ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವ್ಯಕ್ತಪಡಿಸುತ್ತಿರುವ ವಿರೋಧವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನಿಸಿದ್ದು, ಅವರ ನಿಲುವಿನಲ್ಲಿ ಸ್ಪಷ್ಟ ದ್ವಂದ್ವವಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಪರವಾಗಿ ಬಿಜೆಪಿ ಹಾಗೂ ಜೆಡಿಎಸ್ ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಕೆಲವು ವಿಷಯಗಳನ್ನು ಬಹಿರಂಗವಾಗಿ ಘೋಷಿಸಬೇಕು ಎಂದು ಅವರು ಸವಾಲು ಹಾಕಿದ್ದಾರೆ. ಸುರ್ಜೇವಾಲ ಅವರ ಪ್ರಕಾರ, ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ಎಸ್‌ಐಆರ್ ಹೆಸರಿನಲ್ಲಿ 47 ಲಕ್ಷ ಮತದಾರರ ಹೆಸರುಗಳನ್ನು ಅಳಿಸಿರುವುದು ತಪ್ಪು ಎಂದು ಬಿಜೆಪಿ ಒಪ್ಪಿಕೊಂಡು, ಆ ಚುನಾವಣೆಯ ಫಲಿತಾಂಶವನ್ನು ಅಮಾನ್ಯಗೊಳಿಸಬೇಕು. ಅದೇ ರೀತಿ, ಪಶ್ಚಿಮ ಬಂಗಾಳದಲ್ಲಿ 84 ಲಕ್ಷ ಹಾಗೂ ಅಸ್ಸಾಂನಲ್ಲಿ 11 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿರುವುದೂ ತಪ್ಪು ಎಂದು ಘೋಷಿಸಿ, ಆ ರಾಜ್ಯಗಳ…
