ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗ, ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ವೈದ್ಯ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅವರಿಗೆ ಈ ಜವಾಬ್ದಾರಿ ವಹಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲೂ ಸಚಿವ ಸ್ಥಾನದಿಂದ ವಂಚಿತರಾಗಿದ್ದ ದೇಶಪಾಂಡೆ ಅವರಿಗೆ, ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಂಪುಟ ಪುನಾರಚನೆಯಲ್ಲೂ ಸಚಿವ ಸ್ಥಾನ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಂಕಾಳ ವೈದ್ಯಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ನಿರೀಕ್ಷೆಯಲ್ಲಿದ್ದ ಶಾಸಕ ಮಾಂಕಾಳ ವೈದ್ಯ ಅವರ ಹೆಸರನ್ನು ಕೊನೆಯ ಹಂತದಲ್ಲಿ ಕೈಬಿಡಲಾಗಿತ್ತು. ಅವರ ಬದಲಿಗೆ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಸೇರ್ಪಡೆ ಮಾಡಲಾಗಿದೆ. ಇದೀಗ ಮಾಂಕಾಳ ವೈದ್ಯ ಅವರನ್ನು ವಿಧಾನಸಭೆಯ ಉಪಸಭಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ಸಚಿವ ಸ್ಥಾನ ಕೈತಪ್ಪಿದ ಅಸಮಾಧಾನಕ್ಕೆ ಪಕ್ಷದ…

SIR ಪರಿಶೀಲನೆ ಬಳಿಕ 2.41 ಲಕ್ಷ ಮತದಾರರಿಗೆ ಅನುಕೂಲ; 1.08 ಕೋಟಿ ಹೆಸರುಗಳು ASDDO ಪಟ್ಟಿಯಲ್ಲಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು, ಮನೆ-ಮನೆ ಮತದಾರರ ಪರಿಶೀಲನೆಯ ಬಳಿಕ 2.41 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಗೈರುಹಾಜರಿ, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತರು, ನಕಲಿ ಹಾಗೂ ಇತರೆ (ASDDO) ವರ್ಗದಿಂದ ಹೊರಗಿಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬು ಕುಮಾರ್ ತಿಳಿಸಿದ್ದಾರೆ. ಜೂನ್ 30ರಂದು ಆರಂಭವಾಗಿದ್ದ ಮನೆ-ಮನೆ ಪರಿಶೀಲನಾ ಕಾರ್ಯವನ್ನು ಚುನಾವಣಾ ಆಯೋಗ ಆಗಸ್ಟ್ 17ರವರೆಗೆ ವಿಸ್ತರಿಸಿದೆ. ಜೂನ್ 16ರವರೆಗೆ ಮತದಾರರ ಪಟ್ಟಿಯಲ್ಲಿದ್ದ 5.54 ಕೋಟಿ ಮತದಾರರ ಪೈಕಿ 4,45,57,010 ಮಂದಿ, ಅಂದರೆ ಶೇ.80.38ರಷ್ಟು ಜನರು ತಮ್ಮ ಎಣಿಕೆ ನಮೂನೆಗಳನ್ನು ಸಲ್ಲಿಸಿದ್ದಾರೆ. ಇವರ ಹೆಸರುಗಳು ಕರಡು ಮತದಾರರ ಪಟ್ಟಿಯಲ್ಲಿ ಮುಂದುವರಿಯಲಿವೆ ಎಂದು ಸಿಇಒ ಸ್ಪಷ್ಟಪಡಿಸಿದರು. ಉಳಿದ 1,08,75,304 ಮತದಾರರನ್ನು ASDDO ವರ್ಗದಲ್ಲಿ ಗುರುತಿಸಲಾಗಿದೆ. ಇವರಲ್ಲಿ 15,48,757 ಮಂದಿ ಗೈರುಹಾಜರಿ, 65,73,976 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 16,36,673 ಮಂದಿ…