ಮುಂಬೈ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಶಾಂತಿಯುತ ಹೋರಾಟವನ್ನು ಶ್ಲಾಘಿಸಿರುವ ಅವರು, ಈ ಹೋರಾಟಕ್ಕೆ ಯಾವುದೇ ರಾಜಕೀಯ ಬಣ್ಣ ಬಳಿಯಬಾರದು ಎಂದು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಲ್ಮಾನ್ ಖಾನ್, ಆರಂಭದಲ್ಲಿ ಶಾಂತಿಯುತವಾಗಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿರುವುದು ಬೇಸರ ತಂದಿದೆ. ಈ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳೊಂದಿಗೆ ತಮ್ಮ ಸಹಾನುಭೂತಿ ಇದೆ ಎಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ದೇಶದ ವಿದ್ಯಾರ್ಥಿಗಳು ಒಂದಾಗಿ ಹೋರಾಡುತ್ತಿರುವುದು ಸಂತಸದ ಸಂಗತಿ. ಕಷ್ಟಪಟ್ಟು ಓದಿ ಉತ್ತಮ ಭವಿಷ್ಯ ರೂಪಿಸಬೇಕೆಂಬ ವಿದ್ಯಾರ್ಥಿಗಳ ಸಮರ್ಪಣೆ ಹಾಗೂ ಪ್ರಾಮಾಣಿಕತೆ ಶ್ಲಾಘನೀಯ ಎಂದು ಅವರು ಹೇಳಿದ್ದಾರೆ. It was such a peaceful…
Day: July 23, 2026
ಆಗಸ್ಟ್ 8ರೊಳಗೆ ಎಸ್‌ಐಆರ್ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂತಿಮ ಹಂತ ತಲುಪಿದ್ದು, ಆಗಸ್ಟ್ 8ರೊಳಗೆ ಎಸ್‌ಐಆರ್ ಫಾರ್ಮ್‌ಗಳನ್ನು ಕಡ್ಡಾಯವಾಗಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಮತದಾರರಿಗೆ ಮನವಿ ಮಾಡಿದೆ. ರಾಜ್ಯಾದ್ಯಂತ ವಿತರಿಸಲಾದ 5.53 ಕೋಟಿ ಫಾರ್ಮ್‌ಗಳಲ್ಲಿ ಇದುವರೆಗೆ 3.67 ಕೋಟಿ (ಶೇ.66.35) ಫಾರ್ಮ್‌ಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. 1.56 ಕೋಟಿ ಮತದಾರರ ಸ್ವಯಂ ಮ್ಯಾಪಿಂಗ್ ಹಾಗೂ 1.93 ಕೋಟಿ ಮತದಾರರ ವಂಶಾವಳಿ ಮ್ಯಾಪಿಂಗ್ ಪೂರ್ಣಗೊಂಡಿದೆ. ಆದರೆ, 17.19 ಲಕ್ಷ ಫಾರ್ಮ್‌ಗಳು ಮ್ಯಾಪಿಂಗ್ ಮಾಹಿತಿಯಿಲ್ಲದೆ ಸಲ್ಲಿಕೆಯಾಗಿವೆ. ಮ್ಯಾಪಿಂಗ್ ವಿವರಗಳು ಇಲ್ಲದಿದ್ದರೂ ಫಾರ್ಮ್‌ಗಳನ್ನು ಆಗಸ್ಟ್ 8ರೊಳಗೆ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಕುಟುಂಬದ ಯಾವುದೇ ವಯಸ್ಕ ಸದಸ್ಯರು ಫಾರ್ಮ್ ಸಲ್ಲಿಸಬಹುದಾಗಿದೆ. ಈ ಅವಧಿಯಲ್ಲಿ ಸಲ್ಲಿಕೆಯಾದ ಎಲ್ಲ ಅರ್ಜಿದಾರರ ಹೆಸರುಗಳನ್ನು ಆಗಸ್ಟ್ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಎಎಸ್‌ಡಿಡಿಒ (ಗೈರುಹಾಜರಿ,…
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ
ನವದೆಹಲಿ: ನೀಟ್ (NEET) ಸೇರಿದಂತೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ತ್ವರಿತ ನ್ಯಾಯಾಲಯ (ಫಾಸ್ಟ್-ಟ್ರ್ಯಾಕ್ ಕೋರ್ಟ್) ಸ್ಥಾಪಿಸಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಆರೋಪಿಗಳಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. Nothing is more important than the welfare and future of our youth! We have decided to set up fast-track courts to ensure swift and stringent punishment for those involved in paper leaks. Have directed the concerned…
