ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

ವಾಷಿಂಗ್ಟನ್: ಇರಾನ್ ಜೊತೆಗಿನ ಪ್ರಸ್ತಾವಿತ ಒಪ್ಪಂದ ಅಂತಿಮಗೊಂಡರೆ ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಕುಸಿತವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಒಪ್ಪಂದದ ನಿರೀಕ್ಷೆಯಿಂದಲೇ ಮಾರುಕಟ್ಟೆಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿವೆ ಎಂದರು. “ಷೇರು ಮಾರುಕಟ್ಟೆ ಏರಿಕೆ ಕಂಡಿದ್ದು, ಹೂಡಿಕೆದಾರರು ಈ ಬೆಳವಣಿಗೆಯನ್ನು ಸ್ವಾಗತಿಸಿದ್ದಾರೆ” ಎಂದು ಹೇಳಿದರು. ಮಧ್ಯಪ್ರಾಚ್ಯದಲ್ಲಿ ಸ್ಥಿರತೆ ಹೆಚ್ಚುವುದರಿಂದ ಹಾಗೂ ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಸಾಗಣೆ ಮಾರ್ಗಗಳು ಪುನರಾರಂಭಗೊಂಡರೆ ಇಂಧನ ಪೂರೈಕೆ ಸುಗಮವಾಗಲಿದೆ. ಇದರಿಂದ ತೈಲ ಬೆಲೆಗಳು ಮತ್ತಷ್ಟು ಇಳಿಯಬಹುದು ಎಂದು ಟ್ರಂಪ್ ಅಭಿಪ್ರಾಯಪಟ್ಟರು. ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರ ಹೊಂದದಂತೆ ಮಾಡುವ ವ್ಯವಸ್ಥೆಯೂ ಒಪ್ಪಂದದ ಭಾಗವಾಗಿದೆ ಎಂದು ಅವರು ಹೇಳಿದರು. ಈ ಒಪ್ಪಂದ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಸಹಿ ಆಗುವ ಸಾಧ್ಯತೆಯಿದೆ ಎಂದರು. ಹಾರ್ಮುಜ್ ಜಲಸಂಧಿ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾಗಿದ್ದು, ಅಲ್ಲಿನ ಬೆಳವಣಿಗೆಗಳು ಜಾಗತಿಕ ಇಂಧನ ಮಾರುಕಟ್ಟೆಗಳ…

ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

ವಾಷಿಂಗ್ಟನ್: ಇರಾನ್ ವಿರುದ್ಧ ಯೋಜಿಸಲಾಗಿದ್ದ ಅಮೆರಿಕದ ಮಿಲಿಟರಿ ದಾಳಿಗಳನ್ನು ರದ್ದುಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್‌ನೊಂದಿಗೆ ನಡೆದ ಮಾತುಕತೆಗಳು ಮಹತ್ವದ ಹಂತ ತಲುಪಿದ್ದು, ಒಪ್ಪಂದದ ಪ್ರಮುಖ ಅಂಶಗಳಿಗೆ ಒಪ್ಪಿಗೆ ದೊರೆತಿದೆ ಎಂದು ಅವರು ತಿಳಿಸಿದ್ದಾರೆ. ಟ್ರುತ್ ಸೋಷಿಯಲ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ರಾಜತಾಂತ್ರಿಕ ಪ್ರಕ್ರಿಯೆಗೆ ಅವಕಾಶ ನೀಡುವ ಉದ್ದೇಶದಿಂದ ದಾಳಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರಸ್ತಾವಿತ ಒಪ್ಪಂದವು ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯದಂತೆ ಖಚಿತಪಡಿಸಲಿದೆ ಎಂದು ಅವರು ತಿಳಿಸಿದ್ದಾರೆ. ಒಪ್ಪಂದದ ಅಂತಿಮ ದಾಖಲೆಗಳು ಸಿದ್ಧವಾಗುತ್ತಿದ್ದು, ಕೆಲವೇ ದಿನಗಳಲ್ಲಿ ಅಧಿಕೃತ ಸಹಿ ನಡೆಯುವ ಸಾಧ್ಯತೆಯಿದೆ ಎಂದು ಟ್ರಂಪ್ ಹೇಳಿದ್ದಾರೆ. ಇಸ್ರೇಲ್, ಸೌದಿ ಅರೇಬಿಯಾ, ಯುಎಇ, ಕತಾರ್, ಬಹ್ರೇನ್, ಕುವೈತ್, ಜೋರ್ಡಾನ್, ಈಜಿಪ್ಟ್ ಹಾಗೂ ಟರ್ಕಿ ಸೇರಿದಂತೆ ಹಲವು ಪ್ರಾದೇಶಿಕ ರಾಷ್ಟ್ರಗಳು ಸಮಾಲೋಚನೆಗಳಲ್ಲಿ ಭಾಗಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಒಪ್ಪಂದಕ್ಕೆ ಅಧಿಕೃತವಾಗಿ ಸಹಿ…

ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

ನವದೆಹಲಿ: ಕಟ್ಟಡಗಳು ಮತ್ತು ಆಸ್ತಿಗಳಲ್ಲಿನ ಡಿಜಿಟಲ್ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಪರಿಷ್ಕೃತ ‘ರೇಟಿಂಗ್ ಕೈಪಿಡಿ 2026’ ಅನ್ನು ಬಿಡುಗಡೆ ಮಾಡಿದೆ. ಡಿಜಿಟಲ್ ಸಂಪರ್ಕಕ್ಕಾಗಿ ಗುಣಲಕ್ಷಣಗಳ ಪರಿಷ್ಕೃತ ರೇಟಿಂಗ್ ನಿಯಮಗಳು, 2024ರ ಅಡಿಯಲ್ಲಿ ಈ ಕೈಪಿಡಿಯನ್ನು ಬಿಡುಗಡೆ ಮಾಡಲಾಗಿದ್ದು, ಕಟ್ಟಡಗಳ ಒಳಗಿನ ಡಿಜಿಟಲ್ ಮೂಲಸೌಕರ್ಯವನ್ನು ಪಾರದರ್ಶಕ, ಪ್ರಮಾಣೀಕೃತ ಮತ್ತು ತಂತ್ರಜ್ಞಾನ-ತಟಸ್ಥ ರೀತಿಯಲ್ಲಿ ಮೌಲ್ಯಮಾಪನ ಮಾಡಲು ಇದು ಸಹಾಯ ಮಾಡಲಿದೆ ಎಂದು TRAI ತಿಳಿಸಿದೆ. 2024ರಲ್ಲಿ TRAI ಪರಿಚಯಿಸಿದ ನಿಯಮಗಳ ಮುಂದುವರಿದ ಭಾಗವಾಗಿ ಈ ಹೊಸ ಕೈಪಿಡಿ ರೂಪಿಸಲಾಗಿದೆ. ಗ್ರಾಹಕರು ಕಟ್ಟಡಗಳ ಒಳಗೆ ಎದುರಿಸುವ ಸಂಪರ್ಕ ಸಮಸ್ಯೆಗಳನ್ನು ಪರಿಹರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಹೊಸ ಕೈಪಿಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ಬಹು-ಹಂತದ ಮೌಲ್ಯಮಾಪನ ವ್ಯವಸ್ಥೆ, ಐಚ್ಛಿಕ ಡಿಜಿಟಲ್ ಸಂಪರ್ಕ ಲೆಕ್ಕಪರಿಶೋಧನೆ ಮತ್ತು ಮೂಲಸೌಕರ್ಯ ಮೌಲ್ಯಮಾಪನದಲ್ಲಿ ಹೆಚ್ಚಿನ ನಮ್ಯತೆ ನೀಡಲಾಗಿದೆ. ಫೈಬರ್ ಮತ್ತು…

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ…

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯಗೊಂಡ ಬಳಿಕ ಯಾವುದೇ ಅಭ್ಯರ್ಥಿ ಎದುರಾಳಿಯಾಗಿ ಉಳಿಯದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಘೋಷಿಸಿದರು. ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ಈ ಕುರಿತು ಅಧಿಕೃತ ಘೋಷಣೆ ಮಾಡಿದರು. ರಾಜ್ಯಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿರುವುದು ಹಾಗೂ ಬಿಜೆಪಿ ಒಂದು ಸ್ಥಾನ ಪಡೆದಿರುವುದು ವಿಧಾನಸಭೆಯಲ್ಲಿನ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ನಡೆದಿದೆ.

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ನೀಡಲಾದ ಅನುದಾನದಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿರುವುದು ಉದ್ದೇಶಪೂರ್ವಕವಲ್ಲ, ಆ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮನವಿಗಳು ಸಲ್ಲಿಕೆಯಾಗಿದ್ದರಿಂದ ಮಾತ್ರ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಸಂಘ-ಸಂಸ್ಥೆಗಳಿಂದ ಬಂದ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘಟನೆಗಳಿಗೆ ₹71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ ಎಂದು ಹೇಳಿದ್ದಾರೆ. ಇದು ಅಂತಿಮ ಫಲಾನುಭವಿಗಳ ಪಟ್ಟಿ ಅಲ್ಲ. ಇತರೆ ಹಿಂದುಳಿದ ಜಾತಿಗಳಿಂದ ಬಂದಿರುವ ಮನವಿಗಳನ್ನೂ ಪರಿಶೀಲಿಸಿ ಮುಂದಿನ ಹಂತಗಳಲ್ಲಿ ಅನುದಾನ ಮಂಜೂರು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಹಿಂದುಳಿದ ವರ್ಗಗಳ…

ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕೇಳಿದ್ದಾರೆ. ಆಗ ಇಲ್ಲದ ಕಂಡಿಷನ್ ಈಗ ಯಾಕೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಕಾ ಪಾಟೀಲ್ ನಿಂಗೂ ಫ್ರೀ, ಜಮೀರ್ ಅಹ್ಮದ್, ಮಹದೇವಪ್ಪ ನಿಂಗೂ ಫ್ರೀ ಎಂದು ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯನವರು ತಿಳಿಸಿದ್ದರು ಎಂದು ಗಮನ ಸೆಳೆದರು. 10 ಕೆಜಿ ಅಕ್ಕಿ ಕೊಟ್ಟಿದ್ದೀರಾ? ಮೋದಿಯವರು 5 ಕೆಜಿ ಅಕ್ಕಿ ಕೊಡದೇ ಇದ್ದರೆ, ನಿಮ್ಮನ್ನೇ ನಂಬಿದ್ದರೆ ಜನರು ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಮಲಗಬೇಕಿತ್ತು ಎಂದು ತಿಳಿಸಿದರು. ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿ ಎಂಬುದು ಜನರಿಗೆ ಗೊತ್ತಿದೆ ಎಂದು ತಿಳಿಸಿದರು. ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ ಎಂದರು. ಇದಕ್ಕೆ ಸೂಕ್ತ ಸಮಯದಲ್ಲಿ…

ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ನೀರಾವರಿ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ತ್ವರಿತ ಅನುಮೋದನೆ ಹಾಗೂ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ನೀತಿ ಆಯೋಗದ ಸಭೆಯ ಬಳಿಕ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿ, ರಾಜ್ಯದ ಅಭಿವೃದ್ಧಿ ಆದ್ಯತೆಗಳ ಕುರಿತು ಚರ್ಚಿಸಿದರು. ಭೇಟಿಯ ವೇಳೆ ಮೇಕೆದಾಟು ಯೋಜನೆ ಕುರಿತು ವಿಶೇಷವಾಗಿ ಪ್ರಸ್ತಾಪಿಸಿದ ಅವರು, ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕೇಂದ್ರೀಯ ಜಲ ಆಯೋಗಕ್ಕೆ (CWC) ಸೂಚಿಸಿದೆ ಎಂದು ಗಮನ ಸೆಳೆದರು. ಯೋಜನೆಯ ಮೌಲ್ಯಮಾಪನ ಪ್ರಕ್ರಿಯೆಗೆ ವೇಗ…