ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರು, ಪಬ್‌ಗಳಲ್ಲಿ ಗಲಾಟೆ ನಡೆಸಿದವರು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ವಿಫಲರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್‌ ಮಾಡಿರುವ ವಿಜಯೇಂದ್ರ, “ಎರಡು ತಿಂಗಳು ಹೈಕಮಾಂಡ್ ಮನೆಬಾಗಿಲು ಕಾದು, ಭ್ರಷ್ಟಾಚಾರ ಆರೋಪ ಹೊತ್ತವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯದವರಿಗೆ ಮಂತ್ರಿ ಸ್ಥಾನ ನೀಡಿ ರಾಜ್ಯಕ್ಕೆ ಅದ್ಭುತ ಸಚಿವ ಸಂಪುಟ ನೀಡಿದ್ದಾರೆ” ಎಂದು ಟೀಕಿಸಿದ್ದಾರೆ. ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡದಿರುವುದನ್ನು ಪ್ರಶ್ನಿಸಿರುವ ಅವರು, ಮಹಿಳೆಯರ ಪರವಾಗಿ ಮಾತನಾಡುವ ಕಾಂಗ್ರೆಸ್, ಮಹಿಳಾ ಪ್ರಾತಿನಿಧ್ಯದ ವಿಚಾರದಲ್ಲಿ ತನ್ನ ನಿಲುವಿಗೆ ವಿರುದ್ಧವಾಗಿ ನಡೆದುಕೊಂಡಿದೆ…

ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕಾರಣ ಆಗಸ್ಟ್ ಅಂತ್ಯದವರೆಗೆ ಬರ ಘೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಯಮಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಮೂರು ಪ್ರಮುಖ ಜಲಾಶಯಗಳಲ್ಲಿ ಶೇ.90ರಷ್ಟು ನೀರು ಸಂಗ್ರಹವಾಗಿದ್ದು, ಕೆಆರ್‌ಎಸ್‌ ಜಲಾಶಯವೂ ಮುಂದಿನ ಎರಡು-ಮೂರು ದಿನಗಳಲ್ಲಿ ಇದೇ ಮಟ್ಟ ತಲುಪುವ ಸಾಧ್ಯತೆ ಇದೆ ಎಂದು ಹೇಳಿದರು. ಇನ್ನೊಂದೆಡೆ, ಉತ್ತರ ಕರ್ನಾಟಕದ 111 ತಾಲ್ಲೂಕುಗಳಲ್ಲಿ ಕಳೆದ ನಾಲ್ಕು ವಾರಗಳಿಂದ ಒಣಹವೆ ಮುಂದುವರಿದಿದ್ದು, ಮಳೆ ಕೊರತೆಯಿಂದ ಬರದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರು…