ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಶಾಶ್ವತವಾದ ಸಂಕಷ್ಟ ಪರಿಹಾರ ಸೂತ್ರ ಜಾರಿಯಾಗಲೇಬೇಕು. ಇಲ್ಲದಿದ್ದರೆ ರಾಜ್ಯದ ಹಾಗೂ ರೈತರ ಹಿತವನ್ನು ಕಾಪಾಡುವುದು ಕಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯ ಸಂದರ್ಭಗಳಲ್ಲಿ ಕಾವೇರಿ ನೀರಿನ ಹಂಚಿಕೆ ಕುರಿತು ಆಗಾಗ ವಿವಾದ ಉಂಟಾಗುತ್ತಿದ್ದು, ಇದಕ್ಕೆ ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರ ಕಂಡುಹಿಡಿಯುವುದು ಅನಿವಾರ್ಯ ಎಂದು ಹೇಳಿದರು. ರಾಜ್ಯದಲ್ಲಿ ಎಲ್-ನೀನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗಿದ್ದು, ಕುಡಿಯುವ ನೀರಿನ ಭದ್ರತೆಗೆ ಮೊದಲ ಆದ್ಯತೆ ನೀಡಬೇಕು. ಇದಕ್ಕಾಗಿ ಕನಿಷ್ಠ 40 ಟಿಎಂಸಿ ನೀರನ್ನು ಕಾಯ್ದಿರಿಸುವ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು. ಇದೇ ವೇಳೆ, ಕೊಡಗು ಮತ್ತು ವಯನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಬಿನಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗಿವೆ. ಈ…

‘ಮುಂದಿನ 100 ಭಾನುವಾರ ನಶಾ ಮುಕ್ತ ಭಾರತಕ್ಕಾಗಿ’; ರಾಷ್ಟ್ರವ್ಯಾಪಿ ಯುವ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

ನವದೆಹಲಿ: ಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣದ ಗುರಿಯೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ‘ನಶಾ ಮುಕ್ತ ಯುವ ಫಾರ್ ವಿಕ್ಷಿತ್ ಭಾರತ್ ಸಂಕಲ್ಪ ಅಭಿಯಾನ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಧಿಕೃತ ಚಾಲನೆ ನೀಡಿದರು. ದೇಶದ 28 ಸಾವಿರಕ್ಕೂ ಹೆಚ್ಚು ಸ್ಥಳಗಳಿಂದ ಒಂದು ಕೋಟಿಗೂ ಅಧಿಕ ಯುವಕರು ವರ್ಚುವಲ್‌ ಮೂಲಕ ಭಾಗವಹಿಸಿ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆ ಸ್ವೀಕರಿಸಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಅಭಿಯಾನವು ಕೇವಲ ಮಾದಕ ವ್ಯಸನದ ವಿರುದ್ಧದ ಹೋರಾಟವಲ್ಲ, ಕುಟುಂಬ, ಸಮಾಜ ಮತ್ತು ದೇಶದ ಭವಿಷ್ಯವನ್ನು ಸುರಕ್ಷಿತಗೊಳಿಸುವ ರಾಷ್ಟ್ರೀಯ ಚಳುವಳಿಯಾಗಿದೆ ಎಂದು ಹೇಳಿದರು. 2047ರ ವೇಳೆಗೆ ವಿಕ್ಷಿತ್ ಭಾರತ ನಿರ್ಮಾಣದ ಗುರಿ ಸಾಕಾರಗೊಳ್ಳಬೇಕಾದರೆ ದೈಹಿಕವಾಗಿ ಸದೃಢ, ಮಾನಸಿಕವಾಗಿ ಬಲಿಷ್ಠ ಹಾಗೂ ವ್ಯಸನ ಮುಕ್ತ ಯುವಜನರ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು. “ಮುಂದಿನ 100 ಭಾನುವಾರಗಳು ನಶಾ…

ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

ವಾಷಿಂಗ್ಟನ್/ಟೆಹ್ರಾನ್: ಟೆಹ್ರಾನ್ ಹಾಗೂ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳ ಮನವಿಯ ಹಿನ್ನೆಲೆಯಲ್ಲಿ ಇರಾನ್ ಮೇಲಿನ ಯೋಜಿತ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಟ್ರೂತ್ ಸೋಷಿಯಲ್‌ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ರಾಜತಾಂತ್ರಿಕ ಮಾತುಕತೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಸೇನೆ ಅಗತ್ಯವಿದ್ದರೆ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದ್ದರೂ, ಸಂಭಾವ್ಯ ಒಪ್ಪಂದದ ಹಿನ್ನೆಲೆಯಲ್ಲಿ ದಾಳಿಯನ್ನು ಮುಂದೂಡಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಪ್ರಸ್ತಾವಿತ ಒಪ್ಪಂದದಲ್ಲಿ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವುದು ಹಾಗೂ ಇರಾನ್‌ನ ಪರಮಾಣು ಬೆದರಿಕೆಗೆ ಅಂತ್ಯ ಹಾಡುವ ಕ್ರಮಗಳು ಸೇರಿವೆ ಎಂದು ಅವರು ಹೇಳಿದ್ದಾರೆ. ಇಸ್ರೇಲ್ ಈ ರಾಜತಾಂತ್ರಿಕ ಪ್ರಯತ್ನಕ್ಕೆ ಬೆಂಬಲ ನೀಡಿದೆ ಎಂದು ಟ್ರಂಪ್ ಹೇಳಿಕೊಂಡಿದ್ದರೂ, ಈ ಬಗ್ಗೆ ಇರಾನ್ ಅಥವಾ ಇಸ್ರೇಲ್ ಯಾವುದೇ ಅಧಿಕೃತ ದೃಢೀಕರಣ ನೀಡಿಲ್ಲ. ಇದಕ್ಕೂ ಮುನ್ನ ಟ್ರಂಪ್, ಮಾತುಕತೆಗಳು ಫಲ ನೀಡದಿದ್ದರೆ…

‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

ನವದೆಹಲಿ/ವಾಷಿಂಗ್ಟನ್: 1960ರ ಸಿಂಧೂ ಜಲ ಒಪ್ಪಂದ (IWT)ವನ್ನು ಸೌಹಾರ್ದತೆ ಮತ್ತು ಸ್ನೇಹದ ಮನೋಭಾವದಲ್ಲಿ ಮಾಡಲಾಗಿದ್ದರೂ, ಪಾಕಿಸ್ತಾನ ತನ್ನ ನಿರಂತರ ಭಯೋತ್ಪಾದನಾ ಚಟುವಟಿಕೆಗಳಿಂದ ಅದರ ಮೂಲ ಉದ್ದೇಶವನ್ನೇ ಹಾಳು ಮಾಡಿದೆ ಎಂದು ಅಮೆರಿಕದಲ್ಲಿನ ಭಾರತದ ರಾಯಭಾರಿ ವಿನಯ್ ಕ್ವಾತ್ರಾ ಹೇಳಿದ್ದಾರೆ. ನ್ಯೂಸ್‌ವೀಕ್‌ನಲ್ಲಿ ಪ್ರಕಟವಾದ ಲೇಖನದಲ್ಲಿ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಒಪ್ಪಂದವನ್ನು ಅಮಾನತುಗೊಳಿಸಿರುವುದು ಅಂತರರಾಷ್ಟ್ರೀಯ ಕಾನೂನಿನಡಿ ಸಮರ್ಥನೀಯ ಕ್ರಮ ಎಂದು ಪ್ರತಿಪಾದಿಸಿದ್ದಾರೆ. ಒಪ್ಪಂದದ ಪ್ರಕಾರ, ಭಾರತಕ್ಕೆ ಪೂರ್ವದ ಮೂರು ನದಿಗಳ ನೀರಿನ ಬಳಕೆ ಹಾಗೂ ಪಾಕಿಸ್ತಾನಕ್ಕೆ ಪಶ್ಚಿಮದ ಮೂರು ನದಿಗಳ ಹೆಚ್ಚಿನ ನೀರಿನ ಹಕ್ಕು ದೊರೆತಿದ್ದರೂ, ಭಾರತ ಹಲವು ದಶಕಗಳ ಕಾಲ ಒಪ್ಪಂದವನ್ನು ಗೌರವಿಸಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಭಾರತೀಯ ಸಂಸತ್‌, ಮುಂಬೈ, ಉರಿ, ಪಠಾಣ್‌ಕೋಟ್ ಹಾಗೂ ಪಹಲ್ಗಾಮ್ ಸೇರಿದಂತೆ ಅನೇಕ ಭಯೋತ್ಪಾದಕ ದಾಳಿಗಳ ಮೂಲಕ ಪಾಕಿಸ್ತಾನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಆರೋಪಿಸಿದ್ದಾರೆ.…

