ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ; ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ, ಪ್ರಧಾನಿ ಭರವಸೆ

ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಸಾಮಾನ್ಯ ವಿಷಯವಲ್ಲ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಅನುಭವಿಸಿರುವ ನೋವು ಹಾಗೂ ಆತಂಕವನ್ನು ಸರ್ಕಾರ ಅರ್ಥಮಾಡಿಕೊಂಡಿದೆ ಎಂದು ಹೇಳಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ಹೊಸ ಕಾನೂನು ತರಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಈ ಕುರಿತು ಕರಡು ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುವುದು ಎಂದು ಅವರು ಹೇಳಿದ್ದಾರೆ. More strict actions against paper leaks to come in tomorrow’s Cabinet! pic.twitter.com/NRysBukk5U — Narendra Modi…

ಕಾಶಿ, ಅಯೋಧ್ಯೆ, ಮಥುರಾದಲ್ಲಿ ಆಧ್ಯಾತ್ಮಿಕ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಒತ್ತು

ನವದೆಹಲಿ: ಕಾಶಿ, ಅಯೋಧ್ಯೆ ಹಾಗೂ ಮಥುರಾದಲ್ಲಿ ತೀರ್ಥಯಾತ್ರಿಗಳ ಅನುಭವವನ್ನು ಸುಧಾರಿಸುವ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ ಹಲವು ಪ್ರವಾಸೋದ್ಯಮ ಮೂಲಸೌಕರ್ಯ ಯೋಜನೆಗಳನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದು ರಾಜ್ಯಸಭೆಗೆ ತಿಳಿಸಲಾಗಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲಿಖಿತ ಉತ್ತರದಲ್ಲಿ, ಪ್ರಸಾದ್ (PRASHAD), ಸ್ವದೇಶ್ ದರ್ಶನ, ಸ್ವದೇಶ್ ದರ್ಶನ 2.0, ಸವಾಲು ಆಧಾರಿತ ಗಮ್ಯಸ್ಥಾನ ಅಭಿವೃದ್ಧಿ (CBDD), ಕೇಂದ್ರ ಸಂಸ್ಥೆಗಳಿಗೆ ನೆರವು (ACA) ಹಾಗೂ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು (SASCI) ಯೋಜನೆಗಳಡಿ ವಿವಿಧ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಲ್ಲಿಸುವ ಪ್ರಸ್ತಾವನೆಗಳು, ಯೋಜನಾ ಮಾರ್ಗಸೂಚಿಗಳು ಹಾಗೂ ನಿಧಿಯ ಲಭ್ಯತೆಯನ್ನು ಆಧರಿಸಿ ಯೋಜನೆಗಳಿಗೆ ಅನುಮೋದನೆ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಈ ಯೋಜನೆಗಳ ಮೂಲಕ ಕಾಶಿ, ಅಯೋಧ್ಯೆ ಮತ್ತು ಮಥುರಾದ ವಾಸ್ತುಶಿಲ್ಪ,…

ದೇಶೀಯ ‘ಕುಶಾ’ ಕ್ಷಿಪಣಿಯ ಮೊದಲ ಯಶಸ್ವಿ ಪರೀಕ್ಷೆ; ಭಾರತದ ವಾಯು ರಕ್ಷಣೆಗೆ ಮತ್ತಷ್ಟು ಬಲ

ನವದೆಹಲಿ: ಭಾರತದ ವಾಯು ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಗುರುವಾರ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ‘ಕುಶಾ’ (Kusha) ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿಯ (LRSAM) ಮೊದಲ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಒಡಿಶಾದ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ನಡೆದ ಪರೀಕ್ಷೆಯಲ್ಲಿ, ಹೆಚ್ಚಿನ ವೇಗ ಮತ್ತು ಎತ್ತರದಲ್ಲಿ ಸಂಚರಿಸುವ ವೈಮಾನಿಕ ಗುರಿಯನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಕುಶಾ ಕ್ಷಿಪಣಿ ವ್ಯವಸ್ಥೆಯನ್ನು ಯುದ್ಧ ವಿಮಾನಗಳು, ಕ್ಷಿಪಣಿಗಳು, ಮಾನವರಹಿತ ವೈಮಾನಿಕ ವಾಹನಗಳು (UAV), ಹಾಗೂ ಇತರ ವೈಮಾನಿಕ ಬೆದರಿಕೆಗಳನ್ನು ದೂರದ ವ್ಯಾಪ್ತಿಯಲ್ಲೇ ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗಿದೆ. ಈ ವ್ಯವಸ್ಥೆಯ ಕ್ಷಿಪಣಿಗಳು, ರಾಡಾರ್‌ಗಳು ಮತ್ತು ಕಮಾಂಡ್-ಅಂಡ್-ಕಂಟ್ರೋಲ್ ಜಾಲವನ್ನು ಡಿಆರ್‌ಡಿಒದ ವಿವಿಧ ಪ್ರಯೋಗಾಲಯಗಳು ಹಾಗೂ ಭಾರತೀಯ ಕೈಗಾರಿಕಾ ಪಾಲುದಾರರ ಸಹಯೋಗದಲ್ಲಿ ಅಭಿವೃದ್ಧಿಪಡಿಸಿವೆ. ಯಶಸ್ವಿ ಪರೀಕ್ಷೆಗೆ ವಿಜ್ಞಾನಿಗಳು…

