ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (MSME) ಸಾಲ ಸೌಲಭ್ಯವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI) 71 ಹೊಸ ಶಾಖೆಗಳನ್ನು ಆರಂಭಿಸಿರುವುದಾಗಿ ತಿಳಿಸಿದೆ. ಜೊತೆಗೆ, ₹2.55 ಲಕ್ಷ ಕೋಟಿ ಹೆಚ್ಚುವರಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ (ECLGS) 5.0 ಜಾರಿಗೊಳಿಸಲಾಗಿದೆ. ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಏಪ್ರಿಲ್ 2024ರಿಂದ ಜುಲೈ 2026ರವರೆಗೆ ಪ್ರಮುಖ MSME ಕ್ಲಸ್ಟರ್‌ಗಳಲ್ಲಿ SIDBI 71 ಹೊಸ ಶಾಖೆಗಳನ್ನು ಆರಂಭಿಸಿದೆ ಎಂದು ತಿಳಿಸಿದ್ದಾರೆ. ಮಾರ್ಚ್ 31, 2026ರ ವೇಳೆಗೆ SIDBIಯ ನೇರ ಸಾಲ ಪೋರ್ಟ್‌ಫೋಲಿಯೊ ಶೇ.36.8ರಷ್ಟು ಏರಿಕೆ ಕಂಡು ₹51,687 ಕೋಟಿಗೆ ತಲುಪಿದ್ದು, ಮರುಹಣಕಾಸು (Refinance) ಪೋರ್ಟ್‌ಫೋಲಿಯೊ ಶೇ.16.9ರಷ್ಟು ಹೆಚ್ಚಳಿ ₹4.5 ಲಕ್ಷ ಕೋಟಿಗೆ…
Day: August 5, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ
ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆಗಳ ಸರಣಿಯೂ ಆರಂಭವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬುಧವಾರ ಬಂದ್‌ಗೆ ಕರೆ ನೀಡಲಾಗಿದೆ. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬಾಗೇಪಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಬಂದ್‌ಗೆ ಸುಬ್ಬಾರೆಡ್ಡಿ ಅವರ ನೇರ ಬೆಂಬಲವಿಲ್ಲ, ಸಾರ್ವಜನಿಕರ ಅಸಮಾಧಾನದಿಂದಲೇ ಪ್ರತಿಭಟನೆ ನಡೆಯುತ್ತಿದೆ ಎಂದು ಬೆಂಬಲಿಗರು ತಿಳಿಸಿದ್ದಾರೆ. ಇತ್ತ…
2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ
ನವದೆಹಲಿ: 2014ರಿಂದ 2026ರ ಜೂನ್‌ವರೆಗೆ ಕನಿಷ್ಠ ಬೆಂಬಲ ಬೆಲೆ (MSP) ವ್ಯವಸ್ಥೆಯಡಿ 12,819 ಲಕ್ಷ ಮೆಟ್ರಿಕ್ ಟನ್ ಕೃಷಿ ಉತ್ಪನ್ನಗಳನ್ನು ಖರೀದಿಸಲಾಗಿದ್ದು, ರೈತರಿಗೆ ಒಟ್ಟು ₹27.8 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್, ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (CACP) ಶಿಫಾರಸುಗಳು, ರಾಜ್ಯ ಸರ್ಕಾರಗಳು ಹಾಗೂ ಸಂಬಂಧಿತ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಪ್ರತಿವರ್ಷ 22 ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 2018-19ರ ಕೇಂದ್ರ ಬಜೆಟ್ ಘೋಷಣೆಯಂತೆ, ಎಲ್ಲ MSPಗಳನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸುವ ನೀತಿಯನ್ನು ಸರ್ಕಾರ ಮುಂದುವರಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಅಂಕಿ-ಅಂಶಗಳ ಪ್ರಕಾರ, 2021-22ರಿಂದ 2026ರ ಜೂನ್‌ವರೆಗೆ ಮಾತ್ರ…
ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು
ನವದೆಹಲಿ: ದೇಶಾದ್ಯಂತ ಆಯುಷ್ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ 2014-15ರಿಂದ 2025-26ರವರೆಗೆ ರಾಷ್ಟ್ರೀಯ ಆಯುಷ್ ಮಿಷನ್ (NAM) ಅಡಿಯಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ₹6,406.99 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸಾರ್ವಜನಿಕ ಆರೋಗ್ಯವು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಒಳಪಡುವ ವಿಷಯವಾಗಿದ್ದು, ಹೊಸ ಆಯುಷ್ ಕಾಲೇಜುಗಳು, ಸಂಯೋಜಿತ ಆಸ್ಪತ್ರೆಗಳು ಹಾಗೂ ಇತರೆ ಆರೋಗ್ಯ ಮೂಲಸೌಕರ್ಯಗಳನ್ನು ಸ್ಥಾಪಿಸುವ ಜವಾಬ್ದಾರಿ ರಾಜ್ಯಗಳದ್ದಾಗಿದೆ ಎಂದು ಆಯುಷ್ ಸಚಿವಾಲಯ ಸ್ಪಷ್ಟಪಡಿಸಿದೆ. ಆದರೆ, ರಾಜ್ಯಗಳು ತಮ್ಮ ರಾಜ್ಯ ವಾರ್ಷಿಕ ಕ್ರಿಯಾ ಯೋಜನೆಗಳ (SAAPs) ಮೂಲಕ ಸಲ್ಲಿಸುವ ಪ್ರಸ್ತಾವನೆಗಳ ಆಧಾರದ ಮೇಲೆ ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಯೋಜನೆಯಡಿ ಆಯುಷ್ ಸೇವೆ ಲಭ್ಯವಿಲ್ಲದ ರಾಜ್ಯಗಳಲ್ಲಿ ಹೊಸ ಸರ್ಕಾರಿ ಆಯುಷ್ ಕಾಲೇಜುಗಳ ಸ್ಥಾಪನೆ, 10, 30 ಹಾಗೂ 50 ಹಾಸಿಗೆಗಳ ಸಂಯೋಜಿತ ಆಯುಷ್ ಆಸ್ಪತ್ರೆಗಳ…
‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ
ಬೆಂಗಳೂರು: ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ಖ್ಯಾತ ಖಳನಟ ಪ್ರದೀಪ್ ರಾವತ್ ಅವರು ಆಗಸ್ಟ್ 4ರ ಸಂಜೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿಯನ್ನು ಸಹನಟ ಯಶ್‌ಪಾಲ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಹಿಂದಿ, ಕನ್ನಡ, ತೆಲುಗು, ತಮಿಳು ಸೇರಿದಂತೆ ವಿವಿಧ ಚಿತ್ರರಂಗಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. 1988ರಲ್ಲಿ ಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಧಾರಾವಾಹಿಯಲ್ಲಿ ಅಶ್ವತ್ಥಾಮ ಪಾತ್ರದ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಪ್ರದೀಪ್ ರಾವತ್, 1990ರಲ್ಲಿ ಸಲ್ಮಾನ್ ಖಾನ್ ಅಭಿನಯದ ‘ಬಾಘಿ’ ಚಿತ್ರದ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದರು. ಬಳಿಕ ‘ಲಗಾನ್’ ಚಿತ್ರದಲ್ಲಿ ದೇವ್ ಪಾತ್ರ ಹಾಗೂ ‘ಘಜಿನಿ’ ಚಿತ್ರದಲ್ಲಿ ಘಜಿನಿ ಧರ್ಮಾತ್ಮ ಪಾತ್ರದ ಮೂಲಕ ಭಾರತೀಯ ಚಿತ್ರರಂಗದ ಪ್ರಮುಖ ಖಳನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡರು. ತೆಲುಗಿನ ‘ಸೈ’ ಚಿತ್ರದ ಭಿಕ್ಷು…