ಕಾವೇರಿ ವಿಚಾರದಲ್ಲಿ ರೈತರ ಪರ ಸರ್ಕಾರ ದೃಢ; ಕರ್ನಾಟಕ ಬಂದ್ ಕೈಬಿಡುವಂತೆ ಸಿಎಂ ಮನವಿ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರ ಮತ್ತು ರಾಜ್ಯದ ಜನರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಾವೇರಿ ವಿಚಾರವಾಗಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಏಳೂವರೆ ಕೋಟಿ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ನೀಡಿದ್ದು, ಈ ನಿರ್ಧಾರ ರಾಜ್ಯಕ್ಕೆ ಸಂಕಷ್ಟ ತಂದಿತ್ತು. ತಮಿಳುನಾಡು 9.5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು. ಆದರೆ ಇತ್ತೀಚಿನ ಉತ್ತಮ ಮಳೆಯಿಂದ ಪರಿಸ್ಥಿತಿ ಸುಧಾರಿಸಿದ್ದು, ಕಬಿನಿಗೆ 24 ಸಾವಿರ ಕ್ಯೂಸೆಕ್ ಹಾಗೂ ಕೆಆರ್‌ಎಸ್‌ಗೆ 22 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಈವರೆಗೆ ಕೇವಲ…

ಸೌಹಾರ್ದಯುತ ಪರಿಹಾರವೇ ಆದ್ಯತೆ: ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆಯಲ್ಲಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದವನ್ನು ಸಂಘರ್ಷದ ಮೂಲಕವಲ್ಲ, ಸೌಹಾರ್ದಯುತ ಮಾತುಕತೆಯ ಮೂಲಕವೇ ಬಗೆಹರಿಸುವುದು ರಾಜ್ಯ ಸರ್ಕಾರದ ಆದ್ಯತೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಹಾಗೂ ಕುಡಿಯುವ ನೀರಿನ ಭದ್ರತೆಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಮಾತುಕತೆಗೆ ಸಿದ್ಧತೆ ವ್ಯಕ್ತಪಡಿಸಿದ್ದರೂ, ಕಾವೇರಿ ಪರಿಸ್ಥಿತಿ ಸುಧಾರಿಸಿದ ಬಳಿಕ ಸಭೆ ನಡೆಸಲು ತಿಳಿಸಲಾಗಿದೆ ಎಂದು ಅವರು ಹೇಳಿದರು. ಕೊಡಗು ಸೇರಿದಂತೆ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಸುಧಾರಿಸುತ್ತಿದ್ದು, ರಾಜ್ಯದಲ್ಲಿ ಪ್ರಸ್ತುತ ಸುಮಾರು 57 ಟಿಎಂಸಿ ನೀರು ಲಭ್ಯವಿದೆ ಎಂದರು. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡು 9.9 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು. ಇದನ್ನು ಪರಿಗಣಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ…

“ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕರ್ನಾಟಕದ ಜನರ ಹಿತಾಸಕ್ತಿ, ಕುಡಿಯುವ ನೀರಿನ ಅಗತ್ಯ ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ಗೌರವಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕಾವೇರಿ ನದಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ಜೀವನಾಡಿಯಾಗಿದ್ದು, ಯಾವುದೇ ವಿವಾದವನ್ನು ರಾಜಕೀಯ ದೃಷ್ಟಿಕೋನದಿಂದ ನೋಡದೆ ಪರಸ್ಪರ ಸಹಕಾರದಿಂದ ಪರಿಹರಿಸಬೇಕು ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದ ರೈತರು, ನಾಗರಿಕರು ಹಾಗೂ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮೇಕೆದಾಟು ಯೋಜನೆ ಜಾರಿಗೊಳಿಸುವುದು ರಾಜ್ಯದ ಹಕ್ಕು ಎಂದು ಅವರು ಪ್ರತಿಪಾದಿಸಿದ್ದಾರೆ. “ಕರ್ನಾಟಕ ಮತ್ತು ತಮಿಳುನಾಡು ಪರಸ್ಪರ ಗೌರವ ಮತ್ತು ಸದ್ಭಾವನೆಯೇ ನಮ್ಮ ಸಂಬಂಧದ ಅಡಿಪಾಯವಾಗಿ ಸಹೋದರ ರಾಜ್ಯಗಳಂತೆ ಬದುಕಿವೆ. ಕೋಟ್ಯಂತರ ತಮಿಳರು ಕರ್ನಾಟಕವನ್ನು, ವಿಶೇಷವಾಗಿ ಬೆಂಗಳೂರನ್ನು…

ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನೇತ್ರಾವತಿ ನದಿಯ ನೀರಿನ ಹರಿವು ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ತ್ರಿವೇಣಿ ಸಂಗಮ, ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ನೀರಿನಲ್ಲಿ ಮುಳುಗಿದ್ದು, ಭಾಗಮಂಡಲ–ತಲಕಾವೇರಿ ರಸ್ತೆ ಸಹ ಜಲಾವೃತಗೊಂಡಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈಓವರ್ ಮೂಲಕ ಸಂಚರಿಸುತ್ತಿದ್ದಾರೆ. ಇತ್ತ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕಬಿನಿಯಿಂದ ನೀರು ಬಿಡುಗಡೆ ಪ್ರಮಾಣವನ್ನು 25 ಸಾವಿರ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ. ಈ ಹಿಂದೆ 10ರಿಂದ 12 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿತ್ತು. ಒಳಹರಿವು…

ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

ಮಂಗಳೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಇಟ್ಟುಕೊಂಡು ಸೇವೆಗಾಗಿ‌ ಸಂಭಾಷಣೆ ಎಂಬ ಕಲ್ಪನೆಯ ಮೂಲಕ ಆರಂಭಗೊಂಡ ವೀರಕೇಸರಿ ಬೆಳ್ತಂಗಡಿ ಸಂಘಟನೆ ಕಳೆದ 10 ವರ್ಷ 2 ತಿಂಗಳುಗಳಲ್ಲಿ 210 ಸೇವಾಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ನೊಂದ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಮೂಲಕ ಯಶಸ್ವಿ 10 ನೇ ವರ್ಷದ ಪಯಣದಲ್ಲಿ 6 ಕುಟುಂಬಗಳಿಗೆ ನೆರವಾಗುವ ಮೂಲಕ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಉತ್ಸಾಹವಿದ್ದರೆ, ಏನನ್ನಾದರೂ ಸಮಾಜಕ್ಕೆ ಮಾಡಬೇಕು ಎಂಬುವ ಹಂಬಲವಿದ್ದರೆ ಒಂದು ವೇದಿಕೆ ಬೇಕು ಹಾಗೆ ಅದು ಹಲವಾರು ತರುಣರ ಮನಸೆಳೆಯಬೇಕು ವೇದಿಕೆ ಬಳಿಸೇರಿದ ತರುಣರ ಹೃದಯ ಪರಿಪೂರ್ಣವಾಗಿರಬೇಕು ಆಗಮಾತ್ರ ಗೊಂದಲ, ಅಡೆತಡೆಗಳಿಲ್ಲದೆ ಅದರ ಯಶಸ್ಸು ಸಾದ್ಯ ಎಂಬುದಕ್ಕೆ ‘ವೀರಕೇಸರಿ ಬೆಳ್ತಂಗಡಿ’ ಸಂಘಟನೆ ಸಾಕ್ಷಿಯಾಗಿದೆ. ‘ಕಟ್ಟುವೆವು ನಾವು ಹೊಸದು ನಾಡೊಂದನ್ನ ರಸದ ಬೀಡೊಂದನ್ನ ಬಿಸಿ ನೆತ್ತರು ಉಕ್ಕುಕ್ಕಿ ಹರಿಯುವ ಮುನ್ನ ಕಟ್ಟುವೆವು ನಾವು ಹೊಸದು ನಾಡೊಂದನ್ನು…

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ; ಇವರೇ ಸಂಭಾವ್ಯ ಸಚಿವರು?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ ನೂತನ ಸಚಿವರ ಪ್ರಮಾಣವಚನ ಸಮಾರಂಭ ಸಾಧ್ಯತೆಗಳಿದ್ದು, ಸರ್ಕಾರ ಮತ್ತು ಕಾಂಗ್ರೆಸ್ ನಾಯಕತ್ವ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿವೆ. ಸುಮಾರು 20 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹೈಕಮಾಂಡ್ ಭಾನುವಾರ ಸಂಜೆ ಅಥವಾ ಸೋಮವಾರ ಬೆಳಿಗ್ಗೆ ಅಂತಿಮ ಪಟ್ಟಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಪಟ್ಟಿಯೊಂದಿಗೆ ಬೆಂಗಳೂರಿಗೆ ಆಗಮಿಸಲಿದ್ದು, ಅವರೊಂದಿಗೆ ಕೊನೆಯ ಹಂತದ ಸಮಾಲೋಚನೆ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಲೋಕಭವನದಲ್ಲಿ ಸೋಮವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕೆ ಸಂಭಾವ್ಯರ ಪಟ್ಟಿಯಲ್ಲಿ ಅಜಯ್ ಧರ್ಮಸಿಂಗ್, ಯಶವಂತರಾಯಗೌಡ ಪಾಟೀಲ, ಟಿ. ರಘುಮೂರ್ತಿ,…