ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

ನ್ಯೂಯಾರ್ಕ್: ಉದ್ಯಮಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಮಾಜಿ ಉದ್ಯೋಗಿ ವಿನೀತ್ ಜೈನ್ ವಿರುದ್ಧ ಅಮೆರಿಕದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಫೆಡರಲ್ ನ್ಯಾಯಾಲಯ ವಜಾಗೊಳಿಸಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ನಿಕೋಲಸ್ ಜಿ. ಗರೌಫಿಸ್ ಅವರು ಅಮೆರಿಕದ ನ್ಯಾಯಾಂಗ ಇಲಾಖೆಯ ಮನವಿ ಮೇರೆಗೆ ಪ್ರಕರಣವನ್ನು ‘ಡಿಸ್ಮಿಸ್ಡ್ ವಿತ್ ಪ್ರಿಜುಡಿಸ್’ ಎಂದು ವಜಾಗೊಳಿಸಿದ್ದಾರೆ. ಇದರೊಂದಿಗೆ ಇದೇ ಆರೋಪಗಳ ಆಧಾರದ ಮೇಲೆ ಪ್ರಕರಣವನ್ನು ಮತ್ತೆ ದಾಖಲಿಸಲು ಅವಕಾಶ ಇರುವುದಿಲ್ಲ. 2024ರ ನವೆಂಬರ್‌ನಲ್ಲಿ ಅಮೆರಿಕದ ಪ್ರಾಸಿಕ್ಯೂಟರ್‌ಗಳು ಅದಾನಿ ಮತ್ತು ಇತರರ ವಿರುದ್ಧ ಭಾರತದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 25 ಕೋಟಿ ಡಾಲರ್ ಲಂಚ ನೀಡುವ ಸಂಚು ರೂಪಿಸಿ ಸೌರ ವಿದ್ಯುತ್ ಯೋಜನೆಗಳ ಗುತ್ತಿಗೆ ಪಡೆಯಲು ಯತ್ನಿಸಿದ ಆರೋಪ ಹೊರಿಸಿದ್ದರು. ಅಮೆರಿಕದ ಮಾರುಕಟ್ಟೆಗಳಲ್ಲಿ 300 ಕೋಟಿ ಡಾಲರ್‌ಗೂ ಹೆಚ್ಚು ಹಣ ಸಂಗ್ರಹಿಸುವಾಗ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪವೂ…

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

ಬೊಗೋಟಾ: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 110ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಕಟ್ಟಡಗಳು ಹಾನಿಗೊಳಗಾಗಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕಂಪದ ತೀವ್ರತೆ ನೆರೆಯ ಈಕ್ವೆಡಾರ್ ಮತ್ತು ಪನಾಮ ದೇಶಗಳಲ್ಲೂ ಅನುಭವವಾಗಿದೆ. ಪೆರೇರಾ, ಕ್ವಿಬ್ಡೊ, ಕಾಲಿ ಹಾಗೂ ಮನಿಜಾಲೆಸ್ ಸೇರಿದಂತೆ ಪಶ್ಚಿಮ ಭಾಗದ ಹಲವು ನಗರಗಳಲ್ಲಿ ಭೂಕಂಪದಿಂದ ಭಾರೀ ಹಾನಿಯಾಗಿದೆ. ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯರು ಅವಶೇಷಗಳ ನಡುವೆ ಸಿಲುಕಿರುವವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡಿರುವವರು ಆತಂಕದಲ್ಲಿ ರಕ್ಷಣಾ ಕಾರ್ಯಾಚರಣೆಯ ಸ್ಥಳಗಳಲ್ಲಿ ಬೀಡುಬಿಟ್ಟಿದ್ದಾರೆ. ರಿಸಾರಾಲ್ಡಾ ಪ್ರದೇಶದಲ್ಲಿ ಕನಿಷ್ಠ 40 ಮಂದಿ, ವ್ಯಾಲೆ ಡೆಲ್ ಕೌಕಾದಲ್ಲಿ 27 ಮಂದಿ, ಚೋಕೋದಲ್ಲಿ 9 ಮಂದಿ ಹಾಗೂ ಕಾಲ್ಡಾಸ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆಂಟಿಯೋಕಿಯಾ ಪ್ರದೇಶದಲ್ಲಿ 73 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಕೊಲಂಬಿಯಾದ ಪೆಸಿಫಿಕ್…

ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳಿರುವ ಆರೋಪಕ್ಕೆ ಪರಮೇಶ್ವರ್ ತಿರುಗೇಟು; ದಾಖಲೆ ಇದ್ದರೆ ಕ್ರಮ