‘ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ’: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ರಾಹುಲ್ ಗಾಂಧಿ ಬಂಧನ ಹಾಗೂ ಬಿಜೆಪಿ ನಾಯಕರ ಆರೋಪಗಳಿಗೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಹೇಳಿಕೆಗಳನ್ನು ಟೀಕಿಸಿ, ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಬಳಸುತ್ತಿರುವ ಭಾಷೆ ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಭವಿಷ್ಯದಂತಹ ಗಂಭೀರ ವಿಚಾರಗಳಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು. ದೇಶದಲ್ಲಿ 2014ರಿಂದ ಅನೇಕ ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದನ್ನು ಉಲ್ಲೇಖಿಸಿದ ಅವರು, ನೀಟ್ ವ್ಯವಸ್ಥೆಯ ಜಾರಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆರೋಪಿಸಿದರು. ಬಡ ವಿದ್ಯಾರ್ಥಿಗಳ ಹಿತಕ್ಕಾಗಿ ಜಾರಿಗೆ ಬಂದಿದ್ದ ಸಿಇಟಿ ವ್ಯವಸ್ಥೆಯಲ್ಲಿ ಇಂತಹ ಸಮಸ್ಯೆಗಳು ಕಂಡುಬಂದಿರಲಿಲ್ಲ ಎಂದು ಹೇಳಿದರು. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಚೇರಿಗಳಲ್ಲಿ ಹಿಂದಿನ…

ಶಾಸಕರ ಮೇಲಿನ ಹಲ್ಲೆ ಖಂಡಿಸಿ ವಿಧಾನಸೌಧದಲ್ಲಿ ಬಿಜೆಪಿ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿ ಬಿಜೆಪಿ ನಾಯಕರು ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದರು. ಬಳಿಕ ಬಿಜೆಪಿ ನಿಯೋಗವು ರಾಜ್ಯಪಾಲರ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿತು. ಬಿಜೆಪಿ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಿಂಸಾತ್ಮಕ ಹಲ್ಲೆ ನಡೆಸಿದ್ದು, ಇದು ಸರ್ಕಾರಿ ಪ್ರಾಯೋಜಿತ ದೌರ್ಜನ್ಯವಾಗಿದೆ ಎಂದು ಆರೋಪಿಸಿರುವ ನಿಯೋಗ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ದೂರಿದೆ. ಈ ಪ್ರಕರಣದ ಕುರಿತು…

ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

ಮುಂಬೈ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಶಾಂತಿಯುತ ಹೋರಾಟವನ್ನು ಶ್ಲಾಘಿಸಿರುವ ಅವರು, ಈ ಹೋರಾಟಕ್ಕೆ ಯಾವುದೇ ರಾಜಕೀಯ ಬಣ್ಣ ಬಳಿಯಬಾರದು ಎಂದು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಲ್ಮಾನ್ ಖಾನ್, ಆರಂಭದಲ್ಲಿ ಶಾಂತಿಯುತವಾಗಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿರುವುದು ಬೇಸರ ತಂದಿದೆ. ಈ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳೊಂದಿಗೆ ತಮ್ಮ ಸಹಾನುಭೂತಿ ಇದೆ ಎಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಉತ್ತಮ ಶಿಕ್ಷಣ ವ್ಯವಸ್ಥೆಗಾಗಿ ದೇಶದ ವಿದ್ಯಾರ್ಥಿಗಳು ಒಂದಾಗಿ ಹೋರಾಡುತ್ತಿರುವುದು ಸಂತಸದ ಸಂಗತಿ. ಕಷ್ಟಪಟ್ಟು ಓದಿ ಉತ್ತಮ ಭವಿಷ್ಯ ರೂಪಿಸಬೇಕೆಂಬ ವಿದ್ಯಾರ್ಥಿಗಳ ಸಮರ್ಪಣೆ ಹಾಗೂ ಪ್ರಾಮಾಣಿಕತೆ ಶ್ಲಾಘನೀಯ ಎಂದು ಅವರು ಹೇಳಿದ್ದಾರೆ. It was such a peaceful…

ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್ ಸಲ್ಲಿಸಿ: ಮತದಾರರಿಗೆ ಚುನಾವಣಾ ಆಯೋಗ ಮನವಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅಂತಿಮ ಹಂತ ತಲುಪಿದ್ದು, ಆಗಸ್ಟ್‌ 8ರೊಳಗೆ ಎಸ್‌ಐಆರ್‌ ಫಾರ್ಮ್‌ಗಳನ್ನು ಕಡ್ಡಾಯವಾಗಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಮತದಾರರಿಗೆ ಮನವಿ ಮಾಡಿದೆ. ರಾಜ್ಯಾದ್ಯಂತ ವಿತರಿಸಲಾದ 5.53 ಕೋಟಿ ಫಾರ್ಮ್‌ಗಳಲ್ಲಿ ಇದುವರೆಗೆ 3.67 ಕೋಟಿ (ಶೇ.66.35) ಫಾರ್ಮ್‌ಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. 1.56 ಕೋಟಿ ಮತದಾರರ ಸ್ವಯಂ ಮ್ಯಾಪಿಂಗ್ ಹಾಗೂ 1.93 ಕೋಟಿ ಮತದಾರರ ವಂಶಾವಳಿ ಮ್ಯಾಪಿಂಗ್ ಪೂರ್ಣಗೊಂಡಿದೆ. ಆದರೆ, 17.19 ಲಕ್ಷ ಫಾರ್ಮ್‌ಗಳು ಮ್ಯಾಪಿಂಗ್ ಮಾಹಿತಿಯಿಲ್ಲದೆ ಸಲ್ಲಿಕೆಯಾಗಿವೆ. ಮ್ಯಾಪಿಂಗ್ ವಿವರಗಳು ಇಲ್ಲದಿದ್ದರೂ ಫಾರ್ಮ್‌ಗಳನ್ನು ಆಗಸ್ಟ್‌ 8ರೊಳಗೆ ಬಿಎಲ್‌ಒಗಳಿಗೆ ಸಲ್ಲಿಸಬೇಕು. ಕುಟುಂಬದ ಯಾವುದೇ ವಯಸ್ಕ ಸದಸ್ಯರು ಫಾರ್ಮ್ ಸಲ್ಲಿಸಬಹುದಾಗಿದೆ. ಈ ಅವಧಿಯಲ್ಲಿ ಸಲ್ಲಿಕೆಯಾದ ಎಲ್ಲ ಅರ್ಜಿದಾರರ ಹೆಸರುಗಳನ್ನು ಆಗಸ್ಟ್‌ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಎಎಸ್‌ಡಿಡಿಒ (ಗೈರುಹಾಜರಿ,…

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ನೀಟ್‌ (NEET) ಸೇರಿದಂತೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ತ್ವರಿತ ನ್ಯಾಯಾಲಯ (ಫಾಸ್ಟ್‌-ಟ್ರ್ಯಾಕ್ ಕೋರ್ಟ್‌) ಸ್ಥಾಪಿಸಲು ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಆರೋಪಿಗಳಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. Nothing is more important than the welfare and future of our youth! We have decided to set up fast-track courts to ensure swift and stringent punishment for those involved in paper leaks. Have directed the concerned…

ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

ಮಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಕ್ರಮವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್. ಪೂಜಾರಿ ತೀವ್ರವಾಗಿ ಖಂಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ವೈಫಲ್ಯದಿಂದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದ್ದು, ಇತ್ತೀಚಿನ ನೀಟ್ ಹಗರಣದ ಬಳಿಕ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದೇಶಕ್ಕೆ ತಲೆತಗ್ಗಿಸುವ ಸಂಗತಿ ಎಂದು ಹೇಳಿದ್ದಾರೆ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಯುವಜನರ ಭವಿಷ್ಯವನ್ನು ಉಳಿಸಲು ನಾವು ಎಂದೆಂದಿಗೂ ರಾಹುಲ್ ಗಾಂಧಿಯವರೊಂದಿಗೆ ದೃಢವಾಗಿ, ಅಚಲವಾಗಿ ನಿಲ್ಲುತ್ತೇವೆ ಎಂದಿದ್ದಾರೆ. ಬಡತನ ಮತ್ತು ಸಂಕಷ್ಟದ ನಡುವೆಯೂ…

ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

ವಾಷಿಂಗ್ಟನ್:: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಮೆರಿಕ ಸೇನೆ ಸತತ 11ನೇ ರಾತ್ರಿ ಇರಾನ್‌ನ ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ವಿಮಾನ ಹ್ಯಾಂಗರ್‌ಗಳು, ಡ್ರೋನ್ ಸಂಗ್ರಹಣಾ ಕೇಂದ್ರಗಳು, ಕ್ಷಿಪಣಿ ಉಡಾವಣಾ ತಾಣಗಳು, ಸೇನಾ ಕಮಾಂಡ್ ಕೇಂದ್ರಗಳು ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಲಾಗಿದೆ ಎಂದು CENTCOM ಹೇಳಿದೆ. ಈ ಬೆಳವಣಿಗೆಯ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಅರ್ಥಪೂರ್ಣ ಮಾತುಕತೆಗೆ ಸಿದ್ಧವಾಗುವವರೆಗೆ ಯಾವುದೇ ಸಂವಾದಕ್ಕೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರೊಂದಿಗೆ ಶ್ವೇತಭವನದಲ್ಲಿ ಮಾತನಾಡಿದ ಅವರು, ಇರಾನ್ ಪರೋಕ್ಷ ಮಾರ್ಗಗಳ ಮೂಲಕ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರೆ, ಸೇನಾ ಕಾರ್ಯಾಚರಣೆ ಇನ್ನೂ ಅಂತ್ಯಗೊಂಡಿಲ್ಲ ಎಂದೂ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಇರಾನ್‌ನ ನತಾಂಜ್ ಅಣು ಕೇಂದ್ರದ…