ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಆರಂಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ರಸಗೊಬ್ಬರ ಪೂರೈಕೆಯಾದರೂ ರಾಜ್ಯ ಸರ್ಕಾರ ಅಗತ್ಯವಿರುವಲ್ಲಿ ರೈತರಿಗೆ ರಸಗೊಬ್ಬರ ತಲುಪಿಸದೆ ತೀರಾ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಜನವರಿ-ಮಾರ್ಚ್ ಅವಧಿಯಲ್ಲೇ ಅಗತ್ಯಕ್ಕಿಂತ ಹೆಚ್ಚುವರಿ 0.33 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 1.29 ಲಕ್ಷ ಮೆಟ್ರಿಕ್ ಟನ್ ಡಿಎಪಿ ಮತ್ತು 1.58 ಲಕ್ಷ ಮೆಟ್ರಿಕ್ ಟನ್ ಎನ್‌ಪಿಕೆಎಸ್ ಅನ್ನು ರಾಜ್ಯಕ್ಕೆ ನೀಡಲಾಗಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅದಾಗಲೇ ಜೂನ್ 10 ರ ವರೆಗೆ ಯೂರಿಯಾ 3.13 ಲಕ್ಷ ಮೆಟ್ರಿಕ್ ಟನ್ (LMT) ಅಗತ್ಯತೆಯಲ್ಲಿ 5.59 LMT ಲಭ್ಯತೆಯನ್ನು ಖಾತರಿಪಡಿಸಿದೆ. ಡಿಎಪಿ 1.89 LMT ಅಗತ್ಯತೆಯಲ್ಲಿ 2.57 LMT ಲಭ್ಯತೆ ಖಚಿತಪಡಿಸಿದ್ದು, ಪ್ರಸ್ತುತ ದಾಸ್ತಾನು 1.09 LMT ಇದೆ. ಹೆಚ್ಚುವರಿ ರಸಗೊಬ್ಬರ ಪೂರೈಕೆಯಲ್ಲಿದೆ.…
Day: June 15, 2026
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ
ಚೆನ್ನೈ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ (RMC) ಮುನ್ಸೂಚನೆ ನೀಡಿದೆ. ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಿಂದ ದಕ್ಷಿಣ ತಮಿಳುನಾಡಿನವರೆಗೆ ವಿಸ್ತರಿಸಿರುವ ಮೇಲ್ಮಟ್ಟದ ವಾಯುಭಾರ ಕುಸಿತದ ಪರಿಣಾಮ ಮುಂದಿನ ಕೆಲವು ದಿನಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ತಿರುಚಿರಾಪಳ್ಳಿ, ಪೆರಂಬಲೂರು, ಅರಿಯಲೂರು, ನಾಮಕ್ಕಲ್ ಹಾಗೂ ಸೇಲಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಧ್ಯಮ ಮಳೆ ಮತ್ತು ಗಂಟೆಗೆ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಮಂಗಳವಾರ ನಾಮಕ್ಕಲ್, ಸೇಲಂ, ತಿರುಚಿರಾಪಳ್ಳಿ, ತಂಜಾವೂರು, ತಿರುವರೂರು, ಮೈಲಾಡುತುರೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ರಾಮನಾಥಪುರಂ ಜಿಲ್ಲೆಯಲ್ಲಿ ಕೂಡ ಮಂಗಳವಾರದಿಂದ ಗುಡುಗು ಸಹಿತ ಭಾರೀ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ…
ಸೋಮಾವತಿ ಅಮಾವಾಸ್ಯೆ; ಹರಿವಾದಲ್ಲಿ ಯಾಕಿಷ್ಟು ಜನಸಾಗರ?
