ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

ಕ್ಯಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪಗಳ ಸಾವಿನ ಸಂಖ್ಯೆ 3,342ಕ್ಕೆ ಏರಿಕೆಯಾಗಿದ್ದು, 16,740 ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೊಡ್ರಿಗಸ್ ತಿಳಿಸಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಇದುವರೆಗೆ 6,462 ಮಂದಿಯನ್ನು ರಕ್ಷಿಸಲಾಗಿದ್ದು, 17,345 ಮಂದಿ ಸ್ಥಳಾಂತರಗೊಂಡಿದ್ದಾರೆ. ಪೀಡಿತರಿಗೆ ನೆರವು ನೀಡಲು 80 ತಾತ್ಕಾಲಿಕ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಜೂನ್ 24ರಂದು ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಅವಳಿ ಭೂಕಂಪಗಳ ಬಳಿಕ ಇದುವರೆಗೆ 995 ನಂತರದ ಕಂಪನಗಳು ದಾಖಲಾಗಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ 29,567 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅವರಲ್ಲಿ 3,281 ಮಂದಿ ವಿದೇಶಿ ರಕ್ಷಣಾ ಸಿಬ್ಬಂದಿಯಾಗಿದ್ದಾರೆ. ಭೂಕಂಪ ದುರಂತದ ಹಿನ್ನೆಲೆಯಲ್ಲಿ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಸಂತ್ರಸ್ತರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ. ಇನ್ನೂ ಹತ್ತಾರು ಸಾವಿರ ಮಂದಿ ನಾಪತ್ತೆಯಾಗಿರುವ…

ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

ದೋಹಾ (ಕತಾರ್): ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿ (Deputy Chief of Mission) ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು. ಸಂಘದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, 2026–28ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಪರಿಚಯಿಸಲಾಯಿತು. ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸೇವಾ ಕಾರ್ಯಕ್ರಮಗಳ ರೂಪುರೇಷೆಯನ್ನು ಉಪ ರಾಯಭಾರಿಗಳ ಮುಂದೆ ಮಂಡಿಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂದೀಪ್ ಕುಮಾರ್, ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಚಟುವಟಿಕೆಗಳನ್ನು ಶ್ಲಾಘಿಸಿ, ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರನ್ನು ಒಳಗೊಂಡ ಒಗ್ಗಟ್ಟಿನ ಕಾರ್ಯಪದ್ಧತಿ ಅಗತ್ಯವೆಂದು ಹೇಳಿದರು. ದೊಡ್ಡ ಪ್ರಮಾಣದ…

ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರು: ಭಾರತೀಯ ಕ್ಯಾಥೋಲಿಕ್ ಯುವ ಚಳವಳಿ (ICYM) ಮಂಗಳೂರು ಡಯಾಸಿಸ್‌ನ 2026–27ನೇ ಸಾಲಿನ ಅಧ್ಯಕ್ಷರಾಗಿ ಕ್ರಿಸ್ಟನ್ ಜೋಶುವಾ ಮೆನೆಜಸ್ ದಾಖಲೆ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ರೊಸಾರಿಯೊ ಕ್ಯಾಥೆಡ್ರಲ್ ಹಾಲ್‌ನಲ್ಲಿ ನಡೆದ 80ನೇ ಐಸಿವೈಎಂ ಸಾರ್ವತ್ರಿಕ ಚುನಾವಣೆಯಲ್ಲಿ ಕ್ರಿಸ್ಟನ್ 269 ಮತಗಳನ್ನು ಪಡೆದು ಅವಿತ್ ಪ್ರೆಮ್ಸನ್ ಲೋಬೊ (99 ಮತ) ಅವರನ್ನು ಸೋಲಿಸಿದರು. ಇದು ಐಸಿವೈಎಂ ಮಂಗಳೂರು ಡಯಾಸಿಸ್ ಚುನಾವಣೆಯ ಇತಿಹಾಸದಲ್ಲೇ ಅಭ್ಯರ್ಥಿಯೊಬ್ಬರು ಪಡೆದ ಅತ್ಯಧಿಕ ಮತಗಳಾಗಿದೆ. ಡೆರೆಬೈಲ್‌ನ ಎಡ್ವರ್ಡ್ ಮತ್ತು ಬೆನೆಡಿಕ್ಟಾ ಮೆನೆಜಸ್ ದಂಪತಿಯ ಪುತ್ರರಾದ ಕ್ರಿಸ್ಟನ್, ಶೈಕ್ಷಣಿಕ, ಧಾರ್ಮಿಕ ಹಾಗೂ ವಿದ್ಯಾರ್ಥಿ ಸಂಘಟನೆಗಳಲ್ಲಿ ಹಲವು ನಾಯಕತ್ವ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಕುಂಟಿಕಾನದ ಸೇಂಟ್ ಆನ್ಸ್ ಶಾಲೆಯ ವಿದ್ಯಾರ್ಥಿ ನಾಯಕನಾಗಿ ಆರಂಭವಾದ ಅವರ ನಾಯಕತ್ವದ ಪಯಣ, ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮಂಡಳಿ ಅಧ್ಯಕ್ಷರ ಹುದ್ದೆಯವರೆಗೂ ವಿಸ್ತರಿಸಿದೆ. ಚರ್ಚ್ ಚಟುವಟಿಕೆಗಳಲ್ಲಿ ವೈಸಿಎಸ್ ಘಟಕದ ಅಧ್ಯಕ್ಷ, ಡೆರೆಬೈಲ್ ಐಸಿವೈಎಂ ಅಧ್ಯಕ್ಷ,…

