ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಅಮೆರಿಕದೊಂದಿಗೆ ಮಾಡಿಕೊಂಡಿದ್ದ ತಾತ್ಕಾಲಿಕ ಕದನ ವಿರಾಮ ಹಾಗೂ ತಿಳಿವಳಿಕೆ ಒಪ್ಪಂದದಿಂದ ಹಿಂದೆ ಸರಿಯುತ್ತಿರುವುದಾಗಿ ಇರಾನ್ ಘೋಷಿಸಿದೆ. ಅಮೆರಿಕ ಒಪ್ಪಂದದ ಷರತ್ತುಗಳನ್ನು ಪದೇ ಪದೇ ಉಲ್ಲಂಘಿಸಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಆರೋಪಿಸಿದೆ. ಇರಾನ್ ಉಪ ವಿದೇಶಾಂಗ ಸಚಿವ ಕಜೆಮ್ ಘರಿಬಬಾದಿ, ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ನಿಯಂತ್ರಣವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ. ಇದರ ನಡುವೆ, ಅಮೆರಿಕ ಪಡೆಗಳು ಇರಾನ್ ಬಂದರುಗಳ ಬಳಿ ನೌಕಾ ದಿಗ್ಬಂಧನವನ್ನು ಬಲಪಡಿಸಿದ್ದು, ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಎರಡೂ ದೇಶಗಳ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ವರದಿಗಳು ಹೊರಬಿದ್ದಿವೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಪ್ರಕಾರ, ಇರಾನ್ ಬಹ್ರೇನ್ ಹಾಗೂ ಕುವೈತ್ ಸೇರಿ ಗಲ್ಫ್ ಪ್ರದೇಶದತ್ತ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು…
Day: July 15, 2026
ರಾಜ್ಯದಲ್ಲಿ ಬರದ ಛಾಯೆ: ಕೇಂದ್ರದ ಅಧ್ಯಯನ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಪತ್ರ
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಅಧ್ಯಯನ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಪರಿಸ್ಥಿತಿ ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಬರ ನಿರ್ವಹಣೆಗೆ ಅಗತ್ಯ ನೆರವು ನೀಡುವಂತೆಯೂ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದ್ದು, 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 141 ತಾಲೂಕುಗಳಲ್ಲಿ ಮಳೆಯ ಅಭಾವ ಕಂಡುಬಂದಿದ್ದು, ಮುಂಗಾರು ಬಿತ್ತನೆ ಕೇವಲ ಶೇ.34ರಷ್ಟೇ ಪೂರ್ಣಗೊಂಡಿದೆ. 14 ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ.34ರಷ್ಟು ನೀರಿನ ಸಂಗ್ರಹವಿರುವುದರಿಂದ ಕೃಷಿ, ಕುಡಿಯುವ ನೀರು ಹಾಗೂ ಗ್ರಾಮೀಣ ಜೀವನೋಪಾಯದ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಮೌಲ್ಯಮಾಪನ ಮಾಡಿದರೆ, ರೈತರಿಗೆ ಕೇಂದ್ರ ಸರ್ಕಾರ ತಮ್ಮೊಂದಿಗಿದೆ ಎಂಬ ವಿಶ್ವಾಸ…
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ್ ನಿರ್ದೋಷಿ ಎಂದು ಕೊನೆಗೂ ಒಪ್ಪಿಕೊಂಡ ಸರ್ಕಾರ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ ವಿರುದ್ಧದ ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. 2025ರ ಸೆಪ್ಟೆಂಬರ್ 8ರಂದು ಬಿ. ದಯಾನಂದ ಅವರು ಲಿಖಿತ ಸಮರ್ಥನೆ ಸಲ್ಲಿಸಿ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿ ತನಗೆ ಕ್ಲೀನ್‌ಚಿಟ್ ನೀಡುವಂತೆ ಮನವಿ ಮಾಡಿದ್ದರು. ಅವರ ಸಮರ್ಥನೆ ಹಾಗೂ ಆಡಳಿತ ಇಲಾಖೆಯ ಅಭಿಪ್ರಾಯವನ್ನು ಪರಿಶೀಲಿಸಿದ ಸರ್ಕಾರ, 2026ರ ಜುಲೈ 14ರಂದು ಹೊರಡಿಸಿದ ಆದೇಶದಲ್ಲಿ ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969ರ ನಿಯಮ 8(4)ರಡಿ ಆರಂಭಿಸಿದ್ದ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ಕಾಲ್ತುಳಿತ ಪ್ರಕರಣದ ಬಳಿಕ ಆಗಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ…
