ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಯಿತು. ಜಂತರ್ ಮಂತರ್‌ನಿಂದ ಸಂಸತ್ತಿನತ್ತ ಮೆರವಣಿಗೆ ( ‘ಚಲೋ ಸಂಸದ್’) ನಡೆಸಲು ಪ್ರತಿಭಟನಾಕಾರರು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದು, ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಹಾಗೂ ತಳ್ಳಾಟ ಉಂಟಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನಾ ಸ್ಥಳದಲ್ಲಿ ಹಲವು ರಾಜಕೀಯ ನಾಯಕರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಆಜಾದ್ ಸಮಾಜ ಪಾರ್ಟಿ-ಕಾನ್ಶಿರಾಮ್ ಅಧ್ಯಕ್ಷ ಹಾಗೂ ಸಂಸದ ಚಂದ್ರಶೇಖರ್ ಆಜಾದ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು. ಭದ್ರತಾ ಕಾರಣಗಳಿಂದ ಸಂಸತ್ ಪ್ರದೇಶದಲ್ಲಿ ಮೆರವಣಿಗೆಗೆ…
Day: July 20, 2026
‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ
ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು ಎಎನ್‌ಐ ಪಾಡ್‌ಕ್ಯಾಸ್ಟ್‌ನಲ್ಲಿ ಮಾಡಿದ ಹೇಳಿಕೆಗಳ ಕುರಿತು ಸ್ವತಂತ್ರ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ ಸಿಟಿಜನ್ ರೈಟ್ಸ್ ಫೌಂಡೇಶನ್ (ಸಿಆರ್‌ಎಫ್) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸಿಆರ್‌ಎಫ್ ಅಧ್ಯಕ್ಷ ಕೆ.ಎ. ಪಾಲ್ ಅವರು ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ಮನವಿಯಲ್ಲಿ, ಮಣಿ ಅವರ ಹೇಳಿಕೆಗಳನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದು ಅಥವಾ ಸೂಕ್ತ ಸ್ವತಂತ್ರ ತನಿಖಾ ಸಂಸ್ಥೆಗೆ ಜವಾಬ್ದಾರಿ ವಹಿಸುವಂತೆ ಕೋರಿದ್ದಾರೆ. ‘ಹಿಂದೂ ಟೆರರಿಸಂ’ ಎಂದು ಪ್ರಯತ್ನ ಏಕೆ ನಡೆದಿತ್ತು? ಮುಂಬೈ ದಾಳಿ ಹಿಂದಿನ ಮರ್ಮ ಏನು? ಸಾಧ್ವಿ ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ವಿರುದ್ಧದ ಆರೋಪದ ಹಿಂದಿನ ಪಿತೂರಿ ಯಾರದ್ದು? ಪಾಕಿಸ್ತಾನದ ISI ಜೊತೆ ರಾಜಕೀಯ ಪಕ್ಷದ ನಂಟು ಏನು? ಎಂಬ ಬಗ್ಗೆ ನಿವೃತ್ತ MHA…
ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳು ಹಾಗೂ ನಕಲಿ ಖಾತೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್‌ವುಡ್ ನಟಿ ಐಶ್ವರ್ಯ ಸಿಂದೋಗಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳಿಗೆ ನಿರಂತರವಾಗಿ ಅಶ್ಲೀಲ, ಅವಹೇಳನಕಾರಿ ಹಾಗೂ ಮಾನಹಾನಿಕರ ಕಾಮೆಂಟ್‌ಗಳು ಬರುತ್ತಿವೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕೃತ್ಯಕ್ಕೆ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬನೇ ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಹಿಂದೆ ಇದೇ ವ್ಯಕ್ತಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಅದೇ ವ್ಯಕ್ತಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವುದಾಗಿ ಐಶ್ವರ್ಯ ಸಿಂದೋಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಿರುಕುಳ ನೀಡುತ್ತಿರುವ ನಕಲಿ ಖಾತೆಗಳ ಕುರಿತು ಸಮಗ್ರ ತನಿಖೆ…
ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, 178 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿ ಕೇವಲ 40% ನೀರು ಸಂಗ್ರಹವಿದ್ದು, ಸದ್ಯಕ್ಕೆ ಅದನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಅಣೆಕಟ್ಟುಗಳಿಗೆ ಸಮರ್ಪಕ ನೀರು ಬಂದ ಬಳಿಕವೇ ನೀರು ಬಿಡುಗಡೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ 23%ಕ್ಕೆ ಕುಸಿದಿದೆ. 3,817 ಸಣ್ಣ ನೀರಾವರಿ ಕೆರೆಗಳ ಪೈಕಿ 3,235 ಕೆರೆಗಳಲ್ಲಿ ಹಾಗೂ 32,504 ಜಿಲ್ಲಾ ಪಂಚಾಯಿತಿ ಕೆರೆಗಳ ಪೈಕಿ 27,450 ಕೆರೆಗಳಲ್ಲಿ ಶೇ.50ಕ್ಕಿಂತ ಕಡಿಮೆ ನೀರಿದೆ…
