ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕರಾವಳಿಯಲ್ಲಿ ಜುಲೈ 30ರವರೆಗೆ ಆರೆಂಜ್ ಅಲರ್ಟ್

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಿವೆ. ಕರಾವಳಿ ಜಿಲ್ಲೆಗಳಿಗೆ ಜುಲೈ 30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜುಲೈ 28ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ವಿಜಯನಗರ,…

ಬೆಂಗಳೂರು 2ನೇ ವಿಮಾನ ನಿಲ್ದಾಣ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಪ್ರಸ್ತಾವನೆ ಬಂದಿಲ್ಲ ಎಂದ ಕೇಂದ್ರ

ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ. ಬೆಂಗಳೂರು ದಕ್ಷಿಣ ಮತ್ತು ತುಮಕೂರು ಭಾಗಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಕೇಂದ್ರದ ಈ ಹೇಳಿಕೆ ಮಹತ್ವ ಪಡೆದಿದೆ. ಲೋಕಸಭೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಲಿಖಿತ ಉತ್ತರ ನೀಡಿದರು. ರಾಜ್ಯ ಸರ್ಕಾರದ ಮನವಿಯಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಬೆಂಗಳೂರಿನ ಸುತ್ತಮುತ್ತ ಗುರುತಿಸಲಾದ ಮೂರು ಪ್ರಸ್ತಾವಿತ ಸ್ಥಳಗಳಲ್ಲಿ ಪೂರ್ವ-ಸಾಧ್ಯತಾ ಅಧ್ಯಯನ ನಡೆಸಿ, ಅದರ ವರದಿಯನ್ನು ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿಯಡಿ ಅಗತ್ಯವಿರುವ ಅಧಿಕೃತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಇದುವರೆಗೆ…