ಪಶುವೈದ್ಯಕೀಯ ಇಲಾಖೆ ನೇಮಕಾತಿ ಹಗರಣ ಬಗ್ಗೆ ಸಿಬಿಐ ತನಿಖೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿಯಲ್ಲಿ ಸುಮಾರು ₹800 ಕೋಟಿ ಮೊತ್ತದ ಡೀಲ್ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳು ಹುದ್ದೆ ಪಡೆಯಲು ವಿಫಲವಾಗಿದ್ದು, ಹಣ ನೀಡಿ ಅಕ್ರಮವಾಗಿ ಹುದ್ದೆ ಪಡೆದಿರುವ ಆರೋಪಗಳಿವೆ ಎಂದು ಹೇಳಿದರು. ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶ್ರೇಯಾಂಕ ಪಡೆದ ವಿದ್ಯಾರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 350ಕ್ಕೂ ಹೆಚ್ಚು ಅಂಕ ಗಳಿಸಲು ಸಾಧ್ಯವಾಗಿಲ್ಲ. ಆದರೆ ವಿಶ್ವವಿದ್ಯಾಲಯದಲ್ಲಿ ಸಾಧಾರಣ ಅಂಕ ಪಡೆದ ಕೆಲ ಅಭ್ಯರ್ಥಿಗಳು ಕೆಪಿಎಸ್‌ಸಿ ಪರೀಕ್ಷೆಯಲ್ಲಿ 400ಕ್ಕೂ ಹೆಚ್ಚು ಅಂಕ ಗಳಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇದರಿಂದ ಹುದ್ದೆಗಳ ಮಾರಾಟ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಈ ಪ್ರಕರಣದಲ್ಲಿ ಇಲಾಖಾ…

ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಬೈಠಕ್; ಜನಸಂಖ್ಯಾ ನೀತಿ, ಸಮಾನ ನಾಗರಿಕ ಸಂಹಿತೆ ಜಾರಿಗೆ ಆಗ್ರಹ

ಸಮಾಲ್ಖಾ (ಹರಿಯಾಣ): ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಕಾರ್ಯಕಾರಿಣಿ ಹಾಗೂ ಪ್ರತಿನಿಧಿ ಮಂಡಲದ ಪ್ರಥಮ ಅರ್ಧವಾರ್ಷಿಕ ಬೈಠಕ್ ಭಾನುವಾರ ಹರಿಯಾಣದ ಸಮಾಲ್ಖಾದಲ್ಲಿ ಸಮಾರೋಪಗೊಂಡಿತು. ಜುಲೈ 24ರಿಂದ ನಡೆದ ಮೂರು ದಿನಗಳ ಸಭೆಯಲ್ಲಿ ಸಮಿತಿಯ ಪ್ರಮುಖ ಸಂಚಾಲಕಿ ಮಾ. ಶಾಂತಾಕುಮಾರಿ, ಅಖಿಲ ಭಾರತ ಪ್ರಮುಖ ಕಾರ್ಯವಾಹಿಕಾ ಮಾ. ಸೀತಾ ಗಾಯತ್ರಿ ಸೇರಿದಂತೆ 40 ಪ್ರಾಂತಗಳಿಂದ 488 ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಫೆಬ್ರವರಿ 2026ರಿಂದ ಇದುವರೆಗೆ ನಡೆದ ಸಂಘಟನಾ ಚಟುವಟಿಕೆಗಳ ಪರಿಶೀಲನೆ ನಡೆಸಲಾಯಿತು. ಕಳೆದ ಆರು ತಿಂಗಳಲ್ಲಿ ಸಂಘಟನೆಯ ಕಾರ್ಯವ್ಯಾಪ್ತಿ ವಿಸ್ತರಿಸಿದ್ದು, ಪ್ರಸ್ತುತ 852 ಜಿಲ್ಲೆಗಳಲ್ಲಿ 4,886 ಶಾಖೆಗಳು, 1,173 ಮಿಲನಗಳು ಹಾಗೂ 1,332 ಸೇವಾ ಕಾರ್ಯಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಲಾಯಿತು. ಸಮಿತಿಯ ಸ್ಥಾಪನೆಯ 90 ವರ್ಷಗಳ ಹಿನ್ನೆಲೆಯಲ್ಲಿ ಕಾರ್ಯವಿಸ್ತರಣೆ, ಸಾಮಾಜಿಕ ಪರಿಸ್ಥಿತಿ, ಮಹಿಳೆಯರು ಹಾಗೂ ಯುವಜನರು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳ ಪರಿಹಾರಗಳ ಕುರಿತು ಚರ್ಚೆ…

ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿರುವ ವಾರ್ಷಿಕ ಆದಾಯದ ಮಿತಿಯನ್ನು ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪಡಿತರ ಕಾರ್ಡ್‌ಗಳ ಪರಿಶೀಲನೆ ನಡೆಯುತ್ತಿದ್ದು, ಯಾವುದೇ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನರ್ಹ ಕಾರ್ಡ್‌ಗಳನ್ನು ಮಾತ್ರ ಎಪಿಎಲ್‌ಗೆ ವರ್ಗಾಯಿಸಲಾಗುವುದು ಎಂದರು. ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ 4.42 ಕೋಟಿ ಫಲಾನುಭವಿಗಳಿಗೆ 10 ಕೆಜಿ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದ ಸಚಿವರು, ಕಾಳಸಂತೆಯನ್ನು ತಡೆಯಲು ಗೋದಾಮುಗಳಲ್ಲಿ ಸಿಸಿಟಿವಿ ಹಾಗೂ ಪಡಿತರ ಸಾಗಣೆ ವಾಹನಗಳಲ್ಲಿ ಜಿಪಿಎಸ್ ವ್ಯವಸ್ಥೆ ಅಳವಡಿಸಲಾಗಿದೆ ಎಂದರು. ಅಕ್ರಮ ತಡೆಗಾಗಿ 1,497 ಎಫ್‌ಐಆರ್‌ ದಾಖಲಿಸಿ, ಸುಮಾರು ₹50 ಕೋಟಿ ಮೌಲ್ಯದ ಪಡಿತರ ವಶಪಡಿಸಿಕೊಳ್ಳಲಾಗಿದೆ ಎಂದು…

‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಮಂಡ್ಯ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಪಡೆಯುವ ನಿರ್ಧಾರವನ್ನು ಬಹಿರಂಗಪಡಿಸಿದರು. ಆದರೆ, ಬೆಂಬಲಿಗರು “ಇನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕು” ಎಂದು ಒತ್ತಾಯಿಸಿದರು. ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸುದೀರ್ಘವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದರಿಂದ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. “ನನಗೆ ಈಗ 79 ವರ್ಷ. ಸರ್ಕಾರದ ಅವಧಿ ಮುಗಿಯುವ ವೇಳೆಗೆ 81-82 ವರ್ಷ ವಯಸ್ಸಾಗಿರುತ್ತದೆ. ಹಿಂದಿನಂತೆ ಆರೋಗ್ಯ ಮತ್ತು ಉತ್ಸಾಹ ಇರುವುದಿಲ್ಲ. 2028ರ ವೇಳೆಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಮಯ ಬಂದಿದೆ” ಎಂದು ಅವರು ಹೇಳಿದ್ದಾರೆ. 1978ರಲ್ಲಿ ತಾಲೂಕು ಮಂಡಳಿ ಸದಸ್ಯರಾಗಿ ರಾಜಕೀಯ…

ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

ಚೆನ್ನೈ: ನಿರ್ದೇಶಕ ವೆಂಕಿ ಅಟ್ಲೂರಿ ಅವರ ಬಹುನಿರೀಕ್ಷಿತ ಆಕ್ಷನ್-ಫ್ಯಾಮಿಲಿ ಎಂಟರ್‌ಟೈನರ್ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’ ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಮದುವೆ ಸಂಭ್ರಮವನ್ನು ಬಿಂಬಿಸುವ ಈ ಹಾಡಿನಲ್ಲಿ ನಟ ಸೂರ್ಯ ಮತ್ತು ಮಮಿತಾ ಬೈಜು ಅವರ ನೃತ್ಯ ಪ್ರಮುಖ ಆಕರ್ಷಣೆಯಾಗಿದೆ. ವಿಶೇಷವೆಂದರೆ, ಈ ಹಾಡಿಗೆ ಸೂರ್ಯ ಅವರೇ ಧ್ವನಿ ನೀಡಿದ್ದು, ಹಾಡಿಗೆ ಮತ್ತಷ್ಟು ವಿಶೇಷತೆ ತಂದಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸಿದ್ದು, ಕೆನ್ ಕರುಣಾಸ್ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸೂರ್ಯ ಹಾಡಿರುವ ಬಗ್ಗೆ ಜೂನ್ ತಿಂಗಳಲ್ಲೇ ಜಿ.ವಿ. ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಬ್ಲಾಕ್‌ಬಸ್ಟರ್ ನಿರ್ದೇಶಕ ವೆಂಕಿ ಅಟ್ಲೂರಿ ನಿರ್ದೇಶಿಸಿರುವ ಈ ಚಿತ್ರವನ್ನು ಸೂರ್ಯದೇವರ ನಾಗ ವಂಶಿ ಮತ್ತು ಸಾಯಿ ಸೌಜನ್ಯ ನಿರ್ಮಿಸಿದ್ದಾರೆ. ಭಾವನೆ, ಹಾಸ್ಯ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ…

ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

ಚೆನ್ನೈ: ನಿರ್ದೇಶಕ ಶಹದ್ ಅವರ ಬಹುನಿರೀಕ್ಷಿತ ಮಲಯಾಳಂ ತನಿಖಾ ಥ್ರಿಲ್ಲರ್ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. 11 ಐಕಾನ್ಸ್ ಫಿಲ್ಮ್ ಪ್ರೊಡಕ್ಷನ್ಸ್ ಸಂಸ್ಥೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, “ಎಫ್‌ಐಆರ್ ದಾಖಲಾಗಿದೆ, ಶೀಘ್ರದಲ್ಲೇ ಚಾರ್ಜ್‌ಶೀಟ್ ಬರಲಿದೆ” ಎಂಬ ಟ್ಯಾಗ್‌ಲೈನ್ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಮೋಷನ್ ಪೋಸ್ಟರ್‌ನಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಗಂಭೀರ ಭಾವದಲ್ಲಿ ಕಾಣಿಸಿಕೊಂಡಿದ್ದು, ನಟಿ ಪಾರ್ವತಿ ತಿರುವೋತ್ತು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮೂಲಗಳ ಪ್ರಕಾರ, ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ಪೊಲೀಸ್ ಅಧಿಕಾರಿಯ ಪತ್ನಿಯಾಗಿ ಬಳಿಕ ಪೊಲೀಸ್ ಇಲಾಖೆಗೆ ಸೇರುವ ಮಹಿಳೆಯ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಮ್ಯಾಥ್ಯೂ ಥಾಮಸ್, ಉನ್ನಿಮಯ ಪ್ರಸಾದ್, ವಿಜಯ ರಾಘವನ್, ಸಿದ್ಧಾರ್ಥ್ ಭರತನ್ ಮತ್ತು ಅಜೀಸ್ ನೆಡುಮಂಗಡ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಪ್ರಕಾಶನ್ ಪರಕ್ಕಟ್ಟೆ’ ಖ್ಯಾತಿಯ ಶಹದ್ ನಿರ್ದೇಶಿಸಿರುವ ಈ ಚಿತ್ರದ ಕಥೆಯನ್ನು ಪಿ.ಎಸ್.…

ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

ಬೆಂಗಳೂರು: ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಕುರಿತು ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ನೇತೃತ್ವದ ನಿಯೋಗ ಆಗಸ್ಟ್ 3ರಂದು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದಶಕಗಳಿಂದ ಮುಂದುವರಿದಿರುವ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಘರ್ಷದ ಬದಲು ಸಂವಾದವೇ ಶಾಶ್ವತ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಳೆಯ ಕೊರತೆ ಇರುವ ವರ್ಷಗಳಲ್ಲಿ ಜಲಾಶಯಗಳಲ್ಲಿನ ನೈಜ ನೀರಿನ ಸಂಗ್ರಹವನ್ನು ಆಧರಿಸಿ ವೈಜ್ಞಾನಿಕ ಹಾಗೂ ನ್ಯಾಯಸಮ್ಮತ ‘ಡಿಸ್ಟ್ರೆಸ್ ಶೇರಿಂಗ್’ (Distress Sharing Formula) ಸೂತ್ರವನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೊತೆಗೆ, ಬೆಂಗಳೂರು ಸೇರಿದಂತೆ ಕರ್ನಾಟಕದ ನಗರಗಳ ಹಾಗೂ ತಮಿಳುನಾಡಿನ…

ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

ಬೆಂಗಳೂರು: ದೇಶದ ವಿದ್ಯಾರ್ಥಿಗಳ ಮತ್ತು ಯುವ ಜನಾಂಗದ ಐತಿಹಾಸಿಕ ಪ್ರತಿಭಟನೆಯ ನಂತರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಶಿಕ್ಷಣ ಸಚಿವರ ರಾಜಿನಾಮೆಯನ್ನು ರಾಜಕೀಯ ಕಾರಣಗಳಿಗೆ ಹೋಲಿಕೆ ಮಾಡಲು ಹೋಗಿ ಕರ್ನಾಟಕ ಬಿಜೆಪಿ ಬಾಲ ಭವನದ ಅಧ್ಯಕ್ಷ ವಿಜಯೇಂದ್ರ ಅವರು ತಮ್ಮ ವ್ಯಕ್ತಿತ್ವಕ್ಕೆ ತಾವೇ ಮಸಿ ಬಳಿದುಕೊಂಡಿರುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ವಿಜಯೇಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು, ರಾಜಕೀಯ ಹೇಳಿಕೆ ನೀಡುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ಗೃಹ ಸಚಿವರಾದ ಪ್ರಿಯಾಂಕ ಖರ್ಗೆ ರವರ ಹೆಸರುಗಳನ್ನು ಬಳಸಿಕೊಂಡು ಟೀಕೆ ಮಾಡುವ ನೆಪದಲ್ಲಿ ತಾವೇ ಬೆತ್ತಲಾಗಿರುತ್ತಾರೆ ಎಂದು ವಿಜಯೇಂದ್ರ ಬಗ್ಗೆ ಲೇವಡಿ ಮಾಡಿದ್ದಾರೆ. ದೇಶದ 11 ವರ್ಷಗಳ ಕೇಂದ್ರ ಬಿಜೆಪಿ…

‘ಕೈ’ ಪಾಳಯದಲ್ಲಿ ಕ್ಷಿಪ್ರ ವಿದ್ಯಮಾನ; ‘ಹೈ’ ಒಪ್ಪಿದರೆ ಬುಧವಾರವೇ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತ ಮಹತ್ವದ ಚರ್ಚೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ಸೋಮವಾರ ಸಂಜೆ 6 ಗಂಟೆಗೆ ದೆಹಲಿಗೆ ಪಕ್ಷದ ಹೈಕಮಾಂಡ್ ಕರೆದಿದೆ. ಆಗಸ್ಟ್ ಮೊದಲ ವಾರದಲ್ಲಿ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮತ್ತಷ್ಟು ಮುಂದೂಡದಿರಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಸಚಿವ ಸಂಪುಟ ವಿಸ್ತರಣೆ ಯಾವುದೇ ಕ್ಷಣದಲ್ಲಿ ನಡೆಯಬಹುದು ಎಂದು ಈಗಾಗಲೇ ಸೂಚನೆ ನೀಡಿದ್ದರು. ಪ್ರಾದೇಶಿಕ ಸಮತೋಲನ ಹಾಗೂ ಜಾತಿವಾರು ಸಮೀಕರಣಗಳನ್ನು ಪರಿಗಣಿಸಿ ಸಚಿವರ ಪಟ್ಟಿಯನ್ನು ರಾಜ್ಯ ನಾಯಕರು ಸಿದ್ಧಪಡಿಸಿದ್ದು, ಅದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಂತಿಮ ಒಪ್ಪಿಗೆ ಮಾತ್ರ ಬಾಕಿಯಿದೆ. ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕೆಂಬ ರಾಹುಲ್ ಗಾಂಧಿ ಅವರ ಸಲಹೆಯ ಹಿನ್ನೆಲೆಯಲ್ಲಿ ಅಂತಿಮ…

ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿತ್ರದುರ್ಗದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಡಳಿತ, ನೇಮಕಾತಿ ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ವೇಗಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ ಎಲ್ಲ ನೇಮಕಾತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಪ್ರಶ್ನೆ ಪತ್ರಿಕೆಗಳಿಗೆ ಬಿಗಿ ಭದ್ರತೆ ಹಾಗೂ ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯ ದಾಖಲಾತಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಹೊಸ ಬೋರ್‌ವೆಲ್ ಕೊರೆಯುವಿಕೆ, ದುರಸ್ತಿ ಮತ್ತು ವಿದ್ಯುತ್ ಸಂಪರ್ಕದ ಎಲ್ಲ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕಾಪಾಡುವಂತೆ ಸೂಚಿಸಿರುವ ಅವರು, ಬೋರ್‌ವೆಲ್‌ಗಳ ಆಳವನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಿ ಅಕ್ರಮಗಳಿಗೆ ಕಡಿವಾಣ…