇಮಕ ಮಾಡಲಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ. ಇದೇ ವೇಳೆ, ರಾಜೇಂದ್ರ ಚೋಳನ್ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೊಂದಿರುವ ಹೆಚ್ಚುವರಿ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ. ಮತ್ತೊಂದೆಡೆ, ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ಅವರನ್ನು ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಸರ್ಕಾರದ ಆದೇಶದ ಪ್ರಕಾರ, ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರ ವೇತನ ಮತ್ತು ಇತರೆ ಸೌಲಭ್ಯಗಳು ರಾಜ್ಯದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮನಾಗಿರಲಿವೆ. ಅತೀಕ್ ಎಲ್.ಕೆ.…

ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಕಳೆದ ಮೂರು ವರ್ಷಗಳ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಮುಖ್ಯಮಂತ್ರಿ ಬದಲಾವಣೆಯಿಂದ ಮಾತ್ರ ರಾಜ್ಯದ ಸ್ಥಿತಿ ಬದಲಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ ಮೂರು ವರ್ಷಗಳ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಮುರಿದ ಭರವಸೆಗಳ ಪರಿಣಾಮವನ್ನು ಹೊಸ ಮುಖ್ಯಮಂತ್ರಿಯೂ ಎದುರಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಅವರು ಕೆಲಸ ಮಾಡಲಿ ಎಂದು ಹಾರೈಸುತ್ತೇನೆ. ಆದರೆ ಈ ಬದಲಾವಣೆಯಿಂದ ರಾಜ್ಯದ ಜನರಲ್ಲಿ ಯಾವುದೇ ಹೊಸ ನಿರೀಕ್ಷೆ ಮೂಡಿಲ್ಲ ಎಂಬುದು ವಾಸ್ತವ,” ಎಂದು ಅಶೋಕ್ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ, ವರ್ಗಾವಣೆ ದಂಧೆ,…

ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಲವು ಜನಪರ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ಹಿಡಿದು ರಸ್ತೆ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಘೋಷಿಸುವವರೆಗೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಹೊಸ ಆಡಳಿತದ ದಿಕ್ಕು ನಿರ್ಧರಿಸುವ ಉದ್ದೇಶದಿಂದ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು. ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಅರ್ಜಿ ವಿತರಣೆ ಹಾಗೂ ಅನುಷ್ಠಾನದ ಕುರಿತು ಸಾರಿಗೆ ಇಲಾಖೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ನಗರ ಹಾಗೂ ಪಟ್ಟಣ ಪ್ರದೇಶಗಳ ಮೂಲಸೌಕರ್ಯ…