ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

ವಿಕ್ಟೋರಿಯಾ (ಸೀಶೆಲ್ಸ್): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಸೀಶೆಲ್ಸ್‌ನ 50ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾತನಾಡಿದ ಅವರು, ಸೀಶೆಲ್ಸ್ ಅನ್ನು ಭಾರತದ ಪ್ರಮುಖ ಸಮುದ್ರ ಪಾಲುದಾರ ಹಾಗೂ ವಿಶ್ವಾಸಾರ್ಹ ನೆರೆ ರಾಷ್ಟ್ರವೆಂದು ಬಣ್ಣಿಸಿದರು. ಭಾರತ–ಸೀಶೆಲ್ಸ್ ಸಂಬಂಧಗಳು ಶತಮಾನಗಳಷ್ಟು ಹಳೆಯದಾದ ಜನರ-ಜನರ ಬಾಂಧವ್ಯ ಮತ್ತು ಹಂಚಿಕೆಯ ಮೌಲ್ಯಗಳ ಮೇಲೆ ನಿರ್ಮಾಣವಾಗಿವೆ ಎಂದು ಮೋದಿ ಹೇಳಿದರು. ಸೀಶೆಲ್ಸ್‌ನ ಪ್ರಜಾಪ್ರಭುತ್ವ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ರಾಷ್ಟ್ರೀಯ ಏಕತೆಯನ್ನು ಅವರು ಶ್ಲಾಘಿಸಿದರು. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಉಭಯ ದೇಶಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ ಪ್ರಧಾನಿ, ರಕ್ಷಣಾ ಸಹಕಾರ, ಕರಾವಳಿ ಭದ್ರತೆ, ತರಬೇತಿ ಹಾಗೂ ಸಾಮರ್ಥ್ಯ ವೃದ್ಧಿ ಕ್ಷೇತ್ರಗಳಲ್ಲಿನ ಸಹಯೋಗವನ್ನು ಉಲ್ಲೇಖಿಸಿದರು. ನೀಲಿ ಆರ್ಥಿಕತೆ, ಮೀನುಗಾರಿಕೆ, ಸಮುದ್ರ ವಿಜ್ಞಾನ, ನವೀಕರಿಸಬಹುದಾದ…

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಬೂಲ್: ಪೂರ್ವ ಅಫ್ಘಾನಿಸ್ತಾನದ ಹಲವು ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ವಾಯುದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರಾಚಿಯಲ್ಲಿರುವ ಅರೆಸೈನಿಕ ರೇಂಜರ್‌ಗಳ ಪ್ರಾದೇಶಿಕ ಕೇಂದ್ರದ ಮೇಲೆ ನಡೆದ ದಾಳಿಯಲ್ಲಿ ಮೂವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಕರಾಚಿ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್‌ನ ಬೇರ್ಪಟ್ಟ ಬಣವಾದ ಜಮಾತ್-ಉಲ್-ಅಹ್ರಾರ್ ಹೊತ್ತುಕೊಂಡಿದೆ. ಇದರ ಬೆನ್ನಲ್ಲೇ ಈ ದಾಳಿ ನಡೆದಿದೆ. ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ಪಕ್ತಿಕಾ, ಪಕ್ತಿಯಾ ಮತ್ತು ಕುನಾರ್ ಪ್ರಾಂತ್ಯಗಳಲ್ಲಿನ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರ ಅಡಗುತಾಣಗಳು ಮತ್ತು ಸುರಕ್ಷಿತ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಯಾವಾಗ? ಸಚಿವ ಕೃಷ್ಣ ಬೈರೇಗೌಡರಿಗೆ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದೇ ಯಾವಾಗ ಎಂದು ಅವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್, ಬೆಂಗಳೂರಿನ ವಿವಿಧ ಭಾಗಗಳ ರಸ್ತೆ ಗುಂಡಿಗಳ ಫೋಟೋಗಳನ್ನು ಹಂಚಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿನಾಯಕ ಲೇಔಟ್, ನಾಗರಭಾವಿ, ಮುದ್ದಿನಪಾಳ್ಯ ರಸ್ತೆ, ಜಯನಗರ 8ನೇ ಬ್ಲಾಕ್ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಗಂಭೀರವಾಗಿದೆ ಎಂದು ಆರೋಪಿಸಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲಿ ಆರ್.ಅಶೋಕ್ ಹೇಳಿದ್ದೇನು? ರಾಜ್ಯ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ನಿರ್ಮಾಣದ ಮಾತು ಆಡುತ್ತಿದ್ದರೂ, ವಾಸ್ತವದಲ್ಲಿ ನಗರ ರಸ್ತೆಗಳನ್ನು ಗುಂಡಿಗಳಿಂದ ಮುಕ್ತಗೊಳಿಸಲು ವಿಫಲವಾಗಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ನಗರಾಭಿವೃದ್ಧಿ ಇಲಾಖೆಯ ವೈಫಲ್ಯದಿಂದ ಬೆಂಗಳೂರಿನ…