ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3 ಕೆಜಿ 180 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ 4ರಂದು ಹೆಬ್ಬಾಳ ಠಾಣೆಯ ಸಿಬ್ಬಂದಿಗೆ ಗುಡ್ಡದಹಳ್ಳಿ ಮುಖ್ಯ ರಸ್ತೆಯ ಪಿಳೇಕಮ್ಮ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬ ಕಾಲೇಜು ಬ್ಯಾಗ್‌ನಲ್ಲಿ ಹೈಡ್ರೋ ಗಾಂಜಾ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ 3.18 ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಬಂಧಿತನನ್ನು ವಿಚಾರಣೆ ನಡೆಸಿದಾಗ, ಮಹಾರಾಷ್ಟ್ರದ ನಾಸಿಕ್‌ನಿಂದ ಮಾದಕ ವಸ್ತುವನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಆರೋಪಿಯನ್ನು ಇಮ್ರಾನ್ ಪಾಷಾ ಅಲಿಯಾಸ್ ಚೇಲಾ ಇಮ್ರಾನ್ (36)…