ಹರಿದ್ವಾರ: ಸೋಮವತಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಉತ್ತರಾಖಂಡದ ಹರಿದ್ವಾರದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿದೆ. ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಹಾಗೂ ಪ್ರಾರ್ಥನೆಗಾಗಿ ಸೋಮವಾರ ಲಕ್ಷಾಂತರ ಭಕ್ತರು ಹರ್ ಕಿ ಪೌರಿ ಸೇರಿದಂತೆ ಪ್ರಮುಖ ಘಾಟ್‌ಗಳಿಗೆ ಆಗಮಿಸಿದರು. ಸೋಮವತಿ ಅಮಾವಾಸ್ಯೆಯಂದು ಗಂಗಾ ಸ್ನಾನ, ದಾನ ಹಾಗೂ ಪೂರ್ವಜರಿಗೆ ತರ್ಪಣ ಸಲ್ಲಿಸುವುದು ವಿಶೇಷ ಮಹತ್ವ ಹೊಂದಿದೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಯಾತ್ರಿಕರು ಹರಿದ್ವಾರಕ್ಕೆ ಆಗಮಿಸಿದರು. ಭಕ್ತರ ಭಾರಿ ಸಂಖ್ಯೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿತ್ತು. ಪ್ರಮುಖ ಘಾಟ್‌ಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು. ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಹಾಗೂ ಇತರ ಭದ್ರತಾ ತಂಡಗಳನ್ನು ನಿಯೋಜಿಸಲಾಗಿತ್ತು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭಕ್ತರ ಸಂಚಾರ, ಸುರಕ್ಷತೆ ಮತ್ತು ಸ್ನಾನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಲವು ಹಂತಗಳಲ್ಲಿ ಭದ್ರತಾ…
ಎತ್ತುಗಳ ಜೊತೆ ಶಾರದಮ್ಮ ಕೃಷಿ, ಎಲ್ಲೆಡೆಯಿಂದ ಶಹಬ್ಬಾಸ್ ಗಿರಿ, ಆದರೆ ಅಂಗಲಾಚಿದರೂ ಸಿಗದ ಬೋರ್‌ವೆಲ್ ಸೌಲಭ್ಯ
ಶಿವಮೊಗ್ಗ: ಆಧುನಿಕ ಕೃಷಿ ಯಂತ್ರೋಪಕರಣಗಳ ಯುಗದಲ್ಲೂ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸಿಕೊಂಡು, ಎತ್ತುಗಳ ಸಹಾಯದಿಂದ ನೇಗಿಲು ಹೊಡೆಯುತ್ತಾ ಕೃಷಿ ಮಾಡುತ್ತಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ರೈತ ಮಹಿಳೆ ಶಾರದಮ್ಮ ಎಲ್ಲರಿಗೂ ಮಾದರಿಯಾಗಿದ್ದಾರೆ. ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಸ್ವಗ್ರಾಮ ಕಾಗೋಡು ಮೂಲದ ಶಾರದಮ್ಮ, ಪ್ರತಿದಿನ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡೇ ತಮ್ಮ ಜಮೀನಿಗೆ ತೆರಳಿ ಕೃಷಿ ಕಾಯಕದಲ್ಲಿ ತೊಡಗುತ್ತಾರೆ. ಆದರೆ, ನೀರಾವರಿ ಸೌಲಭ್ಯ ಇಲ್ಲದಿರುವುದು ಅವರ ದೊಡ್ಡ ಸಮಸ್ಯೆಯಾಗಿದೆ. ಶಾರದಮ್ಮ ಅವರಿಗೆ ಎರಡು ಎಕರೆ ಜಮೀನು ಇದ್ದರೂ, ಸಂಪೂರ್ಣವಾಗಿ ಮಳೆಯನ್ನೇ ಅವಲಂಬಿಸಿ ಕೃಷಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ವರ್ಷ ಕೇವಲ ಐದು ಚೀಲ ಭತ್ತದ ಇಳುವರಿ ಬಂದಿದ್ದು, ನೀರಿನ ಕೊರತೆಯಿಂದ ಬೆಳೆ ಕೈಕೊಡುತ್ತಿದೆ ಎಂದು ಅವರು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. “ನಾಟಿ ಮಾಡೋಣ ಎಂದರೆ ನೀರಿಲ್ಲ. ನಾಟಿ ಮಾಡಿದ ಮೇಲೂ ನೀರಿಲ್ಲದೆ ಬೆಳೆ…
ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ
ವಾಷಿಂಗ್ಟನ್: ಜೂನ್ 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಶಾಂತಿ ಒಪ್ಪಂದಕ್ಕೆ ಅಧಿಕೃತ ಸಹಿ ಹಾಕುವ ಕಾರ್ಯಕ್ರಮ ನಿಗದಿಯಾಗಿದೆ. ಜಾಗತಿಕ ಮಟ್ಟದಲ್ಲಿ ಕುತೂಹಲ ಕೆರಳಿಸಿರುವ ಈ ಬೆಳವಣಿಗೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ಮೂಡಿಸಿದೆ. ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಗೆ ತೀವ್ರ ಆತಂಕ ಉಂಟುಮಾಡಿದ್ದ ಅಮೆರಿಕ-ಇರಾನ್ ಸಂಘರ್ಷಕ್ಕೆ ಅಂತ್ಯ ಹಾಡುವ ಮಹತ್ವದ ಬೆಳವಣಿಗೆ ನಡೆದಿದೆ. ಕಳೆದ ಹಲವು ತಿಂಗಳುಗಳಿಂದ ಮುಂದುವರಿದಿದ್ದ ಯುದ್ಧ ಹಾಗೂ ರಾಜತಾಂತ್ರಿಕ ಹಗ್ಗಜಗ್ಗಾಟದ ಬಳಿಕ ಉಭಯ ರಾಷ್ಟ್ರಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ‘ಟ್ರೂತ್ ಸೋಷಿಯಲ್’ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಇರಾನ್ ಜೊತೆಗಿನ ಒಪ್ಪಂದ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು. ಹೊರ್ಮುಝ್ ಜಲಸಂಧಿಯನ್ನು ಟೋಲ್-ಮುಕ್ತವಾಗಿ ತೆರೆಯಲು ಹಾಗೂ ಅಮೆರಿಕ ನೌಕಾಪಡೆಯ ದಿಗ್ಬಂಧನವನ್ನು ತಕ್ಷಣದಿಂದಲೇ ಹಿಂತೆಗೆದುಕೊಳ್ಳಲು ಆದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ. ಫೆಬ್ರವರಿ…
ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು
ಹಾಸನ: ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕರ ತಂಡಕ್ಕೆ ಭೀಕರ ದುರಂತ ಎದುರಾಗಿದ್ದು, ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಯುವಕರ ತಂಡ ಧರ್ಮಸ್ಥಳ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಹೇಮಾವತಿ ಜಲಾಶಯದ ಹಿನ್ನೀರಿಗೆ ಈಜಾಡಲು ಇಳಿದಿತ್ತು. ಈ ವೇಳೆ ನೀರಿನ ಆಳ ತಿಳಿಯದೆ ಮೂವರು ಯುವಕರು ಮುಳುಗಿ ನೀರುಪಾಲಾಗಿದ್ದಾರೆ. ಈಜು ಬಾರದಿದ್ದರೂ ಜಲಾಶಯದ ನೀರಿಗೆ ಇಳಿದಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ನೇಹಿತರ ಕಣ್ಣೆದುರೇ ಯುವಕರು ಮುಳುಗುತ್ತಿದ್ದರೂ ರಕ್ಷಿಸಲು ಸಾಧ್ಯವಾಗದೆ ಉಳಿದವರು ಅಸಹಾಯಕವಾಗಿ ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮೃತರನ್ನು 20 ವರ್ಷದ ಮಣಿಕಂಠ, ಚರಣ್ ಹಾಗೂ 23 ವರ್ಷದ ಮಿಲನ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗೊರೂರು ಪೊಲೀಸರು ಹಾಗೂ ಅಗ್ನಿಶಾಮಕ…
‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಗೆ ಭಯಗೊಂಡು ರೈಲಿನಿಂದ ಜಿಗಿದ ನಾಲ್ವರು ಪ್ರಯಾಣಿಕರು ಮತ್ತೊಂದು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೊರೆನಾ ಜಿಲ್ಲೆಯ ಹೇತಾಂಪುರ ರೈಲು ನಿಲ್ದಾಣದ ಸಮೀಪ ಶನಿವಾರ ಸಂಜೆ ಈ ದುರ್ಘಟನೆ ನಡೆದಿದೆ. ಖಜುರಾಹೊ–ಉದಯಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ಸುದ್ದಿ ಬೋಗಿಗಳಲ್ಲಿ ವೇಗವಾಗಿ ಹರಡಿತ್ತು. ಈ ನಡುವೆ ಸಾಮಾನ್ಯ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ತುರ್ತು ಸರಪಳಿ ಎಳೆದ ಪರಿಣಾಮ ರೈಲು ಹೇತಾಂಪುರ–ಧೋಲ್ಪುರ್ ವಿಭಾಗದಲ್ಲಿ ನಿಂತಿದೆ. ರೈಲು ನಿಂತ ತಕ್ಷಣ ಆತಂಕಕ್ಕೊಳಗಾದ ಹಲವರು ಕೆಳಗಿಳಿದು ಪಕ್ಕದ ಹಳಿಯತ್ತ ಓಡಿದ್ದಾರೆ. ಆದರೆ ಅದೇ ಸಮಯದಲ್ಲಿ ಎದುರಿನ ದಿಕ್ಕಿನಿಂದ ಫಿರೋಜ್‌ಪುರ–ಸಿಯೋನಿ ಪಾತಾಳಕೋಟ್ ಎಕ್ಸ್‌ಪ್ರೆಸ್ ವೇಗವಾಗಿ ಬರುತ್ತಿದ್ದು, ಹಳಿಯ ಮೇಲೆ ಇದ್ದ ಕೆಲವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ…