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಮೂರು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಭಾಗಗಳಲ್ಲಿ ಬಲವಾದ…

ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಂಬೈ: ಧಾರಾಕಾರ ಮಳೆ ಮತ್ತು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆ ಎಚ್ಚರಿಕೆಯ ಹಿನ್ನೆಲೆಯಲ್ಲಿ ಮುಂಬೈ ವಿಶ್ವವಿದ್ಯಾಲಯವು ಸೋಮವಾರ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ನಿರಂತರ ಮಳೆ ಮತ್ತು ಹವಾಮಾನ ವೈಪರೀತ್ಯದಿಂದ ಸಂಚಾರ ಹಾಗೂ ಪರೀಕ್ಷೆಗಳ ಸುಗಮ ನಿರ್ವಹಣೆಗೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ಹೊಸ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಪರಿಷ್ಕೃತ ವೇಳಾಪಟ್ಟಿಗಾಗಿ ವಿದ್ಯಾರ್ಥಿಗಳು ಮುಂಬೈ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಪರಿಶೀಲಿಸದ ಮಾಹಿತಿಯನ್ನು ನಂಬದಂತೆ ವಿಶ್ವವಿದ್ಯಾಲಯ ಮನವಿ ಮಾಡಿದೆ.

ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

ಮುಂಬೈ: ಧಾರಾಕಾರ ಮಳೆಯಿಂದ ಮಹಾರಾಷ್ಟ್ರದ ರಾಜಧಾನಿ ಮುಂಬೈ ತತ್ತರಿಸಿದೆ. ಭಾನುವಾರ ಮುಂಬೈನ ಹಲವು ಭಾಗಗಳಲ್ಲಿ 200 ರಿಂದ 300 ಮಿ.ಮೀ.ವರೆಗೆ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ. ಸೋಮವಾರವೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆ ಸಂದರ್ಭದಲ್ಲಿ ಮನ್ಖುರ್ಡ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಓರ್ವ ಗಾಯಗೊಂಡಿದ್ದು, ಮತ್ತೊಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ, ಬಿಎಂಸಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾನುವಾರ ರಾತ್ರಿ ಮನ್ಖುರ್ಡ್‌ನ ಜನತಾ ನಗರದಲ್ಲಿ ಹನುಮಾನ್ ಮಂದಿರದ ಸಮೀಪ ಕಟ್ಟಡದ ಒಂದು ಭಾಗ ಏಕಾಏಕಿ ಕುಸಿದಿದೆ. ಅವಶೇಷಗಳಡಿಯಿಂದ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಈ ನಡುವೆ, ಮಳೆಯ ಅಬ್ಬರದಿಂದ ನಗರದಲ್ಲಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಹಾಗೂ ಜನಜೀವನ…