ಮತ್ತೆ ದೇಶವ್ಯಾಪಿ ಪ್ರತಿಭಟನೆ: ರಣಕಹಳೆ ಮೊಳಗಿಸಿದ ಸಿಜೆಪಿ

ನವದೆಹಲಿ: ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವ ಹಾಗೂ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆಯನ್ನು ಸರ್ಕಾರ ಈಡೇರಿಸದಿದ್ದರೆ ದೇಶಾದ್ಯಂತ ಮತ್ತೆ ಶಾಂತಿಯುತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಚ್ಚರಿಕೆ ನೀಡಿದೆ. ಟೈಫಾಯಿಡ್‌ಗೆ ಚಿಕಿತ್ಸೆ ಪಡೆಯುತ್ತಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ವಿದ್ಯಾರ್ಥಿಗಳಿಗೆ ಪೊಲೀಸರಿಂದ ಕಿರುಕುಳ ಮುಂದುವರಿದರೆ ಪಕ್ಷವು ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸಲಿದೆ. ಸರ್ಕಾರ ವಿದ್ಯಾರ್ಥಿಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಭಿಜೀತ್ ದೀಪ್ಕೆ ಅವರು X ನಲ್ಲಿ ಹಾಕಿರುವ ಪೋಸ್ಟ್ ಹೀಗಿದೆ: “If the harassment of students at the hands of the police continues, the Cockroach Janta Party will respond with a massive peaceful protest soon. The Govt must stop targeting and…

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

ಬೆಂಗಳೂರು: ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಮಳೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಸೂಚಿಸಿರುವಷ್ಟು ನೀರನ್ನು ಹರಿಸುವುದು ಪ್ರಸ್ತುತ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ನೀರು ಬಿಡುವಂತೆ ಸೂಚಿಸಲಾಗಿದ್ದರೂ, ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹ ತೀರಾ ಕಡಿಮೆಯಿದೆ. ಈ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಚರ್ಚಿಸಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮುಂಗಾರು ಹಂಗಾಮಿನಲ್ಲಿ ಕಾವೇರಿ ಕಣಿವೆಯ ಜಲಾಶಯಗಳ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಶೇಕಡಾ 42.8 ರಷ್ಟು ಮಳೆ ಅಭಾವ ದಾಖಲಾಗಿದೆ. ಜೂನ್ ತಿಂಗಳ ಆರಂಭದಲ್ಲಿ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಹರಿದು ಬಂದ…

ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶ, ಪ್ರತಿಪಕ್ಷ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ಈ ಆದೇಶ ಹೊರಬಿದ್ದಿದ್ದು, ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಕಾವೇರಿ ನಿರ್ವಹಣಾ ಪ್ರಾಧಿಕಾರದ ನಿಯಮಗಳಿಗೆ ಬದ್ಧರಾಗಿರುವುದಾಗಿ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ಸಿಡಬ್ಲ್ಯುಆರ್‌ಸಿ ತೀರ್ಮಾನವನ್ನು “ವಿಚಿತ್ರ ನಿರ್ಧಾರ” ಎಂದು ಟೀಕಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಿಲ್ಲದಿರುವುದು ಹಾಗೂ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಕೊರತೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಸಮಂಜಸವಲ್ಲ ಎಂದು ಅವರು ಹೇಳಿದ್ದಾರೆ. ಕೋರ್ಟ್ ಹಾಗೂ ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯದ ಪರವಾಗಿ ಸಮರ್ಪಕ ಅಂಕಿ-ಅಂಶಗಳೊಂದಿಗೆ ಸರ್ಕಾರ ವಾದ ಮಂಡಿಸುವಲ್ಲಿ…

ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

ಹನೂರು: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಹಣ ಎಣಿಕೆ ಬುಧವಾರ ಪೂರ್ಣಗೊಂಡಿದ್ದು, ಕಳೆದ 41 ದಿನಗಳ ಅವಧಿಯಲ್ಲಿ ₹3,37,06,956 ನಗದು ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ 58 ಗ್ರಾಂ ಚಿನ್ನ ಹಾಗೂ 1 ಕೆಜಿ 250 ಗ್ರಾಂ ಬೆಳ್ಳಿ ವಸ್ತುಗಳನ್ನು ಭಕ್ತರು ಹುಂಡಿಗೆ ಸಮರ್ಪಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯಿರುವ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಿ. ಪುರುಷೋತ್ತಮ್ ಹಾಗೂ ಸಾಲೂರು ಬೃಹನ್ ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಮಂಗಳವಾರ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ನಿಗಾದಲ್ಲಿ ಹಣ ಎಣಿಕೆ ಕಾರ್ಯ ಆರಂಭಗೊಂಡು ಬುಧವಾರ ಸಂಜೆ ಪೂರ್ಣಗೊಂಡಿತು. ಸರ್ಕಾರಿ ರಜೆಗಳು, ಅಮಾವಾಸ್ಯೆ ವಿಶೇಷ ಪೂಜೆ, ಜಾತ್ರಾ ಮಹೋತ್ಸವ ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಮಹಿಳಾ ಭಕ್ತರ ಸಂಖ್ಯೆಯಲ್ಲಿ…

ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ: ಕತಾರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿ ಪೂರ್ಣಗೊಳಿಸಿದ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ಆತ್ಮೀಯ ಹಾಗೂ ಭಾವಪೂರ್ಣ ಬೀಳ್ಕೊಡುಗೆ ನೀಡಿತು. ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರ (ICC), ಭಾರತೀಯ ಸಮುದಾಯ ಕಲ್ಯಾಣ ವೇದಿಕೆ (ICBF), ಭಾರತೀಯ ಕ್ರೀಡಾ ಕೇಂದ್ರ (ISC) ಹಾಗೂ ಭಾರತೀಯ ಉದ್ಯಮ ಮತ್ತು ವೃತ್ತಿಪರರ ಮಂಡಳಿ (IBPC) ಜಂಟಿಯಾಗಿ ಆಯೋಜಿಸಿತ್ತು. ಸಮಾರಂಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಗಣ್ಯರು ವಿಪುಲ್ ಅವರನ್ನು ‘ಪೀಪಲ್ಸ್ ಅಂಬಾಸಿಡರ್’ ಎಂದು ಗೌರವಿಸಿ, ಭಾರತೀಯ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿದ ಅವರ ಸೇವೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಪುಲ್, ಕತಾರ್‌ನಲ್ಲಿರುವ 8.3 ಲಕ್ಷಕ್ಕೂ ಅಧಿಕ ಭಾರತೀಯ ಸಮುದಾಯ ವಿಶ್ವದ ಅತ್ಯಂತ ಶಿಸ್ತಿನ ಸಮುದಾಯಗಳಲ್ಲಿ ಒಂದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ಅಧಿಕಾರಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ…

ರಾಜ್ಯದ 13 ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆಗೆ ಸಿಎಂ ಒತ್ತಾಯ: ನವದೆಹಲಿಯಲ್ಲಿಸಂಸದರ ಜೊತೆ ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿ, ಕೇಂದ್ರ ಸರ್ಕಾರದ ಅನುಮೋದನೆ ಮತ್ತು ಅನುದಾನಕ್ಕಾಗಿ ಬಾಕಿ ಇರುವ ರಾಜ್ಯದ 13 ಪ್ರಮುಖ ಯೋಜನೆಗಳು ಹಾಗೂ ವಿಧೇಯಕಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ 15ನೇ ಹಣಕಾಸು ಆಯೋಗದಡಿ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗಬೇಕಿರುವ ₹2,186.20 ಕೋಟಿ ಅನುದಾನ, ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ (STRR) ಯೋಜನೆಯ ₹9,613 ಕೋಟಿ ಮೌಲ್ಯದ ಬಾಕಿ ಕಾಮಗಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ, ಬೆಂಗಳೂರು ಉಪನಗರ ರೈಲು ಯೋಜನೆಗೆ 153 ರೈಲ್ವೆ ಕೋಚ್‌ಗಳ ಖರೀದಿ ಅನುಮೋದನೆ, ಹಾಗೂ ಕೋಲಾರ ರೈಲ್ವೆ ಕೋಚ್ ಕಾರ್ಖಾನೆ ಯೋಜನೆ ಜಾರಿಗೊಳಿಸುವ ಕುರಿತು ಒತ್ತಾಯಿಸಲಾಯಿತು. ಇದೇ ವೇಳೆ ಹೆಚ್‌ಎಎಲ್ ವಿಮಾನ ನಿಲ್ದಾಣವನ್ನು ವಾಣಿಜ್ಯ ಬಳಕೆಗೆ ಪುನರಾರಂಭಿಸುವುದು, ಸಾಗರಮಾಲಾ 2.0 ಯೋಜನೆಯಡಿ ₹16,561 ಕೋಟಿ ಮೌಲ್ಯದ…

ಅಕ್ರಮ ಮರಳು ದಂಧೆಗೆ ಅಂಕುಶ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಣೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ದೇಶನದ ಮೇರೆಗೆ ಡಿಜಿ & ಐಜಿಪಿ ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಅಕ್ರಮ ಮರಳು ದಂಧೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿಯಷ್ಟೇ ಅಲ್ಲ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಗಂಭೀರ ಸವಾಲು ಎಂದು ಗೃಹ ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಸುತ್ತೋಲೆಯ ಪ್ರಕಾರ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸಬೇಕು. ಅಕ್ರಮ ಸಾಗಣೆ, ಸಂಗ್ರಹಣೆ ತಡೆದು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವ…

ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸಿದ ‘ಜಂಗಲ್ ಜರ್ನಿ 2026’

ಮಂಗಳೂರು: ಯುವಜನರಲ್ಲಿ ಪರಿಸರ ಸಂರಕ್ಷಣೆ ಮತ್ತು ಅರಣ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ “ಜಂಗಲ್ ಜರ್ನಿ 2026” ಎಂಬ ಒಂದು ದಿನದ ವಿಶೇಷ ಕಾರ್ಯಕ್ರಮವನ್ನು ಭಾರತೀಯ ಕ್ಯಾಥೋಲಿಕ ಯುವ ಸಂಚಲನ (ICYM) ಸಂತ ಜಾನ್ ಪೌಲ್ ICYM ವಲಯ, ಕರ್ನಾಟಕ ಅರಣ್ಯ ಇಲಾಖೆ, ವನ ಚಾರಿಟಬಲ್ ಟ್ರಸ್ಟ್, CASK ಸೆಂಟಿನರಿ ಟ್ರಸ್ಟ್ ಹಾಗೂ MIJARC ಸಹಯೋಗದಲ್ಲಿ ಕಾಂತಾವರ ಅರಣ್ಯ ಪ್ರದೇಶದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಕುಂದಾಪುರ ವಲಯದ ಮಾರ್ಗದರ್ಶನದಲ್ಲಿ ಅರಣ್ಯ ಬೀಟ್ ಅಧಿಕಾರಿ ಚಂದ್ರಶೇಖರ್ ಅವರು ಅರಣ್ಯ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮತ್ತು ಪರಿಸರ ರಕ್ಷಣೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು. ಕಾಂತಾವರ ಫಾರೆಸ್ಟ್ ಬೇಸ್ ಕ್ಯಾಂಪ್‌ನಲ್ಲಿ ಅರುಣ್ ಅವರು ಅರಣ್ಯದ ಮಹತ್ವ, ಪ್ರಸ್ತುತ ಅರಣ್ಯಗಳ ಸ್ಥಿತಿ ಹಾಗೂ ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿಯ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಒಟ್ಟು 67 ಯುವಜನರು…

ಆಗಸ್ಟ್‌ 1ರಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಮೈಸೂರಿನಲ್ಲಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಭೇಟಿ ನೀಡಿ, ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕವು, ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಸ್ಥಳದಲ್ಲಿ ನಿರ್ಮಾಣಗೊಂಡಿದ್ದು, ಯುವಜನ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಸಭಾಂಗಣದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ವಿಶೇಷ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್ದಾರೆ. ಪ್ರಧಾನಿ…

ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ 1.12 ಲಕ್ಷಕ್ಕೂ ಹೆಚ್ಚು ಶಿಕ್ಷಣ ಸಾಲ ಮಂಜೂರು: ಕೇಂದ್ರ

ನವದೆಹಲಿ: ನವೆಂಬರ್ 2024ರಲ್ಲಿ ಆರಂಭವಾದ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯಡಿ ಇದುವರೆಗೆ 1.12 ಲಕ್ಷಕ್ಕೂ ಹೆಚ್ಚು ಮೇಲಾಧಾರ-ಮುಕ್ತ ಹಾಗೂ ಖಾತರಿ-ಮುಕ್ತ ಶಿಕ್ಷಣ ಸಾಲಗಳು ಮಂಜೂರಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಶಿಕ್ಷಣ ಸಚಿವಾಲಯದ ಪ್ರಕಾರ, ನವೆಂಬರ್ 6, 2024ರಿಂದ ಜುಲೈ 21, 2026ರವರೆಗೆ ಒಟ್ಟು 1,12,817 ಶಿಕ್ಷಣ ಸಾಲಗಳು ಮಂಜೂರಾಗಿದ್ದು, ಅವುಗಳ ಒಟ್ಟು ಮೌಲ್ಯ ₹15,634.78 ಕೋಟಿ ಆಗಿದೆ. ಉನ್ನತ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ (QHEIs) ಅರ್ಹತೆ ಆಧಾರಿತ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಮೇಲಾಧಾರ ಮತ್ತು ಖಾತರಿಯಿಲ್ಲದ ಶಿಕ್ಷಣ ಸಾಲ ದೊರೆಯಲಿದೆ. ವಾರ್ಷಿಕ ₹8 ಲಕ್ಷದವರೆಗೆ ಆದಾಯ ಹೊಂದಿರುವ ಕುಟುಂಬಗಳ ವಿದ್ಯಾರ್ಥಿಗಳು ₹10 ಲಕ್ಷದವರೆಗಿನ ಸಾಲದ ಮೇಲೆ 3% ಬಡ್ಡಿ ಸಬ್ಸಿಡಿ ಪಡೆಯಲು ಅರ್ಹರಾಗಿರುತ್ತಾರೆ. 2024-25ರಿಂದ 2030-31ರವರೆಗೆ ಯೋಜನೆಗಾಗಿ ₹3,600 ಕೋಟಿ ಮೀಸಲಿಡಲಾಗಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ದೊರೆಯಲಿದೆ. ಫೆಬ್ರವರಿ 25, 2025ರಿಂದ…