‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

ಹೈದರಾಬಾದ್: ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂಪಾಯಿ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಬಿ.ವಿ. ನಂದಿನಿ ರೆಡ್ಡಿ ನಿರ್ದೇಶಿಸಿರುವ ಈ ತೆಲುಗು ಆ್ಯಕ್ಷನ್–ಕಾಮಿಡಿ ಚಿತ್ರದಲ್ಲಿ ಗುಲ್ಶನ್ ದೇವಯ್ಯ ಹಾಗೂ ದಿಗಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಮಂತಾ, ರಾಜ್ ನಿಡಿಮೋರು ಮತ್ತು ಹಿಮಾಂಕ್ ರೆಡ್ಡಿ ಚಿತ್ರವನ್ನು ನಿರ್ಮಿಸಿದ್ದಾರೆ. 100 ಕೋಟಿ ಗಳಿಕೆಯ ಸಂಭ್ರಮವನ್ನು ಸಮಂತಾ ತಮ್ಮ ಮನೆಯಲ್ಲಿ ಆಚರಿಸಿದ್ದು, ಅದರ ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ರಾಜ್ ನಿಡಿಮೋರು ಚಿತ್ರದ ಗಳಿಕೆ ಕುರಿತು ತಿಳಿಸುತ್ತಿದ್ದಂತೆ ಸಮಂತಾ ಸಂತಸ ವ್ಯಕ್ತಪಡಿಸಿ, ಪ್ರೇಕ್ಷಕರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಚಿತ್ರದ ಯಶಸ್ಸಿನ ಕುರಿತು ಪ್ರತಿಕ್ರಿಯಿಸಿರುವ ಸಮಂತಾ, ಬಿಡುಗಡೆಗೂ ಮುನ್ನ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಚಿತ್ರಮಂದಿರ ಮಾಲೀಕರು ಸೇರಿದಂತೆ ಹಲವರಿಗೆ ಅನುಮಾನವಿತ್ತು ಎಂದು ಹೇಳಿದ್ದಾರೆ.…

ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದ ನಾ ಲಾಡ್‌ಪ್ರಾವೋ (Na Ladprao) ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳ ನಡುವೆ ಸಿಲುಕಿದವರು ಆತಂಕದಿಂದ ಹೊರಬರಲು ಯತ್ನಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಥಾಯ್ಲೆಂಡ್ ಪ್ರಧಾನಿ ಅನುತಿನ್ ಚಾರ್ನ್ವಿರಾಕುಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವರ ಮೃತದೇಹಗಳು ಪಬ್‌ನ ಹಿಂಭಾಗದ ಶೌಚಾಲಯಗಳ ಬಳಿ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಗೀತಗಾರರೊಬ್ಬರ ಪ್ರಕಾರ, ವೇದಿಕೆ ಸಮೀಪದ ವಿದ್ಯುತ್ ಸರ್ಕ್ಯೂಟ್ ಬ್ರೇಕರ್‌ನಿಂದ ಮೊದಲು ಹೊಗೆ ಕಾಣಿಸಿಕೊಂಡು, ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಂಡು ಭಾರೀ ಸ್ಫೋಟ…

ರಾಜ್ಯದ ಕೆಲವೆಡೆ ಬಿರುಗಾಳಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇರುವುದರಿಂದ ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ಈ ಭಾಗಗಳಲ್ಲೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲೂ ಗಾಳಿ-ಮಳೆಯ ವಾತಾವರಣ…