ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ಮಾಜಿ ಅಧೀನ ಕಾರ್ಯದರ್ಶಿ ಆರ್.ವಿ.ಎಸ್. ಮಣಿ ಅವರು ಎಎನ್‌ಐ ಪಾಡ್‌ಕ್ಯಾಸ್ಟ್‌ನಲ್ಲಿ ಮಾಡಿದ ಹೇಳಿಕೆಗಳ ಕುರಿತು ಸ್ವತಂತ್ರ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸುವಂತೆ ಸಿಟಿಜನ್ ರೈಟ್ಸ್ ಫೌಂಡೇಶನ್ (ಸಿಆರ್‌ಎಫ್) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಸಿಆರ್‌ಎಫ್ ಅಧ್ಯಕ್ಷ ಕೆ.ಎ. ಪಾಲ್ ಅವರು ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ಮನವಿಯಲ್ಲಿ, ಮಣಿ ಅವರ ಹೇಳಿಕೆಗಳನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದು ಅಥವಾ ಸೂಕ್ತ ಸ್ವತಂತ್ರ ತನಿಖಾ ಸಂಸ್ಥೆಗೆ ಜವಾಬ್ದಾರಿ ವಹಿಸುವಂತೆ ಕೋರಿದ್ದಾರೆ. ‘ಹಿಂದೂ ಟೆರರಿಸಂ’ ಎಂದು ಪ್ರಯತ್ನ ಏಕೆ ನಡೆದಿತ್ತು? ಮುಂಬೈ ದಾಳಿ ಹಿಂದಿನ ಮರ್ಮ ಏನು? ಸಾಧ್ವಿ ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ವಿರುದ್ಧದ ಆರೋಪದ ಹಿಂದಿನ ಪಿತೂರಿ ಯಾರದ್ದು? ಪಾಕಿಸ್ತಾನದ ISI ಜೊತೆ ರಾಜಕೀಯ ಪಕ್ಷದ ನಂಟು ಏನು? ಎಂಬ ಬಗ್ಗೆ ನಿವೃತ್ತ MHA…
Month: July 2026
ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳು ಹಾಗೂ ನಕಲಿ ಖಾತೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್‌ವುಡ್ ನಟಿ ಐಶ್ವರ್ಯ ಸಿಂದೋಗಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳಿಗೆ ನಿರಂತರವಾಗಿ ಅಶ್ಲೀಲ, ಅವಹೇಳನಕಾರಿ ಹಾಗೂ ಮಾನಹಾನಿಕರ ಕಾಮೆಂಟ್‌ಗಳು ಬರುತ್ತಿವೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕೃತ್ಯಕ್ಕೆ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬನೇ ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಹಿಂದೆ ಇದೇ ವ್ಯಕ್ತಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಅದೇ ವ್ಯಕ್ತಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವುದಾಗಿ ಐಶ್ವರ್ಯ ಸಿಂದೋಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಿರುಕುಳ ನೀಡುತ್ತಿರುವ ನಕಲಿ ಖಾತೆಗಳ ಕುರಿತು ಸಮಗ್ರ ತನಿಖೆ…
ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, 178 ತಾಲೂಕುಗಳು ಮಳೆ ಕೊರತೆ ಎದುರಿಸುತ್ತಿವೆ. 158 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದ್ದು, 20 ತಾಲೂಕುಗಳಲ್ಲಿ ಬಹುತೇಕ ಮಳೆಯಾಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿ ಕೇವಲ 40% ನೀರು ಸಂಗ್ರಹವಿದ್ದು, ಸದ್ಯಕ್ಕೆ ಅದನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಅಣೆಕಟ್ಟುಗಳಿಗೆ ಸಮರ್ಪಕ ನೀರು ಬಂದ ಬಳಿಕವೇ ನೀರು ಬಿಡುಗಡೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆ 23%ಕ್ಕೆ ಕುಸಿದಿದೆ. 3,817 ಸಣ್ಣ ನೀರಾವರಿ ಕೆರೆಗಳ ಪೈಕಿ 3,235 ಕೆರೆಗಳಲ್ಲಿ ಹಾಗೂ 32,504 ಜಿಲ್ಲಾ ಪಂಚಾಯಿತಿ ಕೆರೆಗಳ ಪೈಕಿ 27,450 ಕೆರೆಗಳಲ್ಲಿ ಶೇ.50ಕ್ಕಿಂತ ಕಡಿಮೆ ನೀರಿದೆ…
ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಪೂಂಚ್ ಜಿಲ್ಲೆಯ ಸುರಂಕೋಟ್ ತಹಸಿಲ್‌ನ ಬುಫ್ಲಿಯಾಜ್‌ನ ಲೋವರ್ ಮುರ್ರಾ ಪ್ರದೇಶದಲ್ಲಿ ಪ್ರವಾಹದ ಹೊಡೆತಕ್ಕೆ ಸಿಲುಕಿದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಎಂಟು ಮಂದಿಯನ್ನು ಗುರುತಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಪ್ರವಾಹದಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ಮೊಬೈಲ್ ನೆಟ್‌ವರ್ಕ್ ಸೇವೆ ಅಸ್ತವ್ಯಸ್ತಗೊಂಡಿದೆ. ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ, ನಾಗರಿಕ ಆಡಳಿತ ಹಾಗೂ ಸ್ಥಳೀಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೊಘಲ್ ರಸ್ತೆ ಹಾಗೂ ರಾಜೌರಿ–ಪೂಂಚ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.…
ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಮಧ್ಯಪ್ರದೇಶ ಸಂಪುಟ ಅಸ್ತು
ಭೋಪಾಲ್: ಮಧ್ಯಪ್ರದೇಶ ಸಚಿವ ಸಂಪುಟವು ಭಾನುವಾರ ನಡೆದ ವಿಶೇಷ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code – UCC) ಮಸೂದೆಗೆ ಅನುಮೋದನೆ ನೀಡಿದೆ. ಭೋಪಾಲ್ ಸಮೀಪದ ಐತಿಹಾಸಿಕ ಜಗದೀಶಪುರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯದ ಐತಿಹಾಸಿಕ ಪರಂಪರೆ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳನ್ನು ಖಚಿತಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಯುಸಿಸಿ ಯಾವುದೇ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಹಾಗೂ ಎಲ್ಲ ಧರ್ಮಗಳ ಜನರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ಒದಗಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಮಸೂದೆ ಸಿದ್ಧಪಡಿಸುವ ಮೊದಲು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರ್ವಜನಿಕ ಸಮಾಲೋಚನೆ ನಡೆಸಿದೆ ಎಂದು ಮುಖ್ಯಮಂತ್ರಿ…
‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್
ನವದೆಹಲಿ: ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಭಾಗವಾಗಿರುವುದು ತಮ್ಮ ವೃತ್ತಿಜೀವನದ ವಿಶೇಷ ಅನುಭವವಾಗಿದ್ದು, ಈ ಚಿತ್ರದಿಂದ ಹಿಂದಿ ಭಾಷೆ ಕಲಿಯುವ ಅವಕಾಶವೂ ದೊರೆಯಿತು ಎಂದು ನಟ ಯಶ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಚಿತ್ರದ ಭವ್ಯ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರಿಗೆ ಕೃತಜ್ಞತೆ ಸಲ್ಲಿಸಿ, ಈ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಹೇಳಿದರು. ಕಾರ್ಯಕ್ರಮದಲ್ಲಿ ಹಿಂದಿಯಲ್ಲೇ ಮಾತನಾಡಲು ಪ್ರಯತ್ನಿಸಿದ ಯಶ್, “ಇಲ್ಲಿ ಎಲ್ಲರೂ ಹಿಂದಿಯಲ್ಲಿ ಮಾತನಾಡುತ್ತಿದ್ದಾರೆ. ನಾನು ಕೂಡ ಪ್ರಯತ್ನಿಸುತ್ತೇನೆ. ಈ ಪಾತ್ರದ ಮೂಲಕ ನನಗೆ ಹಿಂದಿ ಕಲಿಯುವ ಅವಕಾಶವೂ ಸಿಕ್ಕಿತು” ಎಂದು ಹೇಳಿದರು. ‘ರಾಮಾಯಣ’ ಕೇವಲ ಒಂದು ಸಿನಿಮಾ ಅಲ್ಲ, ಇದು ಭಾರತದ ಕನಸಿನ ಯೋಜನೆ ಎಂದು ಬಣ್ಣಿಸಿದ ಯಶ್, “ಪ್ರಭು ಶ್ರೀರಾಮನ ಕಥೆಯನ್ನು ಜಾಗತಿಕ ಮಟ್ಟದಲ್ಲಿ ತಲುಪಿಸುವ ಒಂದೇ ಉದ್ದೇಶದಿಂದ ನಾವೆಲ್ಲರೂ ಒಂದಾಗಿದ್ದೇವೆ. ಈ ಕನಸಿಗೆ ರೂಪ ನೀಡಿದ…
ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್
ಟೆಹ್ರಾನ್: ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿರುವ ನಡುವೆಯೇ, ಅಮೆರಿಕ ನಡೆಸಿದ ಇತ್ತೀಚಿನ ವೈಮಾನಿಕ ದಾಳಿಯಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಮಿಲಿಟರಿ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ಕಣ್ಗಾವಲು ಕೇಂದ್ರಗಳು, ಶಸ್ತ್ರಾಸ್ತ್ರ ಸಂಗ್ರಹಣಾ ತಾಣಗಳು, ಲಾಜಿಸ್ಟಿಕ್ಸ್ ಮೂಲಸೌಕರ್ಯ ಹಾಗೂ ಸಮುದ್ರ ಕಾರ್ಯಾಚರಣೆಗೆ ಸಂಬಂಧಿಸಿದ ಸೌಲಭ್ಯಗಳ ಮೇಲೆ ದಾಳಿ ನಡೆಸಲಾಗಿದೆ. ಜೋರ್ಡಾನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಅಮೆರಿಕನ್ ಯೋಧರು ಸಾವನ್ನಪ್ಪಿದ ಘಟನೆಗೆ ಪ್ರತಿಯಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಫೆಬ್ರವರಿ 28ರಿಂದ ಆರಂಭವಾದ ಸಂಘರ್ಷದಲ್ಲಿ ಮೃತಪಟ್ಟ ಅಮೆರಿಕದ ಸೇನಾ ಸಿಬ್ಬಂದಿಯ ಸಂಖ್ಯೆ 16ಕ್ಕೆ ಏರಿದೆ ಎಂದು ತಿಳಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 12 ನಾಗರಿಕರು ಮೃತಪಟ್ಟಿದ್ದು, ನೂರಾರು ಮಂದಿ…
ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟ ಸರ್ಕಾರಿ ಆಸ್ಪತ್ರೆಗಳು..! ಏನಿದು ಖದರ್ ಸಾಹೇಬ್ರೇ?
ಬೆಂಗಳೂರು: ಬಡವರಿಗೆ ಆಶಾಕಿರಣವಾಗಬೇಕಿದ್ದ ಸರ್ಕಾರಿ ಆಸ್ಪತ್ರೆಗಳು ಕಾಂಗ್ರೆಸ್ ಸರ್ಕಾರದ ದುರಾಡಳಿತದ ನಡುವೆ ಭ್ರಷ್ಟಾಚಾರದ ತಾಣಗಳಾಗಿ ಮಾರ್ಪಟ್ಟಿವೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಕ್ಷ ಬಿಜೆಪಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಅಫ್ಜಲ್‌ಪುರ ಸರ್ಕಾರಿ ಆಸ್ಪತ್ರೆಯಲ್ಲಿ, ರೋಗಿಗಳಿಗೆ ನೀಡುವ ಹಾಲು, ಮೊಟ್ಟೆ ಮತ್ತು ಊಟದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ ಮತ್ತು ಲೂಟಿ ಮಾಡಲಾಗಿದೆ ಎಂದು ಬಿಜೆಪಿ ದೂರಿದೆ. ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಇಲಾಖೆಯಲ್ಲಿ ಬಡ ರೋಗಿಗಳಿಗೆ ಆಹಾರ ಪೂರೈಕೆಯಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಬಿಜೆಪಿ ಗಮನಸೆಳೆದಿದೆ. ಇದೇ ವೇಳೆ, ‘ತಾವು ಇನ್ನೂ ಏಕೆ ಮೌನವಾಗಿದ್ದೀರಿ? ಆಸ್ಪತ್ರೆಗಳಲ್ಲಿ ರೋಗಿಗಳ ಆಹಾರಕ್ಕೂ ಭದ್ರತೆ ಇಲ್ಲವೇ? ಲೂಟಿಕೋರರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ’ ಎಂದು ಬಿಜೆಪಿ ಪಕ್ಷವು ಯು.ಟಿ.ಖಾದರ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಬಡವರ ಪಾಲಿನ ಆಶಾಕಿರಣವಾಗಬೇಕಿದ್ದ ಸರ್ಕಾರಿ ಆಸ್ಪತ್ರೆಗಳು ಲೂಟಿಕೋರ @INCKarnataka ಸರ್ಕಾರದ…
ಮೇಕೆದಾಟು ಯೋಜನೆ ವಿರೋಧಿಸಿ ಸಂಸತ್‌ನಲ್ಲಿ ಡಿಎಂಕೆ ಹೋರಾಟ; ತುರ್ತು ಚರ್ಚೆಗೆ ಆಗ್ರಹ
ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆ ವಿರೋಧಿಸಿ ಡಿಎಂಕೆ ಸಂಸತ್ತಿನಲ್ಲಿ ಹೋರಾಟ ತೀವ್ರಗೊಳಿಸಿದ್ದು, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಸಲ್ಲಿಸಿ ವಿಷಯದ ಕುರಿತು ತಕ್ಷಣ ಚರ್ಚೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ತುರ್ತು ಸಾರ್ವಜನಿಕ ಮಹತ್ವದ ವಿಚಾರವಾಗಿ ಪರಿಗಣಿಸಿ, ಇತರ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಡಿಎಂಕೆ ಆಗ್ರಹಿಸಿದೆ. ಕಾವೇರಿ ಜಲ ವಿವಾದ ನ್ಯಾಯಮಂಡಳಿ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಎಂಕೆ ಪುನರುಚ್ಚರಿಸಿದೆ. ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆಯನ್ನು ಮುಂದುವರಿಸಬಾರದು ಎಂದು ಪಕ್ಷವು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಆಗ್ರಹಿಸಿದೆ. ಲೋಕಸಭೆಯಲ್ಲಿ ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿ.ಆರ್. ಬಾಲು ಸ್ಪೀಕರ್‌ಗೆ ಸಲ್ಲಿಸಿದ ನೋಟಿಸ್‌ನಲ್ಲಿ, ಕರ್ನಾಟಕವು ಏಕಪಕ್ಷೀಯವಾಗಿ ಮೇಕೆದಾಟು ಯೋಜನೆಯನ್ನು ಮುಂದುವರಿಸಿದರೆ ತಮಿಳುನಾಡಿನ ನೀರಿನ ಹಕ್ಕುಗಳಿಗೆ…
ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿ, ಚೆನ್ನಮ್ಮ ಅವರ ಸರಳತೆ, ವಿನಮ್ರತೆ ಹಾಗೂ ಸಾಮಾಜಿಕ ಸೇವೆಯ ಮನೋಭಾವವನ್ನು ಸ್ಮರಿಸಿದ್ದಾರೆ. ಬಳಿಕ ದೇವೇಗೌಡರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವೈಯಕ್ತಿಕವಾಗಿ ಸಂತಾಪ ಸೂಚಿಸಿದ್ದು, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ದೇವೇಗೌಡರ ದೀರ್ಘ ರಾಜಕೀಯ ಜೀವನದಲ್ಲಿ ಚೆನ್ನಮ್ಮ ಅವರು ಸದಾ ಬೆನ್ನೆಲುಬಾಗಿ ನಿಂತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಕುಟುಂಬದ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇವೇಗೌಡರ…