ತುಮಕೂರು: ಕರ್ನಾಟಕದಲ್ಲಿ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ವಾಸಿಸುತ್ತಿದ್ದಾರೆ, ಬೆಂಗಳೂರಿನಲ್ಲೇ 4.5 ಲಕ್ಷ ಮಂದಿ ಇದ್ದಾರೆ ಎಂಬ ಆರೋಪವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಳ್ಳಿಹಾಕಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಅಂಕಿ-ಅಂಶಗಳಿಗೆ ವಿಶ್ವಾಸಾರ್ಹ ದಾಖಲೆ ಮತ್ತು ಅಧಿಕೃತ ಮಾಹಿತಿಯ ಆಧಾರ ಇರಬೇಕು ಎಂದು ಹೇಳಿದರು. “ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದೆ. ಅದರ ಅಂಕಿ-ಅಂಶಗಳಿಂದ 19 ಲಕ್ಷ ಬಾಂಗ್ಲಾದೇಶಿ ಪ್ರಜೆಗಳು ಇರುವುದಾಗಿ ದೃಢಪಟ್ಟರೆ, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಆಧಾರವಿಲ್ಲದೆ ಅಂಕಿ-ಅಂಶಗಳನ್ನು ಹೇಳಲು ಸಾಧ್ಯವಿಲ್ಲ,” ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು. ಬರ ಪರಿಹಾರ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. “ವಿಸ್ತೃತ ವರದಿ ಸಲ್ಲಿಸಿದ ಬಳಿಕವೂ ಕೇಂದ್ರ ಸರ್ಕಾರ ಪರಿಹಾರ ನಿಧಿ ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ ನಡೆಸುತ್ತೇವೆ.…

ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ

ನವದೆಹಲಿ/ರಾಂಚಿ: ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಬಳಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸ್ ಕ್ರಮ ಖಂಡಿಸಿ ಬಿಜೆಪಿ ಆಗಸ್ಟ್‌ 11ರಂದು ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದೆ. ನೇಮಕಾತಿ ಅಕ್ರಮದ ವಿರುದ್ಧ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದಕ್ಕೆ ತೀವ್ರ ರಾಜಕೀಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಪೊಲೀಸ್ ಕ್ರಮವನ್ನು ಖಂಡಿಸಿದ್ದಾರೆ. ಜಾರ್ಖಂಡ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿರುವುದನ್ನು ಖಂಡಿಸಬೇಕು. ವಿದ್ಯಾರ್ಥಿಗಳಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಇಂತಹ ಸಮಸ್ಯೆಗಳನ್ನು…

ನೀಟ್ ಬೆನ್ನಲ್ಲೇ ಜಾರ್ಖಂಡ್ ನೇಮಕಾತಿ ಅಕ್ರಮ ಆರೋಪ: ಪ್ರತಿಭಟನೆ ವೇಳೆ ಘರ್ಷಣೆ; ಬಂದ್‌ಗೆ ಕರೆ

ರಾಂಚಿ: ಜಾರ್ಖಂಡ್‌ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಸಭೆ ಬಳಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಬಿಜೆಪಿ ಆಗಸ್ಟ್‌ 11ರಂದು ಜಾರ್ಖಂಡ್ ಬಂದ್‌ಗೆ ಕರೆ ನೀಡಿದೆ. ನೇಮಕಾತಿ ಅಕ್ರಮದ ವಿರುದ್ಧ ಕಳೆದ ಒಂಬತ್ತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಎಲ್‌ಕೆಎಂ ನಾಯಕ ದೇವೇಂದ್ರ ನಾಥ್ ಮಹ್ತೊ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ತೀವ್ರವಾಗಿ ಕುಸಿದಿದ್ದು, ಸದ್ಯ ರಾಂಚಿ ಸದರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಅಧಿಕಾರಿ ನ್ಯಾನ್ಸಿ ಪ್ರಿಯಾ ತಿಳಿಸಿದ್ದಾರೆ.   ಇದೇ ವೇಳೆ ವಿಧಾನಸಭೆ ಬಳಿ ನಡೆದ ಪೊಲೀಸ್ ಲಾಠಿಚಾರ್ಜ್‌ನಲ್ಲಿ ಮಹ್ತೊ ಅವರ ಸಹಾಯಕ ಪಂಕಜ್ ಕುಮಾರ್ ಗಾಯಗೊಂಡಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಸುಧಾರಣಾ…