ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿದ ಗೆಲುವು ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾದ ಅಲೆ ಮುಂದುವರಿಯಲಿದೆ ಎಂದು ವಿಶ್ಲೇಷಿಸಿದ್ದಾರೆ. “ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಐತಿಹಾಸಿಕವಾಗಿದ್ದು, ಜನ ಕಲ್ಯಾಣ ಮತ್ತು ನ್ಯಾಯದ ರಾಜಕೀಯಕ್ಕೆ ಬೆಂಬಲ ಸಿಕ್ಕಿದೆ. ಇದು ಗ್ಯಾರಂಟಿ ಯೋಜನೆಗಳ ಪರವಾದ ಮತ, ಜನರ ಪರವಾದ ಮತ” ಎಂದು ಸುರ್ಜೇವಾಲ ತಿಳಿಸಿದ್ದಾರೆ. ಕಾಂಗ್ರೆಸ್‌ಗೆ 135 ಶಾಸಕರ ಬಲವಿದ್ದರೂ, ಪಕ್ಷದ ಅಭ್ಯರ್ಥಿಗಳಿಗೆ 151 ಪ್ರಥಮ ಪ್ರಾಶಸ್ತ್ಯದ ಮತಗಳು ಲಭಿಸಿವೆ. ಇದು ರಾಜ್ಯದ ಶಾಸಕರು ಪಕ್ಷದ ಗಡಿ ಮೀರಿ ಸರ್ಕಾರದ ನೀತಿಗಳಿಗೆ ಬೆಂಬಲ ನೀಡಿರುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ರಾಜಕೀಯ ಎರಡು ಧ್ರುವಗಳ ನಡುವೆ…
Day: June 18, 2026
ತೆಲಂಗಾಣ ಸಚಿವ ಸಂಪುಟ ಇನ್ನು ಕಾಗದರಹಿತ: ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆಗೆ ಚಾಲನೆ
ಹೈದರಾಬಾದ್: ತೆಲಂಗಾಣ ಸರ್ಕಾರ ಸಚಿವ ಸಂಪುಟ ಸಭೆಗಳನ್ನು ಸಂಪೂರ್ಣವಾಗಿ ಕಾಗದರಹಿತವಾಗಿ ನಡೆಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ತೆಲಂಗಾಣ ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆ ಜಾರಿಗೆ ಸರ್ಕಾರ ಅನುಮೋದನೆ ನೀಡಿದ್ದು, ಸಚಿವರಿಗೆ ವಿಶೇಷ ಟ್ಯಾಬ್ಲೆಟ್‌ಗಳನ್ನು ವಿತರಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವ ಡಿ. ಶ್ರೀಧರ್ ಬಾಬು ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಸೇರಿದಂತೆ ಎಲ್ಲಾ ಸಚಿವರಿಗೆ ಟ್ಯಾಬ್ಲೆಟ್‌ಗಳನ್ನು ನೀಡುವ ಘೋಷಣೆ ಮಾಡಿದ್ದಾರೆ. ಹೊಸ ವ್ಯವಸ್ಥೆಯಲ್ಲಿ ಸಚಿವ ಸಂಪುಟದ ಕಾರ್ಯಸೂಚಿ, ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಡಿಜಿಟಲ್ ರೂಪದಲ್ಲಿ ಸಚಿವರಿಗೆ ತಲುಪಿಸಲಾಗುತ್ತದೆ. ಇದರಿಂದ ಆಡಳಿತದಲ್ಲಿ ವೇಗ, ಪಾರದರ್ಶಕತೆ ಹಾಗೂ ಪರಿಸರ ಸ್ನೇಹಿ ಕ್ರಮಗಳಿಗೆ ಉತ್ತೇಜನ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ವಿವಿಧ…
ಪರಿಷತ್ ಫೈಟ್‌ನಲ್ಲಿ ಬಿಜೆಪಿಗೆ ಕ್ರಾಸ್‌ವೋಟ್ ಶಾಕ್; ಮೈತ್ರಿಗೆ ಹಿನ್ನಡೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಡ್ಡಮತದಾನದ ಶಾಕ್ ಎದುರಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 7 ಸ್ಥಾನಗಳ ಪೈಕಿ ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದು ಮೇಲುಗೈ ಸಾಧಿಸಿದರೆ, ಬಿಜೆಪಿ 2 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಸೋಲು ಕಂಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ನ ಕೆಲ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಬಿ.ಎಸ್. ಶಿವಣ್ಣ ತಲಾ 30 ಮತ ಪಡೆದರೆ, ವಿನಯ್ ಕಾರ್ತಿಕ್ 32 ಮತಗಳೊಂದಿಗೆ ಗೆಲುವು ಸಾಧಿಸಿದರು. ಬಿಜೆಪಿಯ ಆರ್. ರಘು 29 ಮತ ಹಾಗೂ ಲಿಂಗರಾಜು ಪಾಟೀಲ್ 27 ಮತ ಪಡೆದರು. ಗೆಲುವಿನ ಕೋಟಾ 27.63 ಮತಗಳಾಗಿದ್ದರಿಂದ ಲಿಂಗರಾಜು ಪಾಟೀಲ್ ನೇರವಾಗಿ…
ಪರಿಷತ್ ಫೈಟ್’ನಲ್ಲಿ ಕಾಂಗ್ರೆಸ್‌ನ ಐವರ ದಿಗ್ವಿಜಯ, ಬಿಜೆಪಿಗೆ ಕ್ರಾಸ್ ವೋಟ್ ಶಾಕ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಸಾಧನೆ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿಗಳು 5 ಸ್ಥಾನಗಳನ್ನು ಗೆದ್ದು ಜಯಭೇರಿ ಬಾರಿಸಿದ್ದು, ಬಿಜೆಪಿ 2 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರೀಕ್ಷೆಗೂ ಮೀರಿ ಬೆಂಬಲ ದೊರೆತಿದ್ದು, ಬಿಜೆಪಿ ಹಾಗೂ ಜೆಡಿಎಸ್‌ನ ಕೆಲವು ಶಾಸಕರ ಅಡ್ಡಮತದಾನದಿಂದ ಫಲಿತಾಂಶ ಬದಲಾಗಿದೆ ಎನ್ನಲಾಗಿದೆ. ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಬಿ.ಎಸ್. ಶಿವಣ್ಣ ತಲಾ 30 ಮತ ಪಡೆದರೆ, ವಿನಯ್ ಕಾರ್ತಿಕ್ 32 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಆರ್. ರಘು 29 ಮತ ಹಾಗೂ ಲಿಂಗರಾಜು ಪಾಟೀಲ್ 27 ಮತ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು 14 ಮತಗಳಿಗೆ ಸೀಮಿತರಾದರು. ಗೆಲುವಿನ ಕೋಟಾ 27.63 ಮತಗಳಾಗಿದ್ದರಿಂದ ಲಿಂಗರಾಜು ಪಾಟೀಲ್ ನೇರವಾಗಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಬಳಿಕ ನಡೆದ ಎಲಿಮಿನೇಷನ್ ಸುತ್ತಿನಲ್ಲಿ ಜೆಡಿಎಸ್…
