ಬೆಂಗಳೂರು: ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಹೆಜ್ಜೆ ಇಡುತ್ತಿದ್ದಾರೆ ಎನ್ನುವ ಸುದ್ದಿ ಸಿನಿ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಲಯಾಳಂ ಮಾಧ್ಯಮಗಳ ವರದಿಯಂತೆ, ಸುದೀಪ್ ಈಗಾಗಲೇ ಉಯಿರ್ ಎಂಬ ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದಾರೆ. ‘ಉಯಿರ್’ ಒಂದು ಮರ್ಡರ್ ಮಿಸ್ಟರಿ ಥ್ರಿಲ್ಲರ್ ಚಿತ್ರವಾಗಿದ್ದು, ಮಲಯಾಳಂನ ಪ್ರತಿಭಾವಂತ ನಟ ರೋಷನ್ ಮ್ಯಾಥೀವ್ ಈ ಸಿನಿಮಾದ ನಾಯಕ. ಸುದೀಪ್ ಅವರು ಕಥೆಗೆ ಮಹತ್ವದ ತಿರುವು ನೀಡುವ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಮೂಲಕವೇ ಸುದೀಪ್ ಮಲಯಾಳಂ ಸಿನಿರಂಗಕ್ಕೆ ಅಧಿಕೃತ ಪ್ರವೇಶ ಪಡೆಯುತ್ತಿದ್ದಾರೆ. ಈ ಸಿನಿಮಾ ಜೂನ್ 26 ರಂದು ಬಿಡುಗಡೆಯಾಗಲು ಸಜ್ಜಾಗಿದೆ. ‘ಜೋಸೆಫ್’ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಪದ್ಮಕುಮಾರ್ ಅವರು ‘ಉಯಿರ್’ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಇನ್ನು ಸುದೀಪ್ ಅವರ ಕನ್ನಡ ಸಿನಿಮಾಗಳ ವಿಚಾರಕ್ಕೆ ಬಂದರೆ, ‘ಬಿಲ್ಲಾ ರಂಗ ಭಾಷಾ’…
Day: June 22, 2026
ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ
ಸ್ವಿಟ್ಜರ್‌ಲ್ಯಾಂಡ್: ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಶಾಂತಿ ಮಾತುಕತೆ ಮೊದಲ ದಿನವೇ ಭಿನ್ನಾಭಿಪ್ರಾಯಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಡೆದ ಈ ಸಭೆಯಲ್ಲಿ ಲೆಬನಾನ್ ಕದನ ವಿರಾಮ ಪ್ರಮುಖ ಚರ್ಚಾ ವಿಷಯವಾಗಿತ್ತು. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಹಾಗೂ ಇರಾನ್ ಪರವಾಗಿ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘರ್ ಖಾಲಿಬಾಫ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಭಾಗವಹಿಸಿದರು. ಮಾತುಕತೆಯಲ್ಲಿ ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳ ಸಡಿಲಿಕೆ, ತೈಲ ರಫ್ತು ಮೇಲಿನ ನಿರ್ಬಂಧ ತೆರವು ಹಾಗೂ ವಿದೇಶಗಳಲ್ಲಿ ಸ್ಥಗಿತಗೊಂಡಿರುವ ಇರಾನ್‌ನ ಆಸ್ತಿಗಳ ಬಿಡುಗಡೆ ಕುರಿತು ಚರ್ಚೆ ನಡೆಯಿತು. ಆದರೆ ಲೆಬನಾನ್‌ನಲ್ಲಿ ಕದನ ವಿರಾಮ ಸಂಪೂರ್ಣ ಜಾರಿಯಾಗದಿದ್ದರೆ ಇತರೆ ವಿಷಯಗಳ ಕುರಿತು ಪ್ರಗತಿ ಸಾಧ್ಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿತು. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಲೆಬನಾನ್‌ನಲ್ಲಿ…
‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ
ಬೆಂಗಳೂರು: ಆರ್‌ಎಸ್‌ಎಸ್ ಮತ್ತು ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹೊರಟಿವೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ, “ಆರ್‌ಎಸ್‌ಎಸ್ ಮತ್ತು ಬಿಜೆಪಿ ಹಿಂದೂ ರಾಷ್ಟ್ರವನ್ನು ಮಾಡಲು ಹೊರಟಿಲ್ಲ. ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಸಿದ್ದರಾಮಯ್ಯ ಅವರಿಗೆ ಇದು ಗೊತ್ತಿಲ್ಲ” ಎಂದು ಹೇಳಿದರು. “ಈ ದೇಶ ಹಿಂದೂ ರಾಷ್ಟ್ರವಲ್ಲ ಎಂದು ಹೇಳುವುದಾದರೆ ಇಲ್ಲಿ ಪ್ರಜಾಪ್ರಭುತ್ವವೇ ಉಳಿಯುತ್ತಿರಲಿಲ್ಲ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳ ಉದಾಹರಣೆಗಳು ನಮ್ಮ ಮುಂದಿವೆ. ಹಿಂದೂ ಬಹುಸಂಖ್ಯಾತರು ಇಲ್ಲದಿದ್ದರೆ ಪ್ರಜಾಪ್ರಭುತ್ವವೂ ಇರುವುದಿಲ್ಲ, ಮತದಾನದ ಹಕ್ಕೂ ಉಳಿಯುವುದಿಲ್ಲ” ಎಂದು ಜೋಶಿ ವಾದಿಸಿದರು. ಸಿದ್ದರಾಮಯ್ಯ ಅವರನ್ನು ಟೀಕಿಸಿದ ಅವರು, “ತಮ್ಮ ಮಗನನ್ನು ಮಂತ್ರಿಯನ್ನಾಗಿ ಮಾಡಿದ್ದರೂ ಅದನ್ನೇ ಮುಂದಿಟ್ಟುಕೊಂಡು ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು” ಎಂದು ಕಿಡಿಕಾರಿದರು.
ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ನಟ ಚೇತನ್ ಅಹಿಂಸ ಘೋಷಣೆ
ಬಾಗಲಕೋಟೆ: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮುಂದಿನ ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ಪಕ್ಷವನ್ನು ಅಧಿಕೃತವಾಗಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದಾದ್ಯಂತ ಸಾಮಾಜಿಕ ನ್ಯಾಯ, ದಲಿತರು, ಬಹುಜನರು ಹಾಗೂ ವಿವಿಧ ಜನಪರ ಹೋರಾಟಗಳಲ್ಲಿ ತೊಡಗಿರುವ ಸಂಘಟನೆಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ ಪರ್ಯಾಯವನ್ನು ನಿರ್ಮಿಸುವ ಉದ್ದೇಶ ಹೊಂದಿದ್ದೇವೆ ಎಂದು ಚೇತನ್ ಹೇಳಿದರು. ದಲಿತ ಸಂಘಟನೆಗಳು, ಬಹುಜನ ಸಂಘಟನೆಗಳು ಹಾಗೂ ಸಮಾಜಪರ ಚಳವಳಿಗಳನ್ನು ಒಂದೇ ವೇದಿಕೆಗೆ ತಂದು ಜನರ ಧ್ವನಿಯಾಗುವ ಪಕ್ಷ ಕಟ್ಟುವ ಗುರಿಯಿದೆ ಎಂದು ಅವರು ತಿಳಿಸಿದರು. ಈ ವೇಳೆ ತಮ್ಮ ಪಕ್ಷದ ಪ್ರಣಾಳಿಕೆಗೆ ಸಂಬಂಧಿಸಿದ 10 ಪ್ರಮುಖ ಅಂಶಗಳನ್ನು ಕೂಡ ಚೇತನ್ ಅಹಿಂಸ ಪ್ರಕಟಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನ ಅವಕಾಶ, ಸಂವಿಧಾನ ಮೌಲ್ಯಗಳ ರಕ್ಷಣೆ ಮತ್ತು ಜನಪರ ಆಡಳಿತಕ್ಕೆ ಒತ್ತು ನೀಡಲಾಗುವುದು ಎಂದು ಅವರು…
ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಜೊತೆಗೆ ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು…
ಡೀಸೆಲ್ ದರ ಏರಿಕೆ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಾಲ್ಕು ಸಾರಿಗೆ ನಿಗಮಗಳ ಮನವಿ
