ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ ಕಡೆಗಣಿಸುವ ಯಾವುದೇ ಪ್ರಯತ್ನ ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಲಿದೆ ಎಂದು ಸಚಿವ ಎನ್. ರಾಜಣ್ಣ ಎಚ್ಚರಿಕೆ ನೀಡಿದ್ದು, ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರನ್ನು ಸೈಡ್‌ಲೈನ್ ಮಾಡಿ ಪಕ್ಷ ಸಂಘಟನೆ ನಡೆಸಲು ಯತ್ನಿಸಿದರೆ ಅದು ಕಾಂಗ್ರೆಸ್‌ಗೆ ದೊಡ್ಡ ತಪ್ಪಾಗಲಿದೆ ಎಂದು ರಾಜಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರದ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಅವರಿಗೆ ಸಮರ್ಪಕ ಸ್ಥಾನಮಾನ ನೀಡಿಲ್ಲ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರದ ಕಾರ್ಯಕ್ರಮಗಳಿಗೆ ನಿಗದಿತ ಪ್ರೋಟೋಕಾಲ್ ಇರುತ್ತದೆ. ಅದರಂತೆ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಿಯಾದರೂ ಲೋಪವಾಗಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಅವರು ಜನಬೆಂಬಲ ಹೊಂದಿರುವ…
Day: July 1, 2026
‘ಗೃಹಜ್ಯೋತಿ’ ಅಕ್ರಮ ಫಲಾನುಭವಿಗಳ ಪತ್ತೆಗೆ SIR ಮಾದರಿಯಲ್ಲಿ ಮನೆ-ಮನೆ ಪರಿಶೀಲನೆಗೆ ಚಾಲನೆ
ಬೆಂಗಳೂರು: ಚುನಾವಣಾ ಆಯೋಗ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವ ನಡುವೆಯೇ, ರಾಜ್ಯ ಸರ್ಕಾರವೂ ತನ್ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ಮುಂದಾಗಿದೆ. ಯೋಜನೆಯ ಅಕ್ರಮ ಫಲಾನುಭವಿಗಳನ್ನು ಗುರುತಿಸಿ ಕೈಬಿಡುವ ಉದ್ದೇಶದಿಂದ ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆ ವೇಳೆ ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಲಾಗುತ್ತದೆ. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವವರಾದರೆ ಬಾಡಿಗೆ ಒಪ್ಪಂದ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗೆ ಸಿದ್ಧವಾಗಿಡುವಂತೆ ಬೆಸ್ಕಾಂ ಮನವಿ ಮಾಡಿದೆ. ಮೀಟರ್ ರೀಡರ್‌ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ನಡೆಸುವುದು ಈ ಪ್ರಕ್ರಿಯೆಯ ಪ್ರಮುಖ ಭಾಗವಾಗಿದ್ದು, ಗ್ರಾಹಕರು ಹಾಗೂ…
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ
ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕೇಂದ್ರ ತೈಲ ಕಂಪನಿಗಳು 183.50 ರೂಪಾಯಿ ಕಡಿತ ಘೋಷಿಸಿವೆ. ಪರಿಷ್ಕೃತ ದರಗಳು ಜುಲೈ 1ರಿಂದಲೇ ಜಾರಿಗೆ ಬಂದಿದ್ದು, ಹೋಟೆಲ್, ರೆಸ್ಟೋರೆಂಟ್ ಹಾಗೂ ಇತರೆ ವಾಣಿಜ್ಯ ಬಳಕೆದಾರರಿಗೆ ಇದರಿಂದ ಆರ್ಥಿಕ ನಿರಾಳತೆ ದೊರೆಯಲಿದೆ. ಇತ್ತೀಚಿನ ಬೆಲೆ ಕಡಿತದ ಬಳಿಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವು 3,021 ರೂಪಾಯಿಯಿಂದ 2,930 ರೂಪಾಯಿಗೆ ಇಳಿಕೆಯಾಗಿದೆ. ಕಳೆದ ಜೂನ್ ತಿಂಗಳಲ್ಲಿ ಈ ಸಿಲಿಂಡರ್ ಬೆಲೆ 3,198 ರೂಪಾಯಿವರೆಗೆ ಏರಿಕೆಯಾಗಿತ್ತು. ಅಮೆರಿಕಾ–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಉಂಟಾದ ಅನಿಶ್ಚಿತತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿನ ಪೂರೈಕೆ ವ್ಯತ್ಯಯದಿಂದ ಭಾರತದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ನಿರಂತರ ಏರಿಕೆ ಕಂಡುಬಂದಿತ್ತು. ತೈಲ ಕಂಪನಿಗಳು ಮಾರ್ಚ್‌ನಲ್ಲಿ 144 ರೂ., ಏಪ್ರಿಲ್‌ನಲ್ಲಿ 195.50 ರೂ., ಮೇ ತಿಂಗಳಲ್ಲಿ 993…