ರಿಯಲ್ ಎಸ್ಟೇಟ್ ಬಿಟ್ಟು ಜನರ ಸಮಸ್ಯೆ ಕಡೆ ಗಮನ ಹರಿಸಿ; ಸಿಎಂಗೆ ವಿಜಯೇಂದ್ರ ತರಾಟೆ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಸಮಸ್ಯೆಗಳ ಕಡೆ ಗಮನಹರಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬರ ಪರಿಹಾರಕ್ಕಾಗಿ ಪ್ರಧಾನಿಗೆ ಪತ್ರ ಬರೆಯುವ ಬದಲು ರಾಜ್ಯ ಸರ್ಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದ್ದಾರೆ. ಕಲಬುರಗಿಯಲ್ಲಿ ಬರ ಅಧ್ಯಯನಕ್ಕೆ ಸಚಿವರನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದನ್ನು ನೆನಪಿಸಿದ ವಿಜಯೇಂದ್ರ, “ರಾಜ್ಯಕ್ಕೆ ಇನ್ನೂ ಕೃಷಿ ಸಚಿವರೇ ಇಲ್ಲ. ಕಂದಾಯ ಸಚಿವರು ಕ್ಷೇತ್ರ ಬಿಟ್ಟು ಹೊರಬರುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಸಚಿವರು ಬೇರೆ ವಿಷಯಗಳಲ್ಲಿ ನಿರತರಾಗಿದ್ದಾರೆ. ಕೈಗಾರಿಕಾ ಸಚಿವರು ರೋಡ್ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ. ಗೃಹ ಸಚಿವರು ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಸಾರಿಗೆ ಸಚಿವರು ಬಸ್ ಪ್ರಯಾಣದಲ್ಲಿದ್ದಾರೆ. ನೀರಾವರಿ ಸಚಿವರಿಗೆ ಇಲಾಖೆಯಲ್ಲೇ ಆಸಕ್ತಿ ಇಲ್ಲ. ಜಿಲ್ಲೆಗಳಲ್ಲಿ ಕೆಡಿಪಿ…
ಕರ್ನಾಟಕದ ಹಣ ಕಾಂಗ್ರೆಸ್ ಪಕ್ಷದ ನಿಧಿಯಲ್ಲ; ಭಾರತ್ ಜೋಡೋ ಯುವ ಸಂಘ ಯೋಜನೆಗೆ ಆರ್.ಅಶೋಕ್ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರ 6,000 ‘ಭಾರತ್ ಜೋಡೋ ಯುವ ಸಂಘ’ ರಚಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪ್ರಚಾರಕ್ಕೆ ಬಳಸುತ್ತಿದೆ. ‘ಭಾರತ್ ಜೋಡೋ ಯುವ ಸಂಘ’ ಯೋಜನೆ ತೆರಿಗೆದಾರರ ಹಣದಿಂದ ನಡೆಯುವ ಕಾಂಗ್ರೆಸ್ ಪ್ರಚಾರ ಯಂತ್ರವಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಖಾತರಿ ಅನುಷ್ಠಾನ ಸಮಿತಿಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ಆಶ್ರಯ ನೀಡಲಾಗಿತ್ತು. ಇದೀಗ “ಸಾಂವಿಧಾನಿಕ ಮೌಲ್ಯಗಳು” ಮತ್ತು “ಸಾಮಾಜಿಕ ಸಾಮರಸ್ಯ” ಹೆಸರಿನಲ್ಲಿ ಮತ್ತೊಮ್ಮೆ ತೆರಿಗೆದಾರರ ಹಣವನ್ನು ಪಕ್ಷದ ಹಿತಾಸಕ್ತಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. “ರಾಜ್ಯದ ಖಜಾನೆ ಕಾಂಗ್ರೆಸ್ ಪಕ್ಷದ ಖಾಸಗಿ ಚುನಾವಣಾ ನಿಧಿಯಲ್ಲ. ಅದು ರಾಹುಲ್…
ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಬಂಧನ; ಹಲ್ಲೆಗೆ ಯತ್ನಿಸಿದ ವೇಳೆ ಪೊಲೀಸ್ ಫೈರಿಂಗ್
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷಿತ ಕೈದಿಗಳ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಮಂಗಳವಾರ ತಡರಾತ್ರಿ ಸುಮಾರು 15ರಿಂದ 20 ಅಡಿ ಎತ್ತರದ ಜೈಲು ಗೋಡೆ ಹಾರಿ, ಟವೆಲ್ ಮತ್ತು ಹಾಸಿಗೆಗಳ ನೆರವಿನಿಂದ ಮೂವರು ಕೈದಿಗಳು ಪರಾರಿಯಾಗಿದ್ದರು. ಈ ಘಟನೆ ಕಾರಾಗೃಹದ ಭದ್ರತಾ ವ್ಯವಸ್ಥೆ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿತ್ತು. ಮಂಗಳವಾರ ರಾತ್ರಿ ಜೈಲಿನಿಂದ ಪರಾರಿಯಾಗಿದ್ದ ಸಂತೋಷ್, ಮಸ್ತಾನ್ ಹಾಗೂ ಸಾಗರ್ ಬಂಧನಕ್ಕಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಶೋಧ ಕಾರ್ಯಾಚರಣೆ ವೇಳೆ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಸಂತೋಷ್ ಅಡಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಆರೋಪಿಯನ್ನು ಬಂಧಿಸಲು ತೆರಳಿದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎಂದು…