ಬೆಂಗಳೂರು: ಡೀಸೆಲ್ ದರ ಏರಿಕೆ ಮತ್ತು ಹೆಚ್ಚುತ್ತಿರುವ ಆರ್ಥಿಕ ಹೊರೆಯಿಂದ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಅನುಮತಿ ಕೋರಿವೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ನಿಗಮಗಳು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿಯಲ್ಲಿ, ಡೀಸೆಲ್ ದರ ಪ್ರತಿ ಲೀಟರ್‌ಗೆ ಸುಮಾರು ₹8 ಏರಿಕೆಯಾಗಿರುವುದರಿಂದ ತಿಂಗಳಿಗೆ ₹40 ಕೋಟಿ ಮತ್ತು ವಾರ್ಷಿಕವಾಗಿ ಸುಮಾರು ₹480 ಕೋಟಿ ಹೆಚ್ಚುವರಿ ನಷ್ಟ ಉಂಟಾಗುತ್ತಿದೆ ಎಂದು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಶೇ.25ರಷ್ಟು ಟಿಕೆಟ್ ದರ ಹೆಚ್ಚಳ ಅಗತ್ಯವೆಂದು ವಾದಿಸಿವೆ. ನಿಗಮಗಳು ಈಗಾಗಲೇ ಹಲವು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿವೆ. ಜುಲೈಯಿಂದ ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ಜಾರಿಯಾಗಲಿದ್ದು, ₹1,271 ಕೋಟಿ ವೇತನ ಬಾಕಿಯಲ್ಲಿ ಇನ್ನೂ ₹821 ಕೋಟಿ ಪಾವತಿಯಾಗಬೇಕಿದೆ. ಜೊತೆಗೆ, ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸುಮಾರು ₹5,000 ಕೋಟಿ ಅನುದಾನ…
ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ: ಕೆ.ಎಂ. ನಟರಾಜ್ ಸಹಿತ ಐವರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳ ಮರು ನೇಮಕ
ನವದೆಹಲಿ: ಕೇಂದ್ರ ಸರ್ಕಾರವು ತುಷಾರ್ ಮೆಹ್ತಾ ಅವರನ್ನು ಭಾರತದ ಸಾಲಿಸಿಟರ್ ಜನರಲ್ ಆಗಿ ಮತ್ತೊಮ್ಮೆ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಿದೆ. ಜುಲೈ 1, 2026ರಿಂದ ಈ ನೇಮಕಾತಿ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಕ್ಯಾಬಿನೆಟ್‌ನ ನೇಮಕಾತಿ ಸಮಿತಿ (ACC) ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಮೆಹ್ತಾ ಅವರು ದೇಶದ ಎರಡನೇ ಅತ್ಯುನ್ನತ ಕಾನೂನು ಅಧಿಕಾರಿಯಾಗಿ ಸೇವೆ ಮುಂದುವರಿಸಲಿದ್ದಾರೆ. 2018ರಲ್ಲಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದ ಅವರು, 2020 ಮತ್ತು 2023ರಲ್ಲೂ ಮರು ನೇಮಕಗೊಂಡಿದ್ದರು. ಇತ್ತೀಚಿನ ವಿಸ್ತರಣೆಯೊಂದಿಗೆ ಮೆಹ್ತಾ ಅವರು ಸುಮಾರು 11 ವರ್ಷಗಳ ಕಾಲ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲಿದ್ದು, ದೇಶದ ಇತಿಹಾಸದಲ್ಲೇ ದೀರ್ಘಾವಧಿ ಸೇವೆ ಸಲ್ಲಿಸಿದ ಕಾನೂನು ಅಧಿಕಾರಿಗಳಲ್ಲಿ ಒಬ್ಬರಾಗಲಿದ್ದಾರೆ. ಇದರ ಜೊತೆಗೆ, ಸುಪ್ರೀಂ ಕೋರ್ಟ್‌ಗೆ ಐದು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳಾದ ವಿಕ್ರಮ್‌ಜಿತ್ ಬ್ಯಾನರ್ಜಿ, ಕೆ.ಎಂ. ನಟರಾಜ್, ಎಸ್.ವಿ.…
